AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಜಾವೆಲಿನ್​ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ

Neeraj Chopra: ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. 89.34 ಮೀಟರ್‌ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ ಅವರು 89.94 ಮೀ ಎಸೆತ ಮೂಲಕ ಇತಿಹಾಸ ಸೃಷ್ಟಿಸಿದರು. ಇದೀಗ ಭಾರತಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ. ಮತ್ತೊಮ್ಮೆ ಚಿನ್ನ ಗೆಲ್ಲುವ ಭರವಸೆ ಮೂಡಿಸಿದೆ.

Paris Olympics 2024: ಜಾವೆಲಿನ್​ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ
ನೀರಜ್ ಚೋಪ್ರಾ
ಅಕ್ಷಯ್​ ಪಲ್ಲಮಜಲು​​
|

Updated on:Aug 06, 2024 | 4:09 PM

Share

ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.  89.34 ಮೀಟರ್‌ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್‌ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ ಅವರು 89.94 ಮೀ ಎಸೆತ ಮೂಲಕ ಇತಿಹಾಸ ಸೃಷ್ಟಿಸಿದರು. ಚೋಪ್ರಾ ಅವರು ವೈಯಕ್ತಿಕ ಒಲಿಂಪಿಕ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಜಾವೆಲಿನ್​​ನಲ್ಲೂ ಹಾಗೂ ಒಲಿಂಪಿಕ್ ಹೊಸ ಅಧ್ಯಾಯವನ್ನು ಸೃಷ್ಟಿಸಿದರು. ಇನ್ನು ಅಂತಿಮ ಪಂದ್ಯ ಆಗಸ್ಟ್ 8 ರಂದು ನಡೆಯುವ ಸಾಧ್ಯತೆ ಇದೆ.

ಈ ವರ್ಷ ಕೇವಲ ಮೂರು ಈವೆಂಟ್‌ಗಳಲ್ಲಿ ಭಾಗವಹಿಸಿದ್ದರೂ, ವಿಶ್ವ ಚಾಂಪಿಯನ್​ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈಗಾಗಲೇ ನೀರಜ್ ಚೋಪ್ರಾ ಅವರು ವಿಶ್ವ ಮಟ್ಟದಲ್ಲಿ ಭಾರಿ ಪೈಪೋಟಿಯನ್ನು ನೀಡುತ್ತಾರೆ. 88.36 ಮೀಟರ್ ಎಸೆದ ಚೋಪ್ರಾ ಮೇನಲ್ಲಿ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ಎರಡನೇ ಸ್ಥಾನವನ್ನು ಗಳಿಸಿದರು. ಇದು ಕೂಡ ಅವರ ಉತ್ತಮ ಸಾಧನೆ ಆಗಿತ್ತು. ನಂತರ ಆಡ್ಕ್ಟರ್ ಸಮಸ್ಯೆಯಿಂದ ಮೇ 28 ರಂದು ಆಸ್ಟ್ರಾವಾ ಗೋಲ್ಡನ್ ಸ್ಪೈಕ್ ಈವೆಂಟ್‌ನಿಂದ ಹಿಂದೆ ಸರಿದರು. ಜೂನ್ 18 ರಂದು ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 85.97 ಮೀಟರ್‌ಗಳ ಎಸೆಯುವ ಮೂಲಕ ಮತ್ತೊಂದು ಮಹತ್ವದ ಸಾಧನೆಯನ್ನು ಮಾಡಿದರು.

ಇದನ್ನೂ ಓದಿ: ಕುಸ್ತಿ ಸ್ಪರ್ಧೆಯಲ್ಲಿ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ ಯುಯಿ ಸುಸಾಕಿ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನಂತರ, ಚೋಪ್ರಾ ಅವರು 15 ಸ್ಪರ್ಧೆಗಳಲ್ಲಿ ಎರಡು ಬಾರಿ 85 ಮೀಟರ್‌ಗಿಂತ ಕಡಿಮೆ ಎಸೆತ ಎಂದು ಹೇಳಬಹುದು. ಚೋಪ್ರಾ ಅವರ ಪ್ರಮುಖ ಸ್ಪರ್ಧಿಗಳೆಂದರೆ ಜರ್ಮನಿಯ ಜೂಲಿಯನ್ ವೆಬರ್, ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್ ಮತ್ತು ಜೆಕ್ ಎಸೆತಗಾರ ಜಾಕುಬ್ ವಡ್ಲೆಜ್. ವಡ್ಲೆಜ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದರು ಮತ್ತು ದೋಹಾ ಡೈಮಂಡ್ ಲೀಗ್‌ನಲ್ಲಿ ಚೋಪ್ರಾ ಸೋತರು.

ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಮೊದಲ ಭಾರತೀಯ. ಇದೀಗ ಎರಿಕ್ ಲೆಮ್ಮಿಂಗ್, ಜೊನ್ನಿ ಮೈರಾ, ಜಾನ್ ಝೆಲೆಜ್ನಿ ಮತ್ತು ಆಂಡ್ರಿಯಾಸ್ ಥೋರ್ಕಿಲ್ಡ್‌ಸೆನ್ ಸಾಲಿಗೆ ನೀರಜ್ ಚೋಪ್ರಾ ಸೇರಿದ್ದಾರೆ. ಇದು ಭಾರತ ಕ್ರೀಡಾ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Tue, 6 August 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?