ಪ್ಯಾರಿಸ್ ಒಲಿಂಪಿಕ್ಸ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ಕ್ರೀಡಾಕೂಟ ಆರಂಭವಾಗಲಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತದಿಂದ ಒಟ್ಟು 117 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇವರಲ್ಲಿ 47 ಮಹಿಳಾ ಮತ್ತು 70 ಪುರುಷ ಕ್ರೀಡಾಪಟುಗಳಿದ್ದಾರೆ. ಈ 117 ಕ್ರೀಡಾಪಟುಗಳಲ್ಲಿ ನಮ್ಮ ಕರ್ನಾಟಕದ 9 ಮಂದಿಯೂ ಸೇರಿದ್ದಾರೆ. ಇದೀಗ 33ನೇ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಈ 9 ಕ್ರೀಡಾಪಟುಗಳಿಗೆ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಲಾ ಐದು ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿದ್ದಾರೆ.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆ.ಗೋವಿಂದರಾಜು ಅವರು ಕರ್ನಾಟಕದಿಂದ ದೇಶವನ್ನು ಪ್ರತಿನಿಧಿಸುತ್ತಿರುವ 9 ಸ್ಪರ್ಧಿಗಳಿಗೆ ಪ್ರೋತ್ಸಾಹಧನ ನೀಡಬೇಕೆಂದು ಮನವಿ ಮಾಡಿದ್ದರು. ಇದೀಗ ಅಧ್ಯಕ್ಷರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಯೊಬ್ಬ ಸ್ಪರ್ಧಿಗೂ ತಲಾ 5 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡಿದ್ದಾರೆ. ಇದೀಗ ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ನಿಂದ ಪ್ರತ್ಯೇಕ ನೆರವು ದೊರೆಯಲಿದೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಿಎಂ, ‘ಪ್ಯಾರೀಸ್ ಒಲಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ.
ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ.
ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ.
ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್… pic.twitter.com/iCDrByCl9G
— Siddaramaiah (@siddaramaiah) July 20, 2024
ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ನಲ್ಲಿ ನಡೆಯಲಿರುವ ಒಲಂಪಿಕ್ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:49 pm, Sat, 20 July 24