Padma awards 2022: ನೀರಜ್ ಚೋಪ್ರಾ ಸೇರಿದಂತೆ 8 ಮಂದಿ ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಗೌರವ

Padma awards 2022: ನೀರಜ್ ಚೋಪ್ರಾ ಸೇರಿದಂತೆ 8 ಮಂದಿ ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಗೌರವ
Neeraj Chopra

Neeraj Chopra: ಟೋಕಿಯೊ ಒಲಿಂಪಿಕ್​ ಗೇಮ್ಸ್​ನಲ್ಲಿ​  ಪುರುಷರ ಜಾವೆಲಿನ್ ಫೈನಲ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದರು.

TV9kannada Web Team

| Edited By: Zahir PY

Jan 25, 2022 | 9:03 PM

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರಿಗೆ ಪದ್ಮಶ್ರೀ ಪುರಸ್ಕಾರ ಸಂದಿದೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ವಾರ್ಷಿಕವಾಗಿ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಹೆಸರಿನಲ್ಲಿ ಗೌರವಿಸಲಾಗುವ ಈ ಪ್ರಶಸ್ತಿ ಪಟ್ಟಿಯಲ್ಲಿ ಎಂಟು ಭಾರತೀಯ ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಖ್ಯಾತ ಕ್ರೀಡಾಪಟುಗಳಾದ ನೀರಜ್ ಚೋಪ್ರಾ, ಪ್ರಮೋದ್ ಭಗತ್, ಸುಮಿತ್ ಅಂತಿಲ್, ಅವನಿ ಲೆಖರ, ಫೈಸಲ್ ಅಲಿ ದಾರ್, ಶಂಕರನಾರಾಯಣ ಮೆನನ್ ಚುಂಡಾಯಿಲ್, ಬ್ರಹ್ಮಾನಂದ ಸಂಖ್ವಾಲ್ಕರ್, ವಂದನಾ ಕಟಾರಿಯಾ ಪದ್ಮಶ್ರೀ ವಿಭಾಗದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ.

ಇನ್ನು ಕ್ರೀಡಾ ವಿಭಾಗದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ದೇವೇಂದ್ರ ಝಝಾರಿಯಾ ಅವರಿಗೆ ನೀಡಲಾಗಿದೆ. ದೇಶದ ಅತ್ಯಂತ ಯಶಸ್ವಿ ಪ್ಯಾರಾಲಿಂಪಿಕ್ ಅಥ್ಲೀಟ್‌ಗಳಲ್ಲಿ ಒಬ್ಬರಾದ ಝಝಾರಿಯಾ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ದಾಖಲೆ ಬರೆದಿದ್ದರು. ಇದೀಗ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಿದೆ.

ಕ್ರೀಡೆಯಲ್ಲಿ ಪದ್ಮಭೂಷಣ ಪ್ರಶಸ್ತಿ ವಿಜೇತ:

ದೇವೇಂದ್ರ ಝಝಾರಿಯಾ

ಕ್ರೀಡೆಯಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತರು:

ನೀರಜ್ ಚೋಪ್ರಾ ಸುಮಿತ್ ಅಂತಿಲ್ ಪ್ರಮೋದ್ ಭಗತ್ ಅವನಿ ಲೇಖರ ಫೈಸಲ್ ಅಲಿ ದಾರ್ ಶಂಕರನಾರಾಯಣ ಮೆನನ್ ಚುಂಡಾಯಿಲ್ ಬ್ರಹ್ಮಾನಂದ ಸಂಖ್ವಾಲ್ಕರ್ ವಂದನಾ ಕಟಾರಿಯಾ

ಇದಕ್ಕೂ ಮೊದಲು, ಒಲಿಂಪಿಕ್ ಚಾಂಪಿಯನ್ ನೀರಜ್ ಅವರಿಗೆ ಭಾರತ ಸರ್ಕಾರವು ಪರಮ ವಿಶಿಷ್ಟ ಸೇವಾ ಪದಕವನ್ನು ನೀಡಿ ಗೌರವಿಸಿದೆ. ಭಾರತೀಯ ಸೇನೆಯಲ್ಲಿ 4 ರಜಪೂತಾನ ರೈಫಲ್ಸ್‌ನಲ್ಲಿ ಸುಬೇದಾರ್ ಆಗಿರುವ ನೀರಜ್, ಟೋಕಿಯೊ ಒಲಿಂಪಿಕ್​ ಗೇಮ್ಸ್​ನಲ್ಲಿ​  ಪುರುಷರ ಜಾವೆಲಿನ್ ಫೈನಲ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದರು.

ಇದನ್ನೂ ಓದಿ: Ind vs SA: ಭರ್ಜರಿ ಶತಕ ಸಿಡಿಸಿ ಸಚಿನ್, ಸೆಹ್ವಾಗ್ ದಾಖಲೆ ಮುರಿದ ಕ್ವಿಂಟನ್ ಡಿಕಾಕ್

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

Follow us on

Most Read Stories

Click on your DTH Provider to Add TV9 Kannada