ಭಾರತಕ್ಕೆ ಮತ್ತೊಂದು ಆಘಾತ: ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು

ಭಾರತಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಅನರ್ಹಗೊಂಡ ನಂತರ ಇದೀಗ ಮತ್ತೊಬ್ಬ ಕುಸ್ತಿಪಟುವನ್ನು ಗಡಿಪಾರು ಮಾಡಲಾಗಿದೆ. ಈ ಆದೇಶವನ್ನು ಪ್ಯಾರಿಸ್​​​​ ಒಲಿಂಪಿಕ್ ಅಸೋಸಿಯೇಷನ್ ನೀಡಿದೆ. ಅಂತಿಮ್ ಫಂಘಾಲ್ ಅವರನ್ನು ಗಡಿಪಾರು ಮಾಡಲಾಗಿದೆ. ಅಷ್ಟಕ್ಕೂ ಅಂತಿಮ್ ಫಂಘಾಲ್ ಅವರನ್ನು ಗಡಿಪಾರು ಏಕೆ ಮಾಡಲಾಗಿದೆ? ಯಾವ ಕಾರಣವನ್ನು ಪ್ಯಾರಿಸ್​​​​ ಒಲಿಂಪಿಕ್ ಅಸೋಸಿಯೇಷನ್ ನೀಡಿದೆ. ಇಲ್ಲಿದೆ ನೋಡಿ

ಭಾರತಕ್ಕೆ ಮತ್ತೊಂದು ಆಘಾತ: ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು
ಆಂಟಿಮ್ ಪಂಘಲ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 08, 2024 | 10:15 AM

ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಮಹಿಳೆಯರ 50 ಕೆಜಿ ವಿಭಾಗದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಒಲಿಂಪಕ್​​​​​​ನಿಂದ ಹೊರಗೆ ಕಳಿಸಿದೆ. ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಈಗಾಗಲೇ ಪ್ಯಾರಿಸ್​​​​ ಒಲಿಂಪಿಕ್ ಅಸೋಸಿಯೇಷನ್ ಪ್ಯಾರಿಸ್‌ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ.

ಪ್ರಿ ಕ್ವಾರ್ಟರ್ ಫೈನಲ್​​ನಲ್ಲಿ ಆಂಟಿಮ್ ಪಂಘಲ್ ಟರ್ಕಿಯ ಯೆಟ್ಗಿಲ್ ಝೆನೆಪ್ ವಿರುದ್ಧ 0-10 ಅಂತರದಲ್ಲಿ ಸೋತಿದ್ದರು. ಇನ್ನು ಅವರನ್ನು ಗಡಿಪಾರು ಮಾಡಲು ಕಾರಣವನ್ನು ಕೂಡ ಪ್ಯಾರಿಸ್​​​​ ಒಲಿಂಪಿಕ್ ಅಸೋಸಿಯೇಷನ್ ನೀಡಿದೆ. ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್ ಫಂಘಾಲ್ ಅವರ ಅಧಿಕೃತ ಕಾರ್ಡ್‌ ಅನ್ನು ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಇದು ಒಲಿಂಪಿಕ್ ಆಟಗಾರರಿಗೆ ಮಾತ್ರ ನೀಡಲಾಗುವುದು, ಇದನ್ನು ಆಟಗಾರರಲ್ಲದವರು ಬಳಸುವಂತಿಲ್ಲ, ಆದರೆ ಅಂತಿಮ್ ಫಂಘಾಲ್ ಸಹೋದರಿ ಇದನ್ನು ಬಳಸಿರುವುದಕ್ಕೆ ಅವರು ಒಲಿಂಪಿಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆಟದಿಂದ ಹೊರ ಹಾಕಲಾಗಿದೆ.

ಅಂತಿಮ್ ಫಂಘಾಲ್ ಪ್ರಿ ಕ್ವಾರ್ಟರ್ ಫೈನಲ್​​ನಲ್ಲಿ ಸೋತ ನಂತರ ತನ್ನ ತರಬೇತುದಾರ ಹಾಗೂ ಸಹೋದರಿಯೊಂದಿಗೆ ತಾವು ಉಳಿದಿದ್ದ ಹೋಟೆಲ್​​ಗೆ ಹೋಗಿದ್ದಾರೆ. ಆದರೆ ಅಂತಿಮ್ ಫಂಘಾಲ್ ಗೇಮ್ಸ್ ವಿಲೇಜ್‌ನಲ್ಲಿ ತಮ್ಮ ಬ್ಯಾಗ್​​​ ಬಿಟ್ಟ ಕಾರಣ, ತನ್ನ ಸಹೋದರಿ ನಿಶಾ ಅವರಿಗೆ ತಮ್ಮ ಅಧಿಕೃತ ಕಾರ್ಡ್‌ ನೀಡಿ ಬ್ಯಾಗ್​​ ತರಲು ಹೇಳಿದ್ದಾರೆ. ಆದರೆ ಇದೀಗ ಇದು ಒಲಿಂಪಿಕ್​​​​ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಸಹೋದರಿಯನ್ನು ಗೇಮ್ಸ್​​ ವಿಲೇಜ್​​ಗೆ ಕಳುಹಿಸಿದರು ಕಾರಣ ಅಂತಿಮ್ ಫಂಘಾಲ್ ಅವರನ್ನು ಗಡಿಪಾರು ಮಾಡಲಾಗಿದೆ.

ಇನ್ನು ಈ ಬಗ್ಗೆ ಭಾರತೀಯ ಒಲಿಂಪಿಕ್ ಸಂಸ್ಥೆ ಮಾಹಿತಿ ನೀಡಿದ್ದು, ಶಿಸ್ತಿನ ಉಲ್ಲಂಘನೆಯನ್ನು ಫ್ರೆಂಚ್​​ ಅಧಿಕಾರಿಗಳ ಗಮನಕ್ಕೆ ತಂದ ಕಾರಣ ಅಂತಿಮ್ ಫಂಘಾಲ್ ಹಾಗೂ ಅವರ ಸಿಬ್ಬಂದಿಯನ್ನು ವಾಪಸ್ಸು ಭಾರತಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ಇದರ ಜತೆಗೆ ಅಂತಿಮ್ ಫಂಘಾಲ್ ಸಹಾಯ ಸಿಬ್ಬಂದಿ ವಿಕಾಸ್ ಮತ್ತು ಭಗತ್ ಮೇಲೆ ಪೊಲೀಸ್​​​ ದೂರು ನೀಡಲಾಗಿದೆ. ಇವರಿಬ್ಬರು ಕುಡಿದು ಕ್ಯಾಬ್‌ನಲ್ಲಿ ಪ್ರಯಾಣಿಸಿದ್ದಾರೆ. ಹಾಗೂ ಕಾರು ಚಾಲಕನಿಗೆ ಹಣ ನೀಡುವಾಗ ಕಿರಿಕಿರಿ ಮಾಡಿದ್ದಾರೆ ಎಂದು ಪೊಲೀಸರಿಗೆ ಕ್ಯಾಬ್​​ ಡ್ರೈವರ್​​​ ಪೊಲೀಸ್​​ ದೂರು ನೀಡಿದ್ದಾರೆ. ಆದರೆ ಅಂತಿಮ್ ಫಂಘಾಲ್ ಸಿಬ್ಬಂದಿಗಳು ಈ ಆರೋಪವನ್ನು ನಿರಕಾರಿಸಿದ್ದಾರೆ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 am, Thu, 8 August 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ