AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಅಥ್ಲೆಟಿಕ್ಸ್​ನಲ್ಲಿ ಕಂಚು ಗೆದ್ದ ಕನ್ನಡತಿ ಪ್ರಿಯಾ ಮೋಹನ್​ಗೆ ಕರ್ನಾಟಕ ಸರ್ಕಾರದಿಂದ 5 ಲಕ್ಷ ರೂ. ಪುರಸ್ಕಾರ ಘೋಷಣೆ

Priya Mohan: ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್​ನಲ್ಲಿ ಭಾರತಕ್ಕೆ ಪದಕ ಲಭಿಸಿತ್ತು. ಆ ತಂಡದಲ್ಲಿ ಕನ್ನಡತಿ ಪ್ರಿಯಾ ಮೋಹನ್ ಸ್ಥಾನ ಪಡೆದಿದ್ದರು. ಪ್ರಿಯಾ ಮೋಹನ್ ಮೂಲತಃ ತುಮಕೂರಿನ ಹಬ್ಬತ್ತನಹಳ್ಳಿಯವರು.

ವಿಶ್ವ ಅಥ್ಲೆಟಿಕ್ಸ್​ನಲ್ಲಿ ಕಂಚು ಗೆದ್ದ ಕನ್ನಡತಿ ಪ್ರಿಯಾ ಮೋಹನ್​ಗೆ ಕರ್ನಾಟಕ ಸರ್ಕಾರದಿಂದ 5 ಲಕ್ಷ ರೂ. ಪುರಸ್ಕಾರ ಘೋಷಣೆ
ಪ್ರಿಯಾ ಮೋಹನ್
TV9 Web
| Edited By: |

Updated on:Aug 28, 2021 | 2:48 PM

Share

ಬೆಂಗಳೂರು: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 20 ರ ವಯೋಮಿತಿಯ ಮಿಶ್ರ ರಿಲೇಯಲ್ಲಿ ಭಾರತ ತಂಡ ಕಂಚಿನ ಪದಕ ಪಡೆದುಕೊಂಡಿತ್ತು. ರಿಲೇ ತಂಡದಲ್ಲಿ ಕರ್ನಾಟಕದ ಪ್ರಿಯಾ ಮೋಹನ್ ಕೂಡ ಇದ್ದರು. ಈ ಹಿನ್ನೆಲೆಯಲ್ಲಿ, ಭಾರತದ ಹೆಮ್ಮೆಯ ಕ್ರೀಡಾಪಟು, ಕನ್ನಡತಿ ಪ್ರಿಯಾ ಮೋಹನ್​ಗೆ ರಾಜ್ಯ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಣೆ ಮಾಡಲಾಗಿದೆ. ಈ ವಿಚಾರವನ್ನು ಕ್ರೀಡಾ ಸಚಿವ ನಾರಾಯಣ ಗೌಡ ಘೋಷಣೆ ಮಾಡಿದ್ದಾರೆ.

ಕರ್ನಾಟಕದ ತುಮಕೂರು ಜಿಲ್ಲೆಯ ಪ್ರಿಯಾ ಮೋಹನ್ ವಿಶ್ವ ಅಥ್ಲೆಟಿಕ್ ಚಾಂಪಿಯನ್​ಶಿಪ್​ನಲ್ಲಿ ಭಾಗವಹಿಸಿದ್ದರು. ಮಿಶ್ರ ರಿಲೇಯಲ್ಲಿ ಭಾಗವಹಿಸಿದ್ದರು. ಭಾರತದ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಅವರಿಗೆ ಕೇಂದ್ರ ಕ್ರೀಡಾ ಇಲಾಖೆಯ ಅಭಿನಂದನೆಯೂ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾ ಮೋಹನ್​ರನ್ನು ದೆಹಲಿ ಕರ್ನಾಟಕ ಭವನದಲ್ಲಿ ಅಭಿನಂದಿಸಿದ್ದರು. ಭಾನುವಾರ (ಆಗಸ್ಟ್ 29) ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಿಯಾ ಮೋಹನ್​ಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾ ದಿನಾಚರಣೆ ಕಾರ್ಯಕ್ರಮಲ್ಲಿ ಸನ್ಮಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

ವಿಶ್ವ ಅಥ್ಲೆಟಿಕ್ಸ್​ನ ಮಿಕ್ಸ್ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಕನ್ನಡತಿ ಪ್ರಿಯಾ ಮೋಹನ್​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಆಗಸ್ಟ್ 25 ರಂದು ಅಭಿನಂದಿಸಿದ್ದರು. ಕಂಚಿನ ಪದಕ ವಿಜೇತ ಓಟಗಾರ್ತಿಗೆ ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಅಭಿನಂದನೆ ಸಲ್ಲಿಸಿದ್ದರು. ಆಗಸ್ಟ್ 18 ರಿಂದ 22 ರ ವರೆಗೆ ನೈರೋಬಿಯಲ್ಲಿ ನಡೆದಿದ್ದ ವಿಶ್ವ ಅಥ್ಲೆಟಿಕ್​ನಲ್ಲಿ ತುಮಕೂರು ಜಿಲ್ಲೆಯ ಹಬ್ಬತ್ತನಹಳ್ಳಿಯ ನಿವಾಸಿ ಪ್ರಿಯಾ ಕಂಚಿನ ಪದಕ ಗೆದ್ದಿದ್ದರು.

ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್​ನಲ್ಲಿ ಭಾರತಕ್ಕೆ ಪದಕ ಲಭಿಸಿತ್ತು. ಆ ತಂಡದಲ್ಲಿ ಕನ್ನಡತಿ ಪ್ರಿಯಾ ಮೋಹನ್ ಸ್ಥಾನ ಪಡೆದಿದ್ದರು. ಪ್ರಿಯಾ ಮೋಹನ್ ಮೂಲತಃ ತುಮಕೂರಿನ ಹಬ್ಬತ್ತನಹಳ್ಳಿಯವರು. ಹೀಗಾಗಿ, ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದರು. ಅದೇ ದಿನ, ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ ಕೂಡ ಪ್ರಿಯಾಗೆ ಅಭಿನಂದನೆ ಸಲ್ಲಿಸಿದ್ದರು. ಭಾರತೀಯ ಅಥ್ಲೆಟಿಕ್ ಫೆಡರೇಶನ್​ನಿಂದ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಅಭಿನಂದನಾ ಸಮಾರಂಭ ನಡೆದಿತ್ತು.

ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಈಗಾಗಲೇ 15 ಚಿನ್ನದ ಪದಕ ಗಳಿಸಿರುವ ಪ್ರಿಯಾ ಮೋಹನ್ ಈಗ ಹೊಸದೊಂದು ಸಾಧನೆ ಮಾಡಿದ್ದಾರೆ. ಕರ್ನಾಟಕಕ್ಕೆ, ಕನ್ನಡಿಗರಿಗೆ ಕೂಡ ಹೆಮ್ಮೆ ಉಂಟುಮಾಡಿದ್ದಾರೆ. ಅವರಿಗೆ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್​ನಲ್ಲಿ ಕಂಚು ಗೆದ್ದ ಕನ್ನಡತಿ ಪ್ರಿಯಾ ಮೋಹನ್​ಗೆ ಬಸವರಾಜ ಬೊಮ್ಮಾಯಿ ಅಭಿನಂದನೆ

ವಿಶ್ವ ಅಂಡರ್-20 ಅಥ್ಲೆಟಿಕ್ಸ್​​​ನಲ್ಲಿ ಸತತವಾಗಿ ಎರಡು ವಿಶ್ವ ದಾಖಲೆ ಸ್ಥಾಪಿಸಿ 110 ಮೀ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಜೋಯಾ

Published On - 2:47 pm, Sat, 28 August 21

Follow Us
Web contact
Web contact

TV9 Kannada

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ