ಭಾರತೀಯ ಬ್ಯಾಟರ್​ಗಳಿಂದ ಹಳಿ ತಪ್ಪಿದ್ದ ಪಾಕ್ ಬೌಲರ್‌ಗಳು ಮತ್ತೆ ಲಯಕ್ಕೆ

Australia vs Pakistan: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ 22 ವರ್ಷಗಳ ಬಳಿಕ ಕಾಂಗರೂ ನಾಡಿನಲ್ಲಿ ಏಕದಿನ ಸರಣಿ ಗೆಲ್ಲುವಲ್ಲಿ ಪಾಕ್ ಪಡೆ ಯಶಸ್ವಿಯಾಗಿದೆ. ಈ ಗೆಲುವಿನ ರೂವಾರಿಗಳು ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಹಾಗೂ ನಸೀಮ್ ಶಾ.

ಭಾರತೀಯ ಬ್ಯಾಟರ್​ಗಳಿಂದ ಹಳಿ ತಪ್ಪಿದ್ದ ಪಾಕ್ ಬೌಲರ್‌ಗಳು ಮತ್ತೆ ಲಯಕ್ಕೆ
Rauf - Shaheen- Naseem
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 11, 2024 | 2:48 PM

ಅದು 2023, ಶ್ರೀಲಂಕಾದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಸೂಪರ್ ಫೋರ್​ ಹಂತದ 3ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಲಿಷ್ಠ ಬೌಲಿಂಗ್ ಲೈನಪ್ ಅನ್ನು ನಂಬಿ ಫೀಲ್ಡಿಂಗ್ ಆಯ್ದುಕೊಂಡಿದ್ದರು. ಆದರೆ ಈ ನಂಬಿಕೆಯನ್ನು ಟೀಮ್ ಇಂಡಿಯಾ ಬ್ಯಾಟರ್​ಗಳು ನುಚ್ಚುನೂರು ಮಾಡಿದ್ದರು.

ಭಾರತದ ಪರ ಇನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ (56) ಹಾಗೂ ಶುಭ್ ಮನ್ ಗಿಲ್ (58) ಮೊದಲ ವಿಕೆಟ್‌ಗೆ 121 ರನ್ ಗಳ‌ ಜೊತೆಯಾಟವಾಡಿ ಭರ್ಜರಿ ಆರಂಭ ಒದಗಿಸಿದರು.

ಆ ಬಳಿಕ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕೂಡ ಅಬ್ಬರಿಸಿದರು. 94 ಎಸೆತಗಳನ್ನು ಎದುರಿಸಿದ ಕೊಹ್ಲಿ 3 ಸಿಕ್ಸ್, 9 ಫೋರ್ ಗಳೊಂದಿಗೆ ಅಜೇಯ 121 ರನ್ ಬಾರಿಸಿದರೆ, ರಾಹುಲ್ 106 ಎಸೆತಗಳಲ್ಲಿ 2 ಸಿಕ್ಸ್, 12 ಫೋರ್ ಗಳೊಂದಿಗೆ ಅಜೇಯ 111 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 356 ರನ್ ಚಚ್ಚಿದ್ದರು.

ಭಾರತೀಯರ ಈ ಭರ್ಜರಿ ಬ್ಯಾಟಿಂಗ್‌ನಿಂದ ಲಯ ತಪ್ಪಿದ್ದ ಪಾಕ್ ವೇಗಿಗಳು ಆ ಬಳಿಕ ಎಲ್ಲೂ ಕೂಡ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಅದರಲ್ಲೂ ತವರು ಪಿಚ್‌ನಲ್ಲೂ ಕಳಪೆ ಪ್ರದರ್ಶನದೊಂದಿಗೆ ಭಾರೀ ಟೀಕೆಗೆ ಒಳಗಾಗಿತ್ತು.

ಈ ಟೀಕೆ, ಟಿಪ್ಪಣಿಗಳ ನಡುವೆ ಕೊನೆಗೂ ಪಾಕ್ ವೇಗಿಗಳು ಲಯಕ್ಕೆ ಮರಳಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದಲ್ಲಿ ಎಂಬುದು ವಿಶೇಷ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.

ಈ ಐತಿಹಾಸಿಕ ಸರಣಿ ಗೆಲುವಿನ ರೂವಾರಿಗಳು ಪಾಕ್ ವೇಗಿಗಳು ಎಂಬುದು ಇಲ್ಲಿ ಉಲ್ಲೇಖಾರ್ಹ. ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಹ್ಯಾರಿಸ್ ರೌಫ್ 3 ವಿಕೆಟ್ ಪಡೆದರೆ, ಶಾಹೀನ್ ಅಫ್ರಿದಿ 2 ವಿಕೆಟ್ ಕಬಳಿಸಿದ್ದರು. ಇನ್ನು ನಸೀಮ್ ಶಾ, ಮೊಹಮ್ಮದ್ ಹಸ್ನೈನ್ ತಲಾ ಒಂದೊಂದು ವಿಕೆಟ್ ಪಡೆದಿದ್ದರು. ಈ ಮೂಲಕ ಪಾಕ್ ವೇಗಿಗಳು 7 ವಿಕೆಟ್ ಉರುಳಿಸಿದ್ದರು. ಅದಾಗ್ಯೂ ಆಸ್ಟ್ರೇಲಿಯಾ ಈ ಪಂದ್ಯದಲ್ಲಿ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.

ಇನ್ನು ದ್ವಿತೀಯ ಏಕದಿನ ಪಂದ್ಯದಲ್ಲಿ ಹ್ಯಾರಿಸ್ ರೌಫ್ 5 ವಿಕೆಟ್ ಉರುಳಿಸಿದರೆ, ಶಾಹೀನ್ ಅಫ್ರಿದಿ 3 ವಿಕೆಟ್ ಪಡೆದಿದ್ದರು. ಇನ್ನು ಹಸ್ನೈನ್ ಹಾಗೂ ನಸೀಮ್ ಶಾ ತಲಾ ಒಂದು ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಾಕ್ ವೇಗಿಗಳು ಆಸ್ಟ್ರೇಲಿಯಾ ತಂಡವನ್ನು 163 ರನ್ ಗಳಿಗೆ ಆಲೌಟ್ ಮಾಡಿದ್ದರು. ಅಲ್ಲದೆ ಈ ಪಂದ್ಯದಲ್ಲಿ ಪಾಕಿಸ್ತಾನ್ 9 ವಿಕೆಟ್‌ಗಳ ಜಯ ಸಾಧಿಸಿತು.

ಮೂರನೇ ಏಕದಿನ ಪಂದ್ಯದಲ್ಲೂ ಪರಾಕ್ರಮ ಮೆರೆದ ಪಾಕ್ ವೇಗಿಗಳು ಒಟ್ಟು 9 ವಿಕೆಟ್ ಉರುಳಿಸಿದ್ದರು. ಈ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಹಾಗೂ ನಸೀಮ್ ಶಾ ತಲಾ 3 ವಿಕೆಟ್ ಪಡೆದರೆ, ಹ್ಯಾರಿಸ್ ರೌಫ್ 2 ಹಾಗೂ ಹಸ್ನೈನ್ 1 ವಿಕೆಟ್ ಕಬಳಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು 140 ರನ್ ಗಳಿಗೆ ಆಲೌಟ್ ಮಾಡಿ, ಪಾಕಿಸ್ತಾನ್ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಅಂದರೆ ಈ ಸರಣಿಯ ಮೂರು ಪಂದ್ಯಗಳಲ್ಲಿ ಪಾಕಿಸ್ತಾನ್ ವೇಗಿಗಳು ಒಟ್ಟು 26 ವಿಕೆಟ್ ಉರುಳಿಸಿದ್ದಾರೆ. ಅದೇ ಆತಿಥೇಯ ಆಸ್ಟ್ರೇಲಿಯಾ ಬೌಲರ್‌ಗಳು ಪಡೆದ ಒಟ್ಟು ವಿಕೆಟ್‌ಗಳ ಸಂಖ್ಯೆ ಕೇವಲ 13 ಮಾತ್ರ. ಹೀಗಾಗಿಯೇ ಆಸೀಸ್ ಪಿಚ್‌ನಲ್ಲಿನ ಪಾಕ್ ಬೌಲರ್‌ಗಳ ಪರಾಕ್ರಮವನ್ನು ಗ್ರೇಟೆಸ್ಟ್ ಕಂಬ್ಯಾಕ್ ಎಂದು ಬಣ್ಣಿಸಲಾಗುತ್ತಿದೆ.

ಇದನ್ನೂ ಓದಿ: ಸೋಲಿನೊಂದಿಗೆ ವಿಶೇಷ ದಾಖಲೆಗೆ ಕೊರೊಳೊಡ್ಡಿದ ವರುಣ್ ಚಕ್ರವರ್ತಿ

ಇದೀಗ ಒಂದು ವರ್ಷದ ಬಳಿಕ ತ್ರಿಮೂರ್ತಿ ವೇಗಿಗಳು ಲಯಕ್ಕೆ ಮರಳಿರುವುದು ಪಾಕಿಸ್ತಾನ್ ತಂಡದ ಚಿಂತೆಯನ್ನು ದೂರ ಮಾಡಿದೆ. ಆದರೆ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗಲಿದೆ. ಈ ವೇಳೆ ಪಾಕ್ ವೇಗಿಗಳು ಮತ್ತೆ ಲಯ ತಪ್ಪಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Published On - 8:24 am, Mon, 11 November 24

ಜನರ ಭಾವನೆಗಳಿಗೆ ವಿರುದ್ಧವಾಗಿ ಸಿದ್ದರಾಮಯ್ಯ ಮಾತಾಡುತ್ತಾರೆ: ಸೋಮಣ್ಣ
ಜನರ ಭಾವನೆಗಳಿಗೆ ವಿರುದ್ಧವಾಗಿ ಸಿದ್ದರಾಮಯ್ಯ ಮಾತಾಡುತ್ತಾರೆ: ಸೋಮಣ್ಣ
"ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ": ಸ್ವಾಮೀಜಿ
ರೈತರಿಗೆ ನೀಡಿದ ನೋಟೀಸ್ ವಾಪಸ್ಸು ಪಡೆಯುವುದರಿಂದ ಏನೂ ಅಗಲ್ಲ: ಯತ್ನಾಳ್
ರೈತರಿಗೆ ನೀಡಿದ ನೋಟೀಸ್ ವಾಪಸ್ಸು ಪಡೆಯುವುದರಿಂದ ಏನೂ ಅಗಲ್ಲ: ಯತ್ನಾಳ್
ಸಚಿವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಮೇರೆಗೆ ಪುನೀತ್ ಪೊಲೀಸ್ ವಶಕ್ಕೆ
ಸಚಿವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಮೇರೆಗೆ ಪುನೀತ್ ಪೊಲೀಸ್ ವಶಕ್ಕೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸ್ಫೋಟಕ ಹೇಳಿಕೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸ್ಫೋಟಕ ಹೇಳಿಕೆ
ರೀಲ್ಸ್​ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿದ್ಯಾರ್ಥಿಗಳಿಂದ ಹುಚ್ಚಾಟ
ರೀಲ್ಸ್​ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿದ್ಯಾರ್ಥಿಗಳಿಂದ ಹುಚ್ಚಾಟ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ