ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಚಿನ್ನದ ಪದಕದ ಕೊನೆಯ ಭರವಸೆಯಾಗಿರುವ ನೀರಜ್ ಚೋಪ್ರಾ ಇಂದು ಅಖಾಡಕ್ಕಿಳಿಯುತ್ತಿದ್ದಾರೆ. ಕಳೆದ ಒಲಿಂಪಿಕ್ಸ್ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಏಕೈಕ ಚಿನ್ನದ ಪದಕ ಗೆದ್ದುಕೊಟ್ಟಿದ್ದ ನೀರಜ್ ಮೇಲೆಯೇ ಈ ಬಾರಿಯೂ ಚಿನ್ನದ ಪದಕದ ನಿರೀಕ್ಷೆ ಹೆಚ್ಚಿದೆ. ಆದರೆ ನೀರಜ್ ಚಿನ್ನ ಗೆಲ್ಲುವುದು ಅಷ್ಟು ಸುಲಭದ ಮಾತಲ್ಲ. ಏಕೆಂದರೆ ಈ ಬಾರಿ ನೀರಜ್‌ಗೆ ಪ್ರಬಲ ಸ್ಪರ್ಧಿಗಳಾಗಿ ಇಬ್ಬರು ಜಾವೆಲಿನ್ ಎಸೆತಗಾರರು ಅಖಾಡದಲ್ಲಿದ್ದಾರೆ. ಹಾಗಾಗಿ ಅವರನ್ನು ಮೀರಿ ನೀರಜ್ ಎಷ್ಟು ದೂರ ಜಾವೆಲಿನ್ ಎಸೆಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಈ ಮಹತ್ವದ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ. ಭಾರತೀಯರು ಯಾವ ಚಾನೆಲ್ನಲ್ಲಿ ಈ ಪಂದ್ಯವನ್ನು ವೀಕ್ಷಿಸಬಹುದು ಎಂಬುದುನ್ನು ನಾವು ನಿಮಗೆ ಹೇಳಲಿದ್ದೇವೆ.
ನೀರಜ್ ಚೋಪ್ರಾರಂತೆಯೇ ಈ ಬಾರಿ ಇಬ್ಬರು ಜಾವೆಲಿನ್ ಎಸೆತಗಾರರು ಚಿನ್ನದ ಪದಕ ಗೆಲ್ಲುವ ಪ್ರಬಲ ಸ್ಪರ್ಧಿಗಳಾಗಿದ್ದಾರೆ. ಇವರಲ್ಲಿ ಒಬ್ಬರು ಪಾಕಿಸ್ತಾನದ ಅರ್ಷದ್ ನದೀಮ್ ಮತ್ತು ಗ್ರೆನಡಾದ ಆ್ಯಂಡರ್ಸನ್ ಪೀಟರ್ಸ್. ಈ ಇಬ್ಬರೂ ಆಟಗಾರರು ತಮ್ಮ ಮೊದಲ ಪ್ರಯತ್ನದಲ್ಲೇ ಪ್ಯಾರಿಸ್ ಒಲಿಂಪಿಕ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅದರಲ್ಲೂ ಗ್ರೆನಡಾದ ಆಂಡರ್ಸನ್ ಪೀಟರ್ಸ್ ಅವರು ಭಾರತದ ನೀರಜ್ ಚೋಪ್ರಾಗೆ ಕಠಿಣ ಪೈಪೋಟಿ ನೀಡಲಿದ್ದಾರೆ. ಅರ್ಹತಾ ಸುತ್ತಿನಲ್ಲಿ, ಆಂಡರ್ಸನ್ ಪೀಟರ್ಸ್ ತಮ್ಮ ಮೊದಲ ಪ್ರಯತ್ನದಲ್ಲಿ 88.63 ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದರು. ಆಂಡರ್ಸನ್ ಪೀಟರ್ಸ್ ಒಂದೇ ಒಂದು ಪ್ರಯತ್ನದಲ್ಲಿ ಫೈನಲ್‌ಗೆ ಅರ್ಹತೆ ಗಳಿಸಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು. ಇವರಲ್ಲದೆ ಪಾಕಿಸ್ತಾನದ ಅರ್ಷದ್ ನದೀಮ್ ಕೂಡ ಅರ್ಹತಾ ಸುತ್ತಿನಲ್ಲಿ 86.59 ಮೀಟರ್ ದೂರ ಜಾವೆಲಿನ್ ಎಸೆದು ತನ್ನ ಮೊದಲ ಪ್ರಯತ್ನದಲ್ಲಿಯೇ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಹೀಗಾಗಿ ಈ ಇಬ್ಬರೇ ನೀರಜ್‌ಗೆ ಪ್ರಬಲ ಸ್ಪರ್ಧಿಗಳಾಗಿದ್ದಾರೆ.
ಜಾವೆಲಿನ್ ಥ್ರೋ ಫೈನಲ್ ಪಂದ್ಯ ಭಾರತೀಯ ಕಾಲಮಾನ ಇಂದು ರಾತ್ರಿ 11.50ಕ್ಕೆ ಆರಂಭವಾಗಲಿದೆ.
ಜಾವೆಲಿನ್ ಥ್ರೋ ಫೈನಲ್ ಪಂದ್ಯವನ್ನು ಸ್ಪೋರ್ಟ್ಸ್ 18 ಮತ್ತು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Thu, 8 August 24