ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸ್ವಲ್ಪದರಲ್ಲೇ ಚಿನ್ನದ ಪದಕ ಕೈತಪ್ಪಿದೆ. ಇಂದು ನಡೆದ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ಯು5 ಈವೆಂಟ್‌ನಲ್ಲಿ ಭಾರತದ ತುಳಸಿಮತಿ ಮುರುಗೇಶನ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಚೀನಾದ ಕ್ಯು ಕ್ಸಿಯಾ ಯಾಂಗ್ ವಿರುದ್ಧ 0-2 (17-21, 10-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಮಹಿಳೆಯರ SU5 ವಿಭಾಗದಲ್ಲಿ ಚೊಚ್ಚಲ ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.ಇದರೊಂದಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಪದಕಗಳ ಸಂಖ್ಯೆ ಎರಡಂಕಿ ಮುಟ್ಟಿದೆ.
ತುಳಸಿಮತಿ ಮುರುಗೇಶನ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಬೇಕಾಗಿ ಬಂದರೂ ಈ ಪಂದ್ಯ ಅವರಿಗೆ ಹಾಗೂ ಇಡೀ ದೇಶಕ್ಕೆ ವಿಶೇಷವಾಗಿದೆ. ಈ ಮೊದಲು ಪ್ಯಾರಾಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಯಾವುದೇ ಮಹಿಳಾ ಆಟಗಾರ್ತಿ ಪದಕ ಗೆದ್ದಿರಲಿಲ್ಲ. ಚೀನಾದ ಯಾಂಗ್ ಕ್ಯು ಜಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ತುಳಸಿಮತಿ ಮುರುಗೇಶನ್ ಉತ್ತಮ ಆರಂಭ ನೀಡಿದರೂ ಲಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಮೊದಲ ಸೆಟ್ ಅನ್ನು 17-21 ರಲ್ಲಿ ಸೋತ ಅವರು ಎರಡನೇ ಸೆಟ್ ಅನ್ನು 10-21 ರಿಂದ ಕಳೆದುಕೊಂಡರು. ಇದರಿಂದಾಗಿ ಅವರು ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯಿತು.
🇮🇳 1st Indian woman shuttler to reach a FINAL at the #Paralympics —
Thulasimathi Murugesan! 👏🔥
Remember the name, because history is being made! 🏸✨#ThulasimathiMurugesan #Paralympics #ProudMoment #IndianSports #Badminton pic.twitter.com/oB9KQ7nHmu
— Sports Apna l Indian sports 🇮🇳 (@sportsapna1) September 2, 2024
ಮತ್ತೊಂದೆಡೆ, ಪ್ಯಾರಾ ಬ್ಯಾಡ್ಮಿಂಟನ್‌ನ ಮಹಿಳೆಯರ SU5 ವಿಭಾಗದಲ್ಲಿ ಅಂದರೆ ಇದೇ ಈವೆಂಟ್‌ನಲ್ಲಿ ಮನೀಶಾ ರಾಮದಾಸ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡರು. ಸೆಮಿಫೈನಲ್ ಪಂದ್ಯದಲ್ಲಿ ಮನೀಶಾ ರಾಮದಾಸ್ ಇದೇ ತುಳಸಿಮತಿ ಮುರುಗೇಶನ್ ವಿರುದ್ಧ ಸೋತಿದ್ದರು. ಹೀಗಾಗಿ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಮನೀಶಾ ರಾಮದಾಸ್, ಡೆನ್ಮಾರ್ಕ್‌ನ ಕ್ಯಾಥರೀನ್ ರೋಸೆಂಗ್ರೆನ್ ಅವರನ್ನು ಏಕಪಕ್ಷೀಯವಾಗಿ ಸೋಲಿಸಿ ಕಂಚು ಗೆದ್ದರು. ಈ ಪಂದ್ಯದ ಮೊದಲ ಗೇಮ್ ಅನ್ನು 21-12 ರಿಂದ ಗೆದ್ದುಕೊಂಡ ಅವರು ಎರಡನೇ ಗೇಮ್ ಅನ್ನು 21-8 ರಲ್ಲಿ ಗೆದ್ದು ಕಂಚಿನ ಪದಕವನ್ನು ಗೆದ್ದರು. ಇದರೊಂದಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಎರಡನೇ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
Manisha Ramadass narrowly missed a final spot against Thulasimathi Murugesan but is set to compete for bronze tonight! 🏸 With her impressive medal tally, can she add a Paralympic medal to her collection?
#ParaBadminton #Paralympics pic.twitter.com/T3TBYeB9wJ
— Sports Apna l Indian sports 🇮🇳 (@sportsapna1) September 2, 2024
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತ ಇದುವರೆಗೆ 11 ಪದಕಗಳನ್ನು ಗೆದ್ದಿದೆ. ಇದರಲ್ಲಿ 2 ಚಿನ್ನ, 4 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿವೆ. ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಶೂಟರ್ ಅವನಿ ಲೆಖರಾ ಅವರು 10 ಮೀಟರ್ ಏರ್ ರೈಫಲ್ SH1 ಈವೆಂಟ್‌ನಲ್ಲಿ ಗೆದ್ದುಕೊಟ್ಟಿದ್ದರು. ಆದಾದ ನಂತರ ಇಂದು ನಡೆದ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ SL3 ವಿಭಾಗದಲ್ಲಿ ಪ್ಯಾರಾ-ಬ್ಯಾಡ್ಮಿಂಟನ್ ಆಟಗಾರ ನಿತೀಶ್ ಕುಮಾರ್ ಎರಡನೇ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:50 pm, Mon, 2 September 24