AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021 | ಭಾರತ ಈ ಕೆಲಸ ಮಾಡದಿದ್ದರೆ ವಿಶ್ವಕಪ್ ಪಂದ್ಯಾವಳಿ ಬೇರೆಡೆಗೆ ಸ್ಥಳಾಂತರಿಸಲು ಒತ್ತಾಯಿಸುತ್ತೇವೆ: ಪಾಕಿಸ್ತಾನ ಕ್ರಿಕೆಟ್ ಮಂಡಳಿ

T20 World Cup 2021: ತಮ್ಮ ತಂಡ, ಅಭಿಮಾನಿಗಳು ಮತ್ತು ಪತ್ರಕರ್ತರಿಗೆ ವೀಸಾ ಸಿಗದಿದ್ದರೆ, ವಿಶ್ವಕಪ್ ಅನ್ನು ಬೇರೆಡೆ ಆಯೋಜಿಸಲು ಒತ್ತಾಯಿಸುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಎಹ್ಸಾನ್ ಮಣಿ ಸ್ಪಷ್ಟಪಡಿಸಿದ್ದಾರೆ

T20 World Cup 2021 | ಭಾರತ ಈ ಕೆಲಸ ಮಾಡದಿದ್ದರೆ ವಿಶ್ವಕಪ್ ಪಂದ್ಯಾವಳಿ ಬೇರೆಡೆಗೆ ಸ್ಥಳಾಂತರಿಸಲು ಒತ್ತಾಯಿಸುತ್ತೇವೆ: ಪಾಕಿಸ್ತಾನ ಕ್ರಿಕೆಟ್ ಮಂಡಳಿ
ಪಾಕಿಸ್ತಾನ ಕ್ರಿಕೆಟ್ ಮಂಡಳಿ
ಪೃಥ್ವಿಶಂಕರ
| Edited By: |

Updated on:Feb 21, 2021 | 3:44 PM

Share

ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನ ಸಂಬಂಧದಿಂದಾಗಿ ಎರಡು ದೇಶಗಳ ನಡುವಿನ ಕ್ರಿಕೆಟ್ ಪಂದ್ಯಾವಳಿಗಳು ಸಹ ನಿಂತುಹೋಗಿವೆ. ಆದರೆ ಐಸಿಸಿ ಪಂದ್ಯಾವಳಿಗಳಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತವೆ. ಈ ವರ್ಷ ನಡೆಯಲಿರುವ ಟಿ-20 ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನದ ಆಟಗಾರರು ಭಾರತಕ್ಕೆ ಭೇಟಿ ನೀಡಲು ವೀಸಾ ಪಡೆಯುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಭಾರತ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ಸ್ಪಷ್ಟ ನಿರ್ಧಾರ ಹೊರಬಂದಿಲ್ಲ. ಆದರೆ, ತಮ್ಮ ತಂಡ, ಅಭಿಮಾನಿಗಳು ಮತ್ತು ಪತ್ರಕರ್ತರಿಗೆ ವೀಸಾ ಸಿಗದಿದ್ದರೆ, ಬೇರೆಡೆ ವಿಶ್ವಕಪ್ ಆಯೋಜಿಸಲು ಒತ್ತಾಯಿಸುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಎಹ್ಸಾನ್ ಮಣಿ ಸ್ಪಷ್ಟಪಡಿಸಿದ್ದಾರೆ.

ಟಿ 20 ವಿಶ್ವಕಪ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆಯಬೇಕಿತ್ತು. ಆದರೆ, ಕೊರೊನಾ ಕಾರಣದಿಂದಾಗಿ ಅದನ್ನು ಐಸಿಸಿ ಮುಂದೂಡಿತ್ತು. ಇದರ ನಂತರ, ಹೊಸ ವೇಳಾಪಟ್ಟಿಯನ್ನು ನಿಗದಿಪಡಿಸಲಾಯಿತು. ಇದರಲ್ಲಿ ಮುಂದೂಡಲ್ಪಟ್ಟ ಟಿ-20 ವಿಶ್ವಕಪ್ ಆಯೋಜಿಸುವ ಜವಾಬ್ದಾರಿಯನ್ನು ಭಾರತಕ್ಕೆ ನೀಡಲಾಯಿತು. ಭಾರತದಲ್ಲಿ, 2022ರಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್ ಆಯೋಜಿಸುವ ಹೊಣೆಯನ್ನು ಆಸ್ಟ್ರೇಲಿಯಾಕ್ಕೆ ಹಸ್ತಾಂತರಿಸಲಾಯಿತು.

ಲಿಖಿತ ಭರವಸೆ ಬೇಕು ಮುಂಬರುವ ಟಿ-20 ವಿಶ್ವಕಪ್‌ಗಾಗಿ ಭಾರತ ತನ್ನ ತಂಡ, ಅಭಿಮಾನಿಗಳು ಮತ್ತು ಪತ್ರಕರ್ತರಿಗೆ ವೀಸಾ ನೀಡುವ ಬಗ್ಗೆ ಲಿಖಿತ ಭರವಸೆ ನೀಡದಿದ್ದರೆ ಅರಬ್ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಪಂದ್ಯಾವಳಿ ನಡೆಸಬೇಕೆಂದು ನಾವು ಐಸಿಸಿಯನ್ನು ಒತ್ತಾಯಿಸುತ್ತೇವೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಎಹ್ಸಾನ್ ಮಣಿ ಹೇಳಿದ್ದಾರೆ. ಲಾಹೋರ್‌ನ ಪಿಸಿಬಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಣಿ, ಬಿಗ್ ತ್ರೀ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದೆ ಎಂದರು.

ರಾಷ್ಟ್ರೀಯ ತಂಡಕ್ಕೆ ಮಾತ್ರವಲ್ಲದೆ ನಮ್ಮ ಅಭಿಮಾನಿಗಳು, ಅಧಿಕಾರಿಗಳು ಮತ್ತು ಪತ್ರಕರ್ತರಿಗೂ ವೀಸಾ ಪಡೆಯಲು ಲಿಖಿತ ಗ್ಯಾರಂಟಿ ಕೇಳುತ್ತಿದ್ದೇವೆ. ಮಾರ್ಚ್ ಅಂತ್ಯದ ವೇಳೆಗೆ ನಮಗೆ ಲಿಖಿತ ಭರವಸೆಬೇಕು ಎಂದು ನಾವು ಐಸಿಸಿಗೆ ತಿಳಿಸಿದ್ದೇವೆ. ಮುಂದೆ ಏನು ಮಾಡಬೇಕೆಂದು ನಮಗೆ ತಿಳಿದಿದೆ. ಇಲ್ಲದಿದ್ದರೆ ನಾವು ವಿಶ್ವಕಪ್ ಅನ್ನು ಭಾರತದ ಬದಲು ಯುಎಇಯಲ್ಲಿ ನಡೆಸಬೇಕೆಂದು ಒತ್ತಾಯಿಸುತ್ತೇವೆ ಎಂದು ಮಣಿ ಹೇಳಿದರು. ಟಿ -20 ವಿಶ್ವಕಪ್ ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿದೆ. ಪಾಕಿಸ್ತಾನದ ಇಡೀ ತಂಡಕ್ಕೆ ಭದ್ರತಾ ವ್ಯವಸ್ಥೆಗಳ ಬಗ್ಗೆ ಬಿಸಿಸಿಐನಿಂದ ಲಿಖಿತ ಭರವಸೆ ಕೂಡ ಬೇಕು ಎಂದು ಅವರು ಹೇಳಿದ್ದಾರೆ.

2007 ರಿಂದ ಪಾಕಿಸ್ತಾನ ತಂಡ ಭಾರತಕ್ಕೆ ಬಂದಿಲ್ಲ.. ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಸಂಬಂಧ ಈ ಮೊದಲೂ ಚೆನ್ನಾಗಿರಲಿಲ್ಲ. ಪಾಕಿಸ್ತಾನದ ತಂಡವು ಭಾರತಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದು 2007 ರಲ್ಲಿ. 2008 ರ ಮುಂಬೈ ದಾಳಿಯ ನಂತರ, 2012-13ರಲ್ಲಿ ಕೇವಲ ಒಂದು ದ್ವಿಪಕ್ಷೀಯ ಸರಣಿಯನ್ನು ಮಾತ್ರ ಆಡಲಾಯಿತು. ಅಂದಿನಿಂದ, ಎರಡೂ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಆದರೆ, ಎರಡೂ ತಂಡಗಳು ಐಸಿಸಿ ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಪರ್ಧಿಸುತ್ತಿವೆ. ಕೊನೆಯ ಬಾರಿಗೆ ಉಭಯ ತಂಡಗಳು ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್​ನಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು.

ಇದನ್ನೂ ಓದಿ: India Cricket Schedule 2021-23: ಭಾರತೀಯ ಸೀನಿಯರ್ ಆಟಗಾರರಿಗೆ ಬಿಡುವಿಲ್ಲದ ಶೆಡ್ಯೂಲ್ ಪ್ರಕಟಿಸಿದ ಬಿಸಿಸಿಐ

Published On - 3:43 pm, Sun, 21 February 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ