Paris Olympics 2024: ಕ್ವಾರ್ಟರ್ ಫೈನಲ್‌ನಲ್ಲಿ ಭಾರತ ಹಾಕಿ ತಂಡಕ್ಕೆ ಎದುರಾಳಿ ಯಾರು ಗೊತ್ತಾ?

Paris Olympics 2024: ನಾಳೆ ನಡೆಯಲ್ಲಿರುವ ಕ್ವಾರ್ಟರ್ ಫೈನಲ್‌ ಸುತ್ತಿನಲ್ಲಿ ಭಾರತ ತಂಡ, ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ವಾಸ್ತವವಾಗಿ ಕಳೆದ ಬಾರಿಯ ಅಂದರೆ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಇದೇ ಗ್ರೇಟ್ ಬ್ರಿಟನ್ ತಂಡವನ್ನು ಸೋಲಿಸುವ ಮೂಲಕ ಭಾರತ ತಂಡ ಸೆಮಿಫೈನಲ್ ತಲುಪಿತ್ತು.

Paris Olympics 2024: ಕ್ವಾರ್ಟರ್ ಫೈನಲ್‌ನಲ್ಲಿ ಭಾರತ ಹಾಕಿ ತಂಡಕ್ಕೆ ಎದುರಾಳಿ ಯಾರು ಗೊತ್ತಾ?
ಭಾರತ ಹಾಕಿ ತಂಡ
Follow us
|

Updated on: Aug 03, 2024 | 6:58 PM

ಭಾರತ ಹಾಕಿ ತಂಡದ ಸುವರ್ಣ ಯುಗ ಮತ್ತೊಮ್ಮೆ ಮರಳುತ್ತಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ಕ್ವಾರ್ಟರ್ ಫೈನಲ್​ಗೆ ಲಗ್ಗೆ ಇಟ್ಟಿದೆ. ಪೂಲ್ ಸುತ್ತಿನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 3-2 ಅಂತರದಲ್ಲಿ ಜಯ ಸಾಧಿಸಿದ ಭಾರತ ಹಾಕಿ ತಂಡ, 1972ರ ನಂತರ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಕಾಂಗರೂ ತಂಡದ ವಿರುದ್ಧ ಜಯ ಸಾಧಿಸಿದ ದಾಖಲೆ ನಿರ್ಮಿಸಿದೆ. ಇದೀಗ ಗುಂಪು ಸುತ್ತು ಮುಕ್ತಾಯಗೊಂಡಿದ್ದು, ಕ್ವಾರ್ಟರ್ ಫೈನಲ್ ಸುತ್ತು ನಾಳೆಯಿಂದ ಅಂದರೆ ಆಗಸ್ಟ್ 4 ರಿಂದ ಆರಂಭವಾಗಲಿದೆ. ಈ ಸುತ್ತಿನಲ್ಲಿ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿ ಪಂದ್ಯವಾಗಿರುವುದರಿಂದ ಭಾರತ ತಂಡ ಗೆಲ್ಲಲೇಬೇಕಾಗಿದೆ.

ಬಿ ಗುಂಪಿನಲ್ಲಿ 2ನೇ ಸ್ಥಾನ ಪಡೆದ ಭಾರತ

ವಾಸ್ತವವಾಗಿ ಭಾರತ ತಂಡ ಬಿ ಗುಂಪಿನಲ್ಲಿ ಸ್ಥಾನ ಪಡೆದಿತ್ತು. ಈ ಗುಂಪಿನಲ್ಲಿ ಬೆಲ್ಜಿಯಂ ತಂಡ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಒಂದು ಡ್ರಾದೊಂದಿಗೆ ಅಗ್ರಸ್ಥಾನದಲ್ಲಿದೆ. ಭಾರತ ತಂಡ ಮೂರು ಗೆಲುವು, ಒಂದು ಡ್ರಾ ಮತ್ತು ಒಂದು ಸೋಲಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ ಮೂರನೇ ಮತ್ತು ಅರ್ಜೆಂಟೀನಾ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಗಳಿಸಿವೆ. ಇತ್ತ ಎ ಗುಂಪಿನಿಂದ ಬ್ರಿಟನ್, ಸ್ಪೇನ್, ನೆದರ್ಲ್ಯಾಂಡ್ಸ್ ಮತ್ತು ಜರ್ಮನಿ ಕ್ವಾರ್ಟರ್​ ಫೈನಲ್​ಗೆ ಅರ್ಹತೆ ಪಡೆದಿವೆ.

ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಎದುರಾಳಿ ಯಾರು?

ನಾಳೆ ನಡೆಯಲ್ಲಿರುವ ಕ್ವಾರ್ಟರ್ ಫೈನಲ್‌ ಸುತ್ತಿನಲ್ಲಿ ಭಾರತ ತಂಡ, ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ವಾಸ್ತವವಾಗಿ ಕಳೆದ ಬಾರಿಯ ಅಂದರೆ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಇದೇ ಗ್ರೇಟ್ ಬ್ರಿಟನ್ ತಂಡವನ್ನು ಸೋಲಿಸುವ ಮೂಲಕ ಭಾರತ ತಂಡ ಸೆಮಿಫೈನಲ್ ತಲುಪಿತ್ತು. ಹೀಗಾಗಿ ಈ ಬಾರಿಯೂ ಭಾರತ ತಂಡ ಮತ್ತೊಮ್ಮೆ ಗ್ರೇಟ್ ಬ್ರಿಟನ್ ತಂಡವನ್ನು ಮಣಿಸಿ ಸೆಮಿಫೈನಲ್​ಗೆರಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ. ಇನ್ನು ಕ್ವಾರ್ಟರ್ ಫೈನಲ್​ನಲ್ಲಿ ಭಾರತ ಗೆದ್ದರೆ, ಸೆಮಿಫೈನಲ್​ನಲ್ಲಿ ಜರ್ಮನಿ ಮತ್ತು ಅರ್ಜೆಂಟೀನಾ ನಡುವಿನ ಕ್ವಾರ್ಟರ್ ಫೈನಲ್‌ ಪಂದ್ಯದ ವಿಜೇತರನ್ನು ಎದುರಿಸಲಿದೆ.

ಕ್ವಾರ್ಟರ್ ಫೈನಲ್‌ ಸುತ್ತು ಹೀಗಿರಲಿದೆ.

ಕ್ವಾರ್ಟರ್ ಫೈನಲ್ ಪಂದ್ಯಗಳು ಆಗಸ್ಟ್ 4 ರಂದು ನಡೆಯಲ್ಲಿವೆ. ಇದರಲ್ಲಿ ಯಾವ ತಂಡ ಯಾವ ತಂಡವನ್ನು ಎದುರಿಸಲಿದೆ ಎಂಬುದನ್ನು ನೋಡುವುದಾದರೆ..

  • ಜರ್ಮನಿ vs ಅರ್ಜೆಂಟೀನಾ,
  • ಭಾರತ vs ಗ್ರೇಟ್ ಬ್ರಿಟನ್,
  • ನೆದರ್ಲ್ಯಾಂಡ್ಸ್ vs ಆಸ್ಟ್ರೇಲಿಯಾ,
  • ಬೆಲ್ಜಿಯಂ vs ಸ್ಪೇನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ