AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2026: ಏಕೈಕ ಕಂಚಿನ ಪದಕಕ್ಕೆ ತೃಪ್ತಿಪಟ್ಟ ಪಾಕಿಸ್ತಾನ; ಒಲಿಂಪಿಕ್ಸ್ ಹೀರೋ ಅರ್ಷದ್ ನದೀಮ್ ಕಥೆ ಏನಾಯ್ತು?

Pakistan Commonwealth Games performance: ಈ ಬಾರಿಯ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪಾಕಿಸ್ತಾನ ಕಳಪೆ ಪ್ರದರ್ಶನ ತೋರಿದೆ. 21 ಸ್ಪರ್ಧಿಗಳ ಪೈಕಿ ಫಾತಿಮಾ ಜಹ್ರಾ ಮಾತ್ರ ಮಹಿಳಾ ಬಾಕ್ಸಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ದೇಶದ ಮಾನ ಉಳಿಸಿದರು. ಇವರು ಪದಕ ಗೆದ್ದ ಮೊದಲ ಪಾಕಿಸ್ತಾನಿ ಮಹಿಳಾ ಬಾಕ್ಸರ್. ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಸಹ ಪದಕ ಗೆಲ್ಲುವಲ್ಲಿ ವಿಫಲರಾದರು. ಇದು ಕಳೆದ 36 ವರ್ಷಗಳಲ್ಲೇ ಪಾಕಿಸ್ತಾನದ ಅತ್ಯಂತ ಕಳಪೆ ಪ್ರದರ್ಶನವಾಗಿದೆ.

CWG 2026: ಏಕೈಕ ಕಂಚಿನ ಪದಕಕ್ಕೆ ತೃಪ್ತಿಪಟ್ಟ ಪಾಕಿಸ್ತಾನ; ಒಲಿಂಪಿಕ್ಸ್ ಹೀರೋ ಅರ್ಷದ್ ನದೀಮ್ ಕಥೆ ಏನಾಯ್ತು?
Pakistan
ಪೃಥ್ವಿಶಂಕರ
|

Updated on:Aug 03, 2026 | 3:03 PM

Share

ಗ್ಲ್ಯಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಗೇಮ್ಸ್ (Commonwealth Games) ಕ್ರೀಡಾಕೂಟಕ್ಕೆ ಅದ್ಧೂರಿ ತೆರೆಬಿದ್ದಿದೆ. 11 ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಒಟ್ಟು 74 ದೇಶಗಳು ಭಾಗವಹಿಸಿದ್ದವು. ಅದರಲ್ಲಿ ಆಸ್ಟ್ರೇಲಿಯಾ ಅತ್ಯಧಿಕ 171 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೆ, 110 ಪದಕ ಗೆದ್ದ ಇಂಗ್ಲೆಂಡ್​ಗೆ ಎರಡನೇ ಸ್ಥಾನ ಲಭಿಸಿತು. 3ನೇ ಸ್ಥಾನ ಪಡೆದ ಕೆನಡಾ 63 ಪದಕಗಳನ್ನು ಗೆದ್ದರೆ, ಭಾರತ ಒಟ್ಟು 39 ಪದಕಗಳೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿತು. ಕಳೆದ ಆವೃತ್ತಿಗೆ ಹೋಲಿಸಿಕೊಂಡರೆ ಈ ಬಾರಿ ಭಾರತದ ಪ್ರದರ್ಶನ ಕೊಂಚ ನಿರಸವಾಗಿತ್ತು. ಇದಕ್ಕೆ ಕಾರಣ ಈ ಆವೃತ್ತಿಯಲ್ಲಿ ಭಾರತ ಪದಕ ಗೆಲ್ಲುವಂತಹ ಕೆಲವು ಸ್ಪರ್ಧೆಗಳನ್ನು ಕೈಬಿಟ್ಟಿದ್ದು, ಭಾರತದ ಪದಕಗಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿತ್ತು. ಇನ್ನು ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ ಎಷ್ಟು ಪದಕಗಳನ್ನು ಗೆದ್ದಿತು ಎಂಬುದನ್ನು ನೋಡುವುದಾದರೆ.. ಪಾಕಿಸ್ತಾನದ ಪದಕಗಳ ಖಾತೆಗೆ ಬಿದ್ದಿದ್ದು, ಏಕೈಕ ಕಂಚಿನ ಪದಕ ಮಾತ್ರ.

ಕಂಚು ಗೆದ್ದ ಫಾತಿಮಾ ಜಹ್ರಾ

ಈ ಬಾರಿಯ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪಾಕಿಸ್ತಾನದ ಪ್ರದರ್ಶನ ಕಳಪೆಯಾಗಿತ್ತು. ಈ ಕ್ರೀಡಾಕೂಟದಲ್ಲಿ ಪಾಕಿಸ್ತಾನದ ಒಟ್ಟು 21 ಸ್ಪರ್ಧಿಗಳು ಭಾಗವಹಿಸಿದ್ದರು. ಆದರೆ ಪದಕ ಗೆದ್ದಿದ್ದು ಮಾತ್ರ ಏಕೈಕ ಸ್ಪರ್ಧಿ ಮಾತ್ರ. 60ಕೆಜಿ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಮಹಿಳಾ ಬಾಕ್ಸರ್ ಫಾತಿಮಾ ಜಹ್ರಾ ಕಂಚಿನ ಪದಕ ಗೆದ್ದು ಪಾಕಿಸ್ತಾನದ ಮಾನ ಉಳಿಸಿದರು. ಇದರೊಂದಿಗೆ, ಫಾತಿಮಾ ಜಹ್ರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಪಾಕಿಸ್ತಾನಿ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹೀಗಾಗಿಯೇ ಕಾಮನ್‌ವೆಲ್ತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಫಾತಿಮಾ ದೇಶದ ಧ್ವಜಧಾರಿಯಾಗಿದ್ದರು. ಫಾತಿಮಾ ಅವರ ಕಂಚಿನ ಪದಕದಿಂದಾಗಿ ಪಾಕಿಸ್ತಾನ ಪದಕಗಳ ಪಟ್ಟಿಯಲ್ಲಿ ಜಂಟಿಯಾಗಿ 36 ನೇ ಸ್ಥಾನ ಪಡೆದುಕೊಂಡಿತು. ಇನ್ನು ಇಲ್ಲೊಂದು ಗಮನಿಸಬೇಕಾದ ಸಂಗತಿಯೆಂದರೆ ಫಾತಿಮಾ ಜಹ್ರಾ ಕಂಚಿನ ಪದಕ ಗೆದ್ದ ಇದೇ ವಿಭಾಗದಲ್ಲಿ ಭಾರತದ ಮಹಿಳಾ ಬಾಕ್ಸರ್ ಪ್ರಿಯಾ ಘಂಘಾಸ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು.

ಅತ್ಯಂತ ಕಳಪೆ ಪ್ರದರ್ಶನ

ಕಳೆದ 36 ವರ್ಷಗಳಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪಾಕಿಸ್ತಾನದ ಅತ್ಯಂತ ಕಳಪೆ ಪ್ರದರ್ಶನ ಇದಾಗಿದೆ. ಈ ಹಿಂದೆ ಅಂದರೆ 1990 ರ ಆವೃತ್ತಿಯಲ್ಲಿ ಪಾಕಿಸ್ತಾನ ಯಾವುದೇ ಪದಕವನ್ನು ಗೆದ್ದಿರಲಿಲ್ಲ. ಉಳಿದಂತೆ 1998 ರಲ್ಲಿ ಏಕೈಕ ಬೆಳ್ಳಿ ಪದಕವನ್ನು ಗೆದ್ದಿತ್ತು. ಇನ್ನು ಕಳೆದ ಆವೃತ್ತಿಯಲ್ಲಿ ಅಂದರೆ 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪಾಕಿಸ್ತಾನ ಎರಡು ಚಿನ್ನ, ಮೂರು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಒಳಗೊಂಡಂತೆ ಏಳು ಪದಕಗಳನ್ನು ಗೆದ್ದಿತ್ತು.

CWG 2026: 13 ಚಿನ್ನ, 39 ಪದಕ; ಭಾರತದ ಕಾಮನ್‌ವೆಲ್ತ್ ಪ್ರಯಾಣ ಅಂತ್ಯ

9ನೇ ಸ್ಥಾನ ಪಡೆದ ಅರ್ಷದ್ ನದೀಮ್

ಈ ಬಾರಿ ಪಾಕಿಸ್ತಾನದ ಚಿನ್ನದ ಪದಕದ ಭರವಸೆ ಇದ್ದಿದ್ದು ಒಲಿಂಪಿಕ್ಸ್ ಚಾಂಪಿಯನ್ ಅರ್ಷದ್ ನದೀಮ್ ಅವರ ಮೇಲೆ. ಹೀಗಾಗಿ ಅವರು ಉದ್ಘಾಟನಾ ಸಮಾರಂಭದಲ್ಲಿ ಪಾಕಿಸ್ತಾನದ ಧ್ವಜಧಾರಿಯಾಗಿದ್ದರು. ಆದರೆ ನದೀಮ್ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ 77.41 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ಒಂಬತ್ತನೇ ಸ್ಥಾನ ಪಡೆದರು. ಹೀಗಾಗಿ ಪಾಕಿಸ್ತಾನದ ಚಿನ್ನದ ಪದಕದ ಕನಸು ಅರ್ಷದ್ ನದೀಮ್ ಸೋಲಿನೊಂದಿಗೆ ಕಮರಿ ಹೋಯಿತು. ಇನ್ನು 2030 ರಲ್ಲಿ ಭಾರತದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಪಾಕಿಸ್ತಾನ ತನ್ನ ಸ್ಪರ್ಧಿಗಳನ್ನು ಕಳುಹಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Mon, 3 August 26

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು