AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paralympics 2024: ಭಾರತಕ್ಕೆ 6ನೇ ಚಿನ್ನದ ಪದಕ; ಹೈಜಂಪ್​ನಲ್ಲಿ ಬಂಗಾರ ಗೆದ್ದ ಪ್ರವೀಣ್ ಕುಮಾರ್

Praveen Kumar: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ತನ್ನ ಆರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

Paralympics 2024: ಭಾರತಕ್ಕೆ 6ನೇ ಚಿನ್ನದ ಪದಕ; ಹೈಜಂಪ್​ನಲ್ಲಿ ಬಂಗಾರ ಗೆದ್ದ ಪ್ರವೀಣ್ ಕುಮಾರ್
ಪ್ರವೀಣ್ ಕುಮಾರ್
ಪೃಥ್ವಿಶಂಕರ
|

Updated on:Sep 06, 2024 | 5:31 PM

Share

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ತನ್ನ ಆರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಮತ್ತು ಆರನೇ ಚಿನ್ನದ ಪದಕವಾಗಿದೆ. ಪ್ರವೀಣ್ ಕುಮಾರ್ ಅವರು 2.08 ಮೀಟರ್ ಎತ್ತರ ಜಿಗಿಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಇದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾರತಕ್ಕೆ ಇದುವರೆಗೆ ಸಿಕ್ಕಿರುವ 11ನೇ ಪದಕವಾಗಿದೆ. ಈ ಚಿನ್ನದ ಸಾಧನೆಯೊಂದಿಗೆ ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್, ಪ್ಯಾರಾಲಿಂಪಿಕ್ಸ್‌ನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮರಿಯಪ್ಪನ್ ತಂಗವೇಲು ನಂತರ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸತತ ಎರಡನೇ ಪದಕ

ಇದಲ್ಲದೆ ಪ್ಯಾರಾಲಿಂಪಿಕ್ಸ್​ನಲ್ಲಿ ಸತತ ಎರಡನೇ ಬಾರಿಗೆ ಪದಕ ಗೆದ್ದ ಸಾಧನೆಯನ್ನೂ ಪ್ರವೀಣ್ ಮಾಡಿದರು. ಕಳೆದ ಬಾರಿ ಅಂದರೆ 2020 ರ ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಪ್ರವೀಣ್, ಈ ಬಾರಿ ಪದಕದ ಬಣ್ಣವನ್ನು ಬದಲಿಸುವಲ್ಲಿ ಯಶಸ್ವಿಯಾದರು. ಹಾಗೆಯೇ 2.08 ಮೀಟರ್ ಜಿಗಿಯುವ ಮೂಲಕ ಪ್ರವೀಣ್, ಹೊಸ ಏಷ್ಯನ್ ದಾಖಲೆಯನ್ನು ನಿರ್ಮಿಸಿದರು. ಪ್ರವೀಣ್ ಅವರ ಈ ಪದಕದೊಂದಿಗೆ ಪದಕಗಳ ಪಟ್ಟಿಯಲ್ಲಿ ಭಾರತ ಮತ್ತೆ 14ನೇ ಸ್ಥಾನಕ್ಕೆ ತಲುಪಿದೆ. ಉಳಿದಂತೆ ಈ ಈವೆಂಟ್​ನಲ್ಲಿ ಅಮೆರಿಕದ ಡೆರೆಕ್ ಲೊಸಿಡೆಂಟ್ (2.06 ಮೀ) ಬೆಳ್ಳಿ ಪದಕ ಗೆದ್ದರೆ, ಇಬ್ಬರು ಆಟಗಾರರು ಕಂಚಿನ ಪದಕ ಗೆದ್ದರು. ಉಜ್ಬೇಕಿಸ್ತಾನ್‌ನ ತೈಮುರ್‌ಬೆಕ್ ಗಿಯಾಜೊವ್ ಮತ್ತು ಪೋಲೆಂಡ್‌ನ ಮಸಿಯೆಜ್ ಲೆಪಿಯಾಟೊ ಜಂಟಿಯಾಗಿ 2.03 ಮೀಟರ್‌ ಜಿಗಿತದೊಂದಿಗೆ ಮೂರನೇ ಸ್ಥಾನ ಪಡೆದು ಕಂಚು ಗೆದ್ದರು.

ಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ಪ್ರವೀಣ್ ಕುಮಾರ್ ಎತ್ತರ ಜಿಗಿತದಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಕಳೆದ ಮೂರು ವರ್ಷಗಳು ಅವರ ಪಾಲಿಗೆ ಅದ್ಭುತವಾಗಿದೆ. 2021 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕವನ್ನು ಗೆದಿದ್ದ ಪ್ರವೀಣ್, ಆ ನಂತರ 2023 ರಲ್ಲಿ ಹ್ಯಾಂಗ್ಝೌ ಪ್ಯಾರಾ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದರು. ಈಗ ಪ್ರವೀಣ್ ಪ್ಯಾರಿಸ್‌ನಲ್ಲೂ ಹ್ಯಾಂಗ್‌ಝೌ ಪ್ರದರ್ಶನವನ್ನು ಪುನರಾವರ್ತಿಸಿದ್ದಾರೆ.

ಯಶಸ್ವಿ ಪ್ಯಾರಾಲಿಂಪಿಕ್ಸ್

ಪ್ರವೀಣ್ ಕುಮಾರ್ ಗೆದ್ದ ಚಿನ್ನದ ಪದಕದೊಂದಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಭಾರತ ಇತಿಹಾಸ ನಿರ್ಮಿಸಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 5 ಚಿನ್ನದ ಪದಕಗಳನ್ನು ಒಳಗೊಂಡಂತೆ ಒಟ್ಟು 19 ಪದಕಗಳನ್ನು ಗೆದ್ದಿತ್ತು. ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಇದುವರೆಗೆ 26 ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದರಲ್ಲಿ 6 ಚಿನ್ನದ ಪದಕಗಳು ಸೇರಿದ್ದು, ಪ್ರವೀಣ್​ಗೂ ಮೊದಲು ಅವನಿ ಲಖೇರಾ, ನಿತೇಶ್ ಕುಮಾರ್, ಸುಮಿತ್ ಅಂತಿಲ್, ಹರ್ವಿಂದರ್ ಸಿಂಗ್, ಧರಂಬೀರ್ ಭಾರತಕ್ಕೆ ಚಿನ್ನದ ಪದಕಗಳನ್ನು ಗೆದ್ದುಕೊಟ್ಟಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Fri, 6 September 24

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?