Paralympics 2024: ಭಾರತಕ್ಕೆ ಐದನೇ ಪದಕ; 10 ಮೀ. ಏರ್ ರೈಫಲ್​ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್

Rubina Francis: ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನ ಮೂರನೇ ದಿನ ಭಾರತಕ್ಕೆ ಐದನೇ ದಿನ ಲಭಿಸಿದೆ. ಕ್ರೀಡಾಕೂಟದ ಎರಡನೇ ದಿನ 1 ಚಿನ್ನ ಸೇರಿದಂತೆ 4 ಪದಕ ಗೆದ್ದಿದ್ದ ಭಾರತಕ್ಕೆ ಮೂರನೇ ದಿನ ಒಂದು ಕಂಚಿನ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್​ಹೆಚ್ 1 ಫೈನಲ್​ನಲ್ಲಿ ಭಾರತದ ರುಬಿನಾ ಫ್ರಾನ್ಸಿಸ್ 211.1 ಅಂಕ ಸಂಪಾಧಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

Paralympics 2024: ಭಾರತಕ್ಕೆ ಐದನೇ ಪದಕ; 10 ಮೀ. ಏರ್ ರೈಫಲ್​ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್
ರುಬಿನಾ ಫ್ರಾನ್ಸಿಸ್
Follow us
ಪೃಥ್ವಿಶಂಕರ
|

Updated on:Aug 31, 2024 | 7:14 PM

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನ ಮೂರನೇ ದಿನ ಭಾರತಕ್ಕೆ ಐದನೇ ದಿನ ಲಭಿಸಿದೆ. ಕ್ರೀಡಾಕೂಟದ ಎರಡನೇ ದಿನ 1 ಚಿನ್ನ ಸೇರಿದಂತೆ 4 ಪದಕ ಗೆದ್ದಿದ್ದ ಭಾರತಕ್ಕೆ ಮೂರನೇ ದಿನ ಒಂದು ಕಂಚಿನ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್​ಹೆಚ್ 1 ಫೈನಲ್​ನಲ್ಲಿ ಭಾರತದ ರುಬಿನಾ ಫ್ರಾನ್ಸಿಸ್ 211.1 ಅಂಕ ಸಂಪಾಧಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು. ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್‌ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್​ನಲ್ಲಿದ್ದರು. ಆದರೆ ಕೊನೆಯ ಎರಡು ಶಾಟ್​ಗಳಲ್ಲಿ ಲಯ ಕಳೆದುಕೊಂಡ ಅವರು ಒಟ್ಟು 211.1 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು. ಮೊನ್ನೆ ನಡೆದ ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದ್ದರು.

ಶೂಟಿಂಗ್​ನಲ್ಲಿ 4ನೇ ಪದಕ

ರುಬಿನಾ ಫ್ರಾನ್ಸಿಸ್ ಗೆದ್ದ ಕಂಚಿನ ಪದಕ, ಶೂಟಿಂಗ್‌ನಲ್ಲಿ ಭಾರತಕ್ಕೆ ಸಿಕ್ಕ ನಾಲ್ಕನೇ ಪದಕ ಮತ್ತು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಒಟ್ಟಾರೆ ಐದನೇ ಪದಕವಾಗಿದೆ. ಇದಕ್ಕೂ ಮೊದಲು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನ, ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಈವೆಂಟ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದರೆ, ಇದೇ ಈವೆಂಟ್​ನಲ್ಲಿ ಮತ್ತೊರ್ವ ಭಾರತೀಯ ಸ್ಪರ್ಧಿ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದಿದ್ದರು. ಆ ನಂತರ, ಪುರುಷರ 10 ಮೀಟರ್ ಏರ್ ಪಿಸ್ತೂಲ್ (SH1) ನಲ್ಲಿ ಮನೀಶ್ ನರ್ವಾಲ್ ಬೆಳ್ಳಿ ಪದಕ ಗೆದ್ದಿದ್ದರು. ಉಳಿದಂತೆ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದುಕೊಟ್ಟಿದ್ದರು.

ರುಬಿನಾಕಂಚಿನ ಹಾದಿ ಹೀಗಿತ್ತು?

ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್​ಹೆಚ್ 1 ಫೈನಲ್​ ಸುತ್ತಿನ ಮೊದಲ ಹಂತ ಮುಗಿದ ಬಳಿಕ ರುಬಿನಾ ಫ್ರಾನ್ಸಿಸ್ ಮೂರನೇ ಸ್ಥಾನದಲ್ಲಿದ್ದರು. ಈ ಹಂತದಲ್ಲಿ 10 ಶಾಟ್‌ ಹೊಡೆದ ಅವರು ಒಟ್ಟು 97.6 (10.7, 10.3, 10.3, 9.7, 9.0, 8.4, 10.0, 9.8, 9.6, 9.8) ಅಂಕ ಗಳಿಸಿದರು.  2ನೇ ಹಂತದಲ್ಲಿ ತಮ್ಮ ಅದ್ಭುತ ಆಟವನ್ನು ಮುಂದುವರಿಸಿದ ರುಬಿನಾ ಫ್ರಾನ್ಸಿಸ್ ಐತಿಹಾಸಿಕ ಕಂಚಿನ ಪದಕ ಗೆದ್ದರು. ವಾಸ್ತವವಾಗಿ ರುಬಿನಾ, ಪಿಸ್ತೂಲ್ ಶೂಟಿಂಗ್‌ನಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ.

ಮೆಕ್ಯಾನಿಕ್ ಮಗಳ ದೊಡ್ಡ ಸಾಧನೆ

ಮಧ್ಯಪ್ರದೇಶದ ಜಬಲ್‌ಪುರದ ಪ್ಯಾರಾ ಪಿಸ್ತೂಲ್ ಶೂಟರ್ ರುಬಿನಾ ಫ್ರಾನ್ಸಿಸ್ ಇತ್ತೀಚಿನ ದಿನಗಳಲ್ಲಿ ಭಾರತದ ಪರ ಉತ್ತಮ ಪ್ರದರ್ಶನ ತೋರಿದ್ದಾರೆ. ಇದಕ್ಕೂ ಮೊದಲು ರುಬಿನಾ ಫ್ರಾನ್ಸಿಸ್ ಅವರು ವಿಶ್ವ ಶೂಟಿಂಗ್ ಪ್ಯಾರಾ ಸ್ಪೋರ್ಟ್ಸ್ ವಿಶ್ವಕಪ್-2023 ರಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದರು. ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ P-6 ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಅವರು ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಾಲಿಂಪಿಕ್​ನಲ್ಲಿ ಕಂಚು ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ರುಬಿನಾ ಅವರ ತಾಯಿ ಸುನೀತಾ ಫ್ರಾನ್ಸಿಸ್ ಜಬಲ್‌ಪುರದ ಹೆರಿಗೆ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದರೆ, ಅವರ ತಂದೆ ಸೈಮನ್ ಮೋಟಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Sat, 31 August 24

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ