AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಕ್ವಾರ್ಟರ್ ಫೈನಲ್​ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯುತ್ತಿವೆ. ಈ ತಂಡಗಳನ್ನು ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದ್ದು, ಈ ಎರಡು ಗ್ರೂಪ್​ಗಳಿಂದ ಒಟ್ಟು ಎಂಟು ತಂಡಗಳು ಮಾತ್ರ ಮುಂದಿನ ಹಂತಕ್ಕೇರಲಿದೆ. ಅದರಂತೆ ಇದೀಗ ಗ್ರೂಪ್-ಬಿ ಯಿಂದ ಬೆಲ್ಜಿಯಂ ಮತ್ತು ಭಾರತ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ.

Paris Olympics 2024: ಕ್ವಾರ್ಟರ್ ಫೈನಲ್​ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on:Jul 31, 2024 | 8:57 AM

Share

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡವು ಕ್ವಾರ್ಟರ್ ಫೈನಲ್​ ಹಂತಕ್ಕೆ ಪ್ರವೇಶಿಸಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಮುಂದಿನ ಹಂತಕ್ಕೇರಿದೆ. ಈ ಪಂದ್ಯದಲ್ಲಿ ಉತ್ತಮ ಹೊಂದಾಣಿಕೆಯ ಪ್ರದರ್ಶನ ನೀಡಿದ ಭಾರತ ತಂಡವು ಆರಂಭದಲ್ಲೇ ಐರ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿತ್ತು.

ಇದರ ನಡುವೆ 11ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಸ್ಟ್ರೋಕ್​ ಅನ್ನು ಟೀಮ್ ಇಂಡಿಯಾ ನಾಯಕ ಹರ್ಮನ್‌ಪ್ರೀತ್ ಸಿಂಗ್ ಗೋಲಾಗಿ ಪರಿವರ್ತಿಸಿ ಮುನ್ನಡೆ ತಂದುಕೊಟ್ಟರು. ಅತ್ತ ಒತ್ತಡಕ್ಕೆ ಒಳಗಾದ ಐರ್ಲೆಂಡ್ ಆಟಗಾರರು ಸತತ ತಪ್ಪುಗಳನ್ನು ಎಸೆದರು.

ಈ ತಪ್ಪುಗಳ ಸಂಪೂರ್ಣ ಲಾಭ ಪಡೆದ ಟೀಮ್ ಇಂಡಿಯಾ ಮುನ್ಪಡೆ ಆಟಗಾರರು ಸತತ ಪ್ರತಿ ದಾಳಿ ನಡೆಸಿತು. ಇದಾಗ್ಯೂ ಐರ್ಲೆಂಡ್ ತಂಡದ ಡಿಫೆಂಡರ್​​ಗಳನ್ನು ವಂಚಿಸಲು ಸಾಧ್ಯವಾಗಲಿಲ್ಲ.  ಆದರೆ 18ನೇ ನಿಮಿಷದಲ್ಲಿ ಗುರ್ಜಂತ್ ಸಿಂಗ್ ಅವರು ಮಿಡ್‌ಫೀಲ್ಡ್‌ನಲ್ಲಿ ಉತ್ತಮ ಪಾಸ್ ನೀಡಿದ್ದರು. ಈ ಪಾಸ್ ಮನ್‌ದೀಪ್ ಸಿಂಗ್ ಗೋಲಾಗಿಸಲು ಯತ್ನಿಸಿದ್ದರು. ಆದರೆ ಐರಿಶ್ ರಕ್ಷಣಾ ಆಟಗಾರ ಮಾಡಿದ ಫೌಲ್​ನಿಂದ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಲಭಿಸಿತು.

19ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಹರ್ಮನ್‌ಪ್ರೀತ್ ಸಿಂಗ್ ಮತ್ತೊಂದು ಗೋಲು ಬಾರಿಸಿದರು. ಇದರೊಂದಿಗೆ ಪಂದ್ಯವು 2-0 ಅಂತರದಲ್ಲಿ ಸಾಗಿತು. ಇತ್ತ 2 ಗೋಲುಗಳ ಮುನ್ನಡೆ ಪಡೆದ ಬಳಿಕ ಭಾರತ ತಂಡವು ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿತು. ಈ ಮೂಲಕ ಟೀಮ್ ಇಂಡಿಯಾ 2-0 ಅಂತರಿಂದ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು.

ಕ್ವಾರ್ಟರ್​ ಫೈನಲ್​ಗೆ ಎಂಟ್ರಿ:

ಈ ಗೆಲುವಿನೊಂದಿಗೆ ಭಾರತ ತಂಡವು ಕ್ವಾರ್ಟರ್ ಫೈನಲ್​ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡವು 3-2 ಅಂತರದಿಂದ ಗೆಲುವು ಸಾಧಿಸಿತ್ತು. ಹಾಗೆಯೇ ಅರ್ಜೆಂಟೀನಾ ವಿರುದ್ಧ 1-1 ಅಂತರದಿಂದ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಐರ್ಲೆಂಡ್ ವಿರುದ್ಧ 2-0 ಅಂತರದಿಂದ ಗೆದ್ದು ಮುಂದಿನ ಹಂತಕ್ಕೇರಿದೆ.

ಇದನ್ನೂ ಓದಿ: Suryakumar Yadav: ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಇನ್ನು ಗುರುವಾರ ನಡೆಯಲಿರುವ ಲೀಗ್ ಹಂತದ ಪಂದ್ಯದಲ್ಲಿ ಭಾರತ ತಂಡವು ಬೆಲ್ಜಿಯಂ ತಂಡವನ್ನು ಎದುರಿಸಲಿದೆ. ಮುಂದಿನ ಹಂತಕ್ಕೇರಿದರೂ ಈ ಪಂದ್ಯವು ಭಾರತದ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ವಿಶ್ವ ಹಾಕಿ ಶ್ರೇಯಾಂಕದಲ್ಲಿ ಬೆಲ್ಜಿಯಂ 4ನೇ ಸ್ಥಾನದಲ್ಲಿರುವ ತಂಡ. ಹೀಗಾಗಿ ಬಲಿಷ್ಠ ತಂಡವನ್ನು ಬಗ್ಗು ಬಡಿದು ಕ್ವಾರ್ಟರ್ ಫೈನಲ್​ಗೂ ಮುನ್ನ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಈ ಪಂದ್ಯದಲ್ಲೂ ಭಾರತ ತಂಡದ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

Published On - 8:56 am, Wed, 31 July 24

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು