ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೇಟ್ ಮಂಡಳಿ ತಿಳಿಸಿದೆ.

ಆಟಗಾರರಿಗೆ ಕೊರೊನಾ ಸೋಂಕು; ಪಾಕಿಸ್ತಾನ ಸೂಪರ್ ಲೀಗ್​ ತಾತ್ಕಾಲಿಕ ಸ್ಥಗಿತ
ಪಾಕಿಸ್ತಾನ ಕ್ರಿಕೇಟ್ ಲೀಗ್​ನ ಟ್ರೋಫಿ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Mar 04, 2021 | 4:51 PM

ಕೊರೊನಾ ಸ್ವಲ್ಪ ಕಡಿಮೆಯಾಯಿತು ಎಂದು ಅಂದುಕೊಳ್ಳುವಷ್ಟರಲ್ಲಿ ವಿಶ್ವದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಸೋಂಕು ನಿಯಂತ್ರಿಸಬೇಕು ಎಂದು ಎಷ್ಟೋ ಪಂದ್ಯಾವಳಿಗಳನ್ನು, ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು, ಮುಂದೂಡಲಾಗಿತ್ತು. ಕೊರೊನಾದಿಂದ ಆದಷ್ಟು ದೂರವಿದ್ದೇ ನಿಧಾನವಾಗಿ ಕ್ರೀಡಾರಂಗ ಚಿಗುರುತ್ತಿದ್ದರೂ, ಪಾಕಿಸ್ತಾನ ಸೂಪರ್ ಲೀಗ್​ಗೆ ಅಡ್ಡಗಾಲಾಗಿ ಪರಿಣಮಿಸಿದೆ.

ಫೆಬ್ರವರಿ 20ರಿಂದಲೇ ಆರಂಭವಾಗಿದ್ದ ಪಾಕಿಸ್ತಾನ ಸೂಪರ್ ಲೀಗ್​ನ್ನು ಸದ್ಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಾತ್ಕಾಲಿಕವಾಗಿ ನಿಲ್ಲಿಸಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಏಳು ಕ್ರಿಕೆಟಿಗರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯಾವಳಿ ಸ್ಥಗಿತಗೊಂಡಿದೆ. ‘ಆಟಗಾರರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪಂದ್ಯಾವಳಿಯನ್ನು ನಿಲ್ಲಿಸಿದ್ದೇವೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೊಳ್ಳಲಿದೆ’ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.

ಮಾರ್ಚ್ 1ರಂದು ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಭಾಗವಹಿಸಿದ್ದ ಇಸ್ಲಾಮಾಬಾದ್ ಯನೈಟೆಡ್ ತಂಡದ ಆಟಗಾರ ಫವಾದ್ ಅಹ್ಮದ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ನಂತರ ಅವರ ಜತೆ ಬೆರೆತ ಆಟಗಾರರಿಗೆ ಕೊರೊನೊ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇದೀಗ ಒಟ್ಟು 7 ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕಾರಣ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರ ಕೈಗೊಂಡಿದೆ.

2020 ಪಾಕಿಸ್ತಾನ ಸೂಪರ್​ ಲೀಗ್ ಸಹ ಕೊರೊನಾ ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಬಾಕಿ ಉಳಿದಿದ್ದ ಮೂರು ಪ್ಲೇ ಆಫ್ ಪಂದ್ಯಗಳು ಮತ್ತು ಫೈನಲ್ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆಯೇ ಆಡಿಸಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ಕರಾಚಿ ಕಿಂಗ್ಸ್​ ಜಯಗಳಿಸಿತ್ತು.

ಇದನ್ನೂ ಓದಿ: ಐಪಿಎಲ್​ ಬಗ್ಗೆ ರೇಜಿಗೆ: ಪಾಕಿಸ್ತಾನ್​ ಸೂಪರ್​​ ಲೀಗ್​ ಆಡೋಕೆ ಹೊರಟ ಆರ್​ಸಿಬಿ ಆಟಗಾರ

ನಾವು ಎಂದಿಗೂ ಶಾಂತಿಯ ಪರ; ಭಾರತ-ಪಾಕಿಸ್ತಾನ ಕದನವಿರಾಮ ಒಪ್ಪಂದ ಸ್ವಾಗತಿಸಿ ಇಮ್ರಾನ್ ಖಾನ್ ಟ್ವೀಟ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ