ಬೆಂಗಳೂರು: ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 20 ರ ವಯೋಮಿತಿಯ ಮಿಶ್ರ ರಿಲೇಯಲ್ಲಿ ಭಾರತ ತಂಡ ಕಂಚಿನ ಪದಕ ಪಡೆದುಕೊಂಡಿತ್ತು. ರಿಲೇ ತಂಡದಲ್ಲಿ ಕರ್ನಾಟಕದ ಪ್ರಿಯಾ ಮೋಹನ್ ಕೂಡ ಇದ್ದರು. ಈ ಹಿನ್ನೆಲೆಯಲ್ಲಿ, ಭಾರತದ ಹೆಮ್ಮೆಯ ಕ್ರೀಡಾಪಟು, ಕನ್ನಡತಿ ಪ್ರಿಯಾ ಮೋಹನ್ಗೆ ರಾಜ್ಯ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಣೆ ಮಾಡಲಾಗಿದೆ. ಈ ವಿಚಾರವನ್ನು ಕ್ರೀಡಾ ಸಚಿವ ನಾರಾಯಣ ಗೌಡ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ತುಮಕೂರು ಜಿಲ್ಲೆಯ ಪ್ರಿಯಾ ಮೋಹನ್ ವಿಶ್ವ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿದ್ದರು. ಮಿಶ್ರ ರಿಲೇಯಲ್ಲಿ ಭಾಗವಹಿಸಿದ್ದರು. ಭಾರತದ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಅವರಿಗೆ ಕೇಂದ್ರ ಕ್ರೀಡಾ ಇಲಾಖೆಯ ಅಭಿನಂದನೆಯೂ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾ ಮೋಹನ್ರನ್ನು ದೆಹಲಿ ಕರ್ನಾಟಕ ಭವನದಲ್ಲಿ ಅಭಿನಂದಿಸಿದ್ದರು. ಭಾನುವಾರ (ಆಗಸ್ಟ್ 29) ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಿಯಾ ಮೋಹನ್ಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾ ದಿನಾಚರಣೆ ಕಾರ್ಯಕ್ರಮಲ್ಲಿ ಸನ್ಮಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.
ವಿಶ್ವ ಅಥ್ಲೆಟಿಕ್ಸ್ನ ಮಿಕ್ಸ್ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಕನ್ನಡತಿ ಪ್ರಿಯಾ ಮೋಹನ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಆಗಸ್ಟ್ 25 ರಂದು ಅಭಿನಂದಿಸಿದ್ದರು. ಕಂಚಿನ ಪದಕ ವಿಜೇತ ಓಟಗಾರ್ತಿಗೆ ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಅಭಿನಂದನೆ ಸಲ್ಲಿಸಿದ್ದರು. ಆಗಸ್ಟ್ 18 ರಿಂದ 22 ರ ವರೆಗೆ ನೈರೋಬಿಯಲ್ಲಿ ನಡೆದಿದ್ದ ವಿಶ್ವ ಅಥ್ಲೆಟಿಕ್ನಲ್ಲಿ ತುಮಕೂರು ಜಿಲ್ಲೆಯ ಹಬ್ಬತ್ತನಹಳ್ಳಿಯ ನಿವಾಸಿ ಪ್ರಿಯಾ ಕಂಚಿನ ಪದಕ ಗೆದ್ದಿದ್ದರು.
ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್ನಲ್ಲಿ ಭಾರತಕ್ಕೆ ಪದಕ ಲಭಿಸಿತ್ತು. ಆ ತಂಡದಲ್ಲಿ ಕನ್ನಡತಿ ಪ್ರಿಯಾ ಮೋಹನ್ ಸ್ಥಾನ ಪಡೆದಿದ್ದರು. ಪ್ರಿಯಾ ಮೋಹನ್ ಮೂಲತಃ ತುಮಕೂರಿನ ಹಬ್ಬತ್ತನಹಳ್ಳಿಯವರು. ಹೀಗಾಗಿ, ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದರು. ಅದೇ ದಿನ, ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ ಕೂಡ ಪ್ರಿಯಾಗೆ ಅಭಿನಂದನೆ ಸಲ್ಲಿಸಿದ್ದರು. ಭಾರತೀಯ ಅಥ್ಲೆಟಿಕ್ ಫೆಡರೇಶನ್ನಿಂದ ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ಅಭಿನಂದನಾ ಸಮಾರಂಭ ನಡೆದಿತ್ತು.
ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಈಗಾಗಲೇ 15 ಚಿನ್ನದ ಪದಕ ಗಳಿಸಿರುವ ಪ್ರಿಯಾ ಮೋಹನ್ ಈಗ ಹೊಸದೊಂದು ಸಾಧನೆ ಮಾಡಿದ್ದಾರೆ. ಕರ್ನಾಟಕಕ್ಕೆ, ಕನ್ನಡಿಗರಿಗೆ ಕೂಡ ಹೆಮ್ಮೆ ಉಂಟುಮಾಡಿದ್ದಾರೆ. ಅವರಿಗೆ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ನಲ್ಲಿ ಕಂಚು ಗೆದ್ದ ಕನ್ನಡತಿ ಪ್ರಿಯಾ ಮೋಹನ್ಗೆ ಬಸವರಾಜ ಬೊಮ್ಮಾಯಿ ಅಭಿನಂದನೆ
Published On - 2:47 pm, Sat, 28 August 21