Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತ ಹಾಕಿ ತಂಡ ಪ್ರಕಟ; ಹೊಸಬರಿಗೆ ಸ್ಥಾನ

Paris Olympics 2024: ಜುಲೈ 26 ರಿಂದ ಪ್ರಾರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್​ಗೆ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ 5 ಹೊಸ ಆಟಗಾರರು ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಉಳಿದಂತೆ ತಂಡದ ನಾಯಕತ್ವವನ್ನು ಹರ್ಮನ್‌ಪ್ರೀತ್ ಸಿಂಗ್ ನಿರ್ವಹಿಸಲಿದ್ದಾರೆ.

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತ ಹಾಕಿ ತಂಡ ಪ್ರಕಟ; ಹೊಸಬರಿಗೆ ಸ್ಥಾನ
ಭಾರತ ಹಾಕಿ ತಂಡ
Follow us
|

Updated on:Jul 12, 2024 | 2:13 PM

ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಅಂದರೆ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ 5 ಹೊಸ ಆಟಗಾರರು ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಟೀಂ ಇಂಡಿಯಾದ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಜುಲೈ 26 ರಿಂದ ಪ್ರಾರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್​ಗೆ ಆಗಸ್ಟ್ 11 ರಂದು ತೆರೆ ಬೀಳಲಿದೆ. ಕಳೆದ ಬಾರಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಐವರಿಗೆ ಚೊಚ್ಚಲ ಒಲಿಂಪಿಕ್ಸ್

ಪ್ರಸ್ತುತ ಅಯ್ಕೆಯಾಗಿರುವ ಹಾಕಿ ತಂಡದಲ್ಲಿ ಪ್ರಮುಖವಾಗಿ ಐದು ಆಟಗಾರರು ಇದೇ ಮೊದಲ ಬಾರಿಗೆ ಒಲಿಂಪಿಕ್ಸ್​ನಲ್ಲಿ ಆಡಲಿದ್ದಾರೆ. ಈ ಐವರಲ್ಲಿ ಜರ್ಮನ್‌ಪ್ರೀತ್ ಸಿಂಗ್, ಸಂಜಯ್, ರಾಜ್ ಕುಮಾರ್ ಪಾಲ್, ಅಭಿಷೇಕ್, ಸುಖಜಿತ್ ಸಿಂಗ್ ಸೇರಿದ್ದಾರೆ. ಇನ್ನು ತಂಡವನ್ನು ಪ್ರಕಟಿಸಿದ ಬಳಿಕ ಮಾತನಾಡಿದ ಭಾರತ ಹಾಕಿ ತಂಡದ ಕೋಚ್ ಕ್ರೇಗ್ ಫುಲ್ಟನ್, ‘ಪ್ಯಾರಿಸ್ ಒಲಿಂಪಿಕ್ಸ್‌ಗೆ ಆಟಗಾರರನ್ನು ಆಯ್ಕೆ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಏಕೆಂದರೆ ನಮ್ಮಲ್ಲಿ ಪ್ರತಿಭಾವಂತ ಆಟಗಾರರ ಕೊರತೆಯಿಲ್ಲ. ತಂಡದಲ್ಲಿ ಆಯ್ಕೆಯಾಗಿರುವ ಎಲ್ಲ ಆಟಗಾರರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ವಿಶ್ವಾಸವಿದೆ. ಈ ಬಾರಿ ತಂಡದಲ್ಲಿ ಅನುಭವಿ ಹಾಗೂ ಯುವ ಆಟಗಾರರ ಉತ್ತಮ ಮಿಶ್ರಣವಿದೆ ಎಂದಿದ್ದಾರೆ.

ಭಾರತ ಹಾಕಿ ತಂಡ: ಹರ್ಮನ್‌ಪ್ರೀತ್ ಸಿಂಗ್ (ನಾಯಕ), ಹಾರ್ದಿಕ್ ಸಿಂಗ್ (ಉಪನಾಯಕ), ಪಿಆರ್ ಶ್ರೀಜೇಶ್ (ಗೋಲ್‌ಕೀಪರ್), ಮನ್‌ಪ್ರೀತ್ ಸಿಂಗ್ (ಮಿಡ್‌ಫೀಲ್ಡರ್), ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿದಾಸ್, ಸುಮಿತ್ ಮತ್ತು ಸಂಜಯ್, ರಾಜ್ ಕುಮಾರ್ ಪಾಲ್, ಶಂಶೇರ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್, ಅಭಿಷೇಕ್, ಸುಖಜೀತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಮನದೀಪ್ ಸಿಂಗ್ ಮತ್ತು ಗುರ್ಜಂತ್ ಸಿಂಗ್.

ಮೀಸಲು ಆಟಗಾರರು: ಗೋಲ್‌ಕೀಪರ್ ಕೃಷ್ಣ ಬಹದ್ದೂರ್ ಪಾಠಕ್, ಮಿಡ್‌ಫೀಲ್ಡರ್ ನೀಲಕಾಂತ್ ಶರ್ಮಾ ಮತ್ತು ಡಿಫೆಂಡರ್ ಜುಗರಾಜ್ ಸಿಂಗ್.

ಒಲಿಂಪಿಕ್ಸ್‌ನಲ್ಲಿ ಭಾರತದ ಪಂದ್ಯಗಳು

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಪೂಲ್-ಬಿಯಲ್ಲಿ ಸ್ಥಾನ ಪಡೆದಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಡಲು ಅಗ್ರ ನಾಲ್ಕು ತಂಡಗಳಲ್ಲಿ ಸ್ಥಾನ ಪಡೆಯಬೇಕಾಗಿದೆ. ಉಳಿದಂತೆ ಭಾರತ ಯಾವ್ಯಾವ ತಂಡಗಳನ್ನು ಎದುರಿಸಲಿದೆ ಎಂಬುದರ ವಿವರ ಇಲ್ಲಿದೆ.

  • ಭಾರತ vs ಬೆಲ್ಜಿಯಂ
  • ಭಾರತ vs ಆಸ್ಟ್ರೇಲಿಯಾ
  • ಭಾರತ vs ಅರ್ಜೆಂಟೀನಾ
  • ಭಾರತ vs ನ್ಯೂಜಿಲ್ಯಾಂಡ್
  • ಭಾರತ vs ಐರ್ಲೆಂಡ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Wed, 26 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ