AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinesh Phogat: ವಿನೇಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Paris Olympics 2024: ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ. ತೂಕ ಇಳಿಸುವ ಸಲುವಾಗಿ ರಾತ್ರಿ ಇಡೀ ಶ್ರಮಿಸಿದ್ದ ವಿನೇಶ್, ನಿರ್ಜಲೀಕರಣದಿಂದ ಬಳಲುತ್ತಿದ್ದು ಅವರನ್ನು ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ. ವಿನೇಶ್ ಕ್ಲಿನಿಕ್‌ಗೆ ದಾಖಲಾಗಿರುವ ಸುದ್ದಿ ತಿಳಿದ ನಂತರ ಪಿಟಿ ಉಷಾ ಮತ್ತು ಭಾರತೀಯ ಅಧಿಕಾರಿಗಳ ತಂಡ ಅವರನ್ನು ಭೇಟಿ ಮಾಡಲು ಅಲ್ಲಿಗೆ ತೆರಳಿದೆ ಎಂದು ವರದಿಯಾಗಿದೆ.

Vinesh Phogat: ವಿನೇಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ವಿನೇಶ್ ಫೋಗಟ್
ಪೃಥ್ವಿಶಂಕರ
|

Updated on:Aug 07, 2024 | 3:09 PM

Share

ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ. 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ. ಈ ಕ್ರಮದ ನಂತರ ಇಡೀ ದೇಶ ವಿನೇಶ್ ಜೊತೆ ನಿಂತಿದೆ. ಪ್ರಧಾನಿ ಮೋದಿ ಕೂಡ ವಿನೇಶ್ ಬೆಂಬಲಕ್ಕೆ ಬಂದಿದ್ದು, ಸರ್ಕಾರದಿಂದ ಸಾಧ್ಯವಾಗುವುದೆಲ್ಲವನ್ನು ಮಾಡುವಾಗಿ ಭರವಸೆ ನೀಡಿದ್ದಾರೆ. ಇದೆಲ್ಲದರ ನಡುವೆ ವಿನೇಶ್ ಫೋಗಟ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರು ಪ್ರಸ್ತುತ ಪ್ಯಾರಿಸ್​ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.ನಿರ್ಜಲೀಕರಣದಿಂದಾಗಿ ವಿನೇಶ್ ಅವರನ್ನು ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ. ವಿನೇಶ್ ಕ್ಲಿನಿಕ್‌ಗೆ ದಾಖಲಾಗಿರುವ ಸುದ್ದಿ ತಿಳಿದ ನಂತರ ಪಿಟಿ ಉಷಾ ಮತ್ತು ಭಾರತೀಯ ಅಧಿಕಾರಿಗಳ ತಂಡ ಅವರನ್ನು ಭೇಟಿ ಮಾಡಲು ಅಲ್ಲಿಗೆ ತೆರಳಿದೆ ಎಂಬ ಮಾಹಿತಿ ತಿಳಿದುಬಂದಿದೆ.

ವಿನೇಶ್ ಫೋಗಟ್ ನಿರ್ಜಲೀಕರಣದಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ತೂಕ ಇಳಿಸಿಕೊಳ್ಳಲು ವಿನೇಶ್ ಮಾಡಿದ ಪ್ರಯತ್ನದಿಂದ ಅವರು ನಿರ್ಜಲೀಕರಣಗೊಂಡಿದ್ದಾರೆ. ವಾಸ್ತವವಾಗಿ, ವಿನೇಶ್ ತನ್ನ ತೂಕವನ್ನು ಕಡಿಮೆ ಮಾಡಲು ಇಡೀ ರಾತ್ರಿ ಶ್ರಮಿಸಿದ್ದು, ಅವರು ನೀರನ್ನು ಕುಡಿಯದ ಕಾರಣ ಹೀಗಾಗಿದೆ ಎಂದು ಹೇಳಲಾಗುತ್ತಿದೆ.

ಚಿಕ್ಕಪ್ಪ ಮಹಾವೀರ್ ಫೋಗಟ್ ವಿಶ್ವಾಸ

ನಿಗದಿತ ತೂಕ ಇಲ್ಲದ ಕಾರಣ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿರುವ ವಿಷಯ ತಿಳಿದಕೂಡಲೇ ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅಸ್ವಸ್ತಗೊಂಡಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವಿನೇಶ್​ ಫೋಗಟ್ ಚಿನ್ನ ಗೆಲ್ಲುತ್ತಾರೆಂದು ಇಡೀ ದೇಶ ನಿರೀಕ್ಷಿಸಿತ್ತು. ಆದರೆ 50-100 ಗ್ರಾಂ ಅಧಿಕ ತೂಕ ಹೊಂದಿದ್ದರಿಂದ ಅನುಮತಿಸಲಾಗುತ್ತದೆ. ಹೀಗಾಗಿ ಹತಾಶರಾಗಬೇಡಿ ಎಂದು ನಾನು ದೇಶದ ಜನರನ್ನು ಕೇಳುತ್ತೇನೆ. ಮುಂದೆ ಒಂದು ದಿನ ಅವಳು ಖಂಡಿತವಾಗಿಯೂ ಪದಕವನ್ನು ತರುತ್ತಾಳೆ.ಮುಂದಿನ ಒಲಿಂಪಿಕ್ಸ್‌ಗೆ ವಿನೇಶ್​ ಫೋಗಟ್‌ರನ್ನ ಸಿದ್ಧಪಡಿಸುತ್ತೇನೆ ಎಂದು ವಿನೇಶ್​ ಫೋಗಟ್ ಚಿಕ್ಕಪ್ಪ ಮಹಾವೀರ್ ಫೋಗಟ್ ಹೇಳಿಕೆ ನೀಡಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ವಿನೇಶ್  ಪ್ರದರ್ಶನ

ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತನ್ನ ಪಯಣವನ್ನು ಉತ್ತಮವಾಗಿ ಆರಂಭಿಸಿದ್ದರು. ಅವರು ತಮ್ಮ ಮೊದಲ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಜಪಾನ್‌ನ ಸುಸಾಕಿಯನ್ನು ಸೋಲಿಸಿದ್ದರು. ಇದರ ನಂತರ, ಅವರು ಕ್ವಾರ್ಟರ್-ಫೈನಲ್ ಮತ್ತು ಸೆಮಿ-ಫೈನಲ್‌ಗಳಲ್ಲಿ ಪ್ರಚಂಡ ಗೆಲುವು ದಾಖಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರು. ಆದರೆ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಗಬಹುದು ಎಂದು ಅನಿಸುತ್ತಿರುವಾಗಲೇ ಅವರ ಅನರ್ಹತೆಯ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಿಂದ ವಿನೇಶ್ ಫೋಗಟ್ ನಿರ್ಗಮಿಸುವುದರೊಂದಿಗೆ ಭಾರತದ ಪದಕದ ನಿರೀಕ್ಷೆಯೂ ಕಮರಿ ಹೋಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Wed, 7 August 24

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ