AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ

ಕೊರೊನಾ ವೈರಸ್ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್‌ ಪ್ರವಾಸ ಸಲುವಾಗಿ ಪ್ರಕಟಿಸಿದ್ದ ಪಾಕಿಸ್ತಾನದ ತಂಡದ 29 ಆಟಗಾರರಲ್ಲಿ ಇದೀಗ ಒಟ್ಟು 10 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ. ಆಟಗಾರರು ಜೂನ್ 28ರಂದು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಈ ಮೊದಲೇ ಎರಡು ಹಂತಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕಿತ್ತು. ಅದರಂತೆಯೇ ಮೊದಲ ಹಂತದ ತಪಾಸಣೆಯಲ್ಲಿ ಮೂವರು […]

ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 24, 2020 | 9:26 AM

Share

ಕೊರೊನಾ ವೈರಸ್ ತನ್ನ ಕರಾಳ ರೂಪವನ್ನು ತೋರಿಸುತ್ತಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಪಾಕ್‌ ಕ್ರಿಕೆಟ್ ತಂಡದ 10 ಆಟಗಾರರಿಗೆ ಕೊರೊನಾ ದೃಢಪಟ್ಟಿದೆ. ಇಂಗ್ಲೆಂಡ್‌ ಪ್ರವಾಸ ಸಲುವಾಗಿ ಪ್ರಕಟಿಸಿದ್ದ ಪಾಕಿಸ್ತಾನದ ತಂಡದ 29 ಆಟಗಾರರಲ್ಲಿ ಇದೀಗ ಒಟ್ಟು 10 ಮಂದಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ.

ಆಟಗಾರರು ಜೂನ್ 28ರಂದು ಮ್ಯಾಂಚೆಸ್ಟರ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಈ ಮೊದಲೇ ಎರಡು ಹಂತಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕಿತ್ತು. ಅದರಂತೆಯೇ ಮೊದಲ ಹಂತದ ತಪಾಸಣೆಯಲ್ಲಿ ಮೂವರು ಯುವ ಆಟಗಾರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಎರಡನೇ ಹಂತದ ಕೊವಿಡ್ ಟೆಸ್ಟ್​ನಲ್ಲಿ 7 ಆಟಗಾರರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಫಖರ್ ಜಮಾನ್, ಶದಾಬ್ ಖಾನ್, ಹೈದರ್ ಅಲಿ, ಹ್ಯಾರಿಸ್ ರೌಫ್‍, ಇಮ್ರಾನ್ ಖಾನ್, ಕಾಶಿಫ್ ಭಟ್ಟಿ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ರಿಜ್ವಾನ್, ವಹಾಬ್ ರಿಯಾಜ್‌ ಸೇರಿದಂತೆ ಒಟ್ಟು 10 ಮಂದಿಗೆ ಸೋಂಕು ತಗುಲಿದೆ. ಆಗಸ್ಟ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದ್ದ ತಂಡ ಸೋಂಕಿಗೆ ತುತ್ತಾಗಿದೆ.

Published On - 9:26 am, Wed, 24 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!