Paris Olympics 2024: ಸೆಮಿಫೈನಲ್​ಗೇರಿದ ಲಕ್ಷ್ಯ ಸೇನ್..! ಒಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಶಟ್ಲರ್

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಯುವ ಷಟ್ಲರ್ ಲಕ್ಷ್ಯ ಸೇನ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಭಾರತದ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಲಕ್ಷ್ಯ ಸೇನ್, ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ನ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇದರೊಂದಿಗೆ ಒಲಿಂಪಿಕ್ ಇತಿಹಾಸದಲ್ಲಿ ಸೆಮಿಫೈನಲ್ ತಲುಪಿದ ಭಾರತದ ಮೊದಲ ಪುರುಷ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

Paris Olympics 2024: ಸೆಮಿಫೈನಲ್​ಗೇರಿದ ಲಕ್ಷ್ಯ ಸೇನ್..! ಒಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಶಟ್ಲರ್
ಲಕ್ಷ್ಯ ಸೇನ್
Follow us
ಪೃಥ್ವಿಶಂಕರ
|

Updated on:Aug 02, 2024 | 10:59 PM

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಯುವ ಷಟ್ಲರ್ ಲಕ್ಷ್ಯ ಸೇನ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಭಾರತದ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಲಕ್ಷ್ಯ ಸೇನ್, ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ನ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇದರೊಂದಿಗೆ ಒಲಿಂಪಿಕ್ ಇತಿಹಾಸದಲ್ಲಿ ಸೆಮಿಫೈನಲ್ ತಲುಪಿದ ಭಾರತದ ಮೊದಲ ಪುರುಷ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆಯ ಚೌ ತಿಯೆನ್ ಚೆನ್ ಅವರನ್ನು 19-21, 21-15, 21-12 ರಿಂದ ಸೋಲಿಸಿ ಸೆಮಿ-ಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ. ಇದೀಗ ಲಕ್ಷ್ಯ ಸೇನ್ ಪದಕಕ್ಕೆ ಕೇವಲ ಒಂದು ಗೆಲುವಿನ ಅಂತರದಲ್ಲಿದ್ದಾರೆ. ಲಕ್ಷ್ಯಕ್ಕೂ ಮುನ್ನ ಕಿಡಂಬಿ ಶ್ರೀಕಾಂತ್ (2016) ಮತ್ತು ಪರುಪಳ್ಳಿ ಕಶ್ಯಪ್ (2012) ಕ್ವಾರ್ಟರ್ ಫೈನಲ್ ತಲುಪಿದ್ದರು. ಆದರೆ ಕ್ವಾರ್ಟರ್ ಫೈನಲ್ ಮೀರಿ ಈ ಇಬ್ಬರು ಆಟಗಾರರಿಗೆ ಮುನ್ನಡೆಯಲು ಸಾಧ್ಯವಾಗಿರಲಿಲ್ಲ.

ರೋಚಕ ಜಯ

ತೀವ್ರ ಕುತೂಹಲದಿಂದ ಕೂಡಿದ್ದ ಈ ಪಂದ್ಯದಲ್ಲಿ ಉಭಯ ಆಟಗಾರರ ನಡುವೆ ತೀವ್ರ ಪೈಪೋಟಿ ಕಂಡುಬಂತು. ಇಬ್ಬರು ಶಟ್ಲರ್​ಗಳು ತಲಾ ಒಂದೊಂದು ಅಂಕ ಗಳಿಸಲು ಪರದಾಡುತ್ತಿರುವುದು ಕಂಡು ಬಂತು. ಮೊದಲ ಸೆಟ್‌ನಲ್ಲಿ ಚೈನೀಸ್ ತೈಪೆಯ ಚೌ ತಿಯೆನ್ ಚೆನ್ ಪ್ರಾಬಲ್ಯ ಸಾಧಿಸಿ 21-19 ರಿಂದ ಮೊದಲ ಸೆಟ್ ಗೆದ್ದರು. ನಂತರ ಎರಡನೇ ಸೆಟ್‌ನಲ್ಲಿ ಪುನರಾಗಮನ ಮಾಡಿದ ಲಕ್ಷ್ಯ 21-15 ರಲ್ಲಿ ಗೆದ್ದು ಪಂದ್ಯವನ್ನು ಸಮಬಲಗೊಳಿಸಿದರು. ಹೀಗಾಗಿ ಮೂರನೇ ಸೆಟ್ ತೀವ್ರ ರೋಚಕತೆ ಸೃಷ್ಟಿಸಿತ್ತು. ಅಂತಿಮವಾಗಿ ಲಕ್ಷ್ಯ 21-12 ರಿಂದ ಮೂರನೇ ಸೆಟ್​ ಗೆದ್ದು ಸೆಮಿ ಫೈನಲ್​ಗೆ ಎಂಟ್ರಿಕೊಟ್ಟರು.

ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಪ್ರಣಯ್ ಎದುರಾಳಿ

ಪುರುಷರ ಸಿಂಗಲ್ಸ್ ವಿಭಾಗದ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಲಕ್ಷ್ಯ ಸೇನ್, ಭಾರತದವರೇ ಆದ ಎಚ್ ಎಸ್ ಪ್ರಣಯ್ ಅವರನ್ನು 21-12, 21-6 ರಿಂದ ಸೋಲಿಸಿ ಕ್ವಾರ್ಟರ್ ಫೈನಲ್​ಗೆ ಲಗ್ಗೆ ಇಟ್ಟಿದ್ದರು. 21 ನಿಮಿಷಗಳ ಕಾಲ ನಡೆದ ಮೊದಲ ಸೆಟ್​ ಅನ್ನು 21-12 ರಿಂದ ಗೆದ್ದ ಲಕ್ಷ್ಯ ಸೇನ್, ಎರಡನೇ ಸೆಟ್‌ನಲ್ಲೂ ಪ್ರಬಲ ಪ್ರದರ್ಶನ ನೀಡಿ 18 ನಿಮಿಷಗಳ ಕಾಲ ನಡೆದ ಆಟದಲ್ಲಿ ಪ್ರಣಯ್ ಅವರನ್ನು 21-6 ರಿಂದ ಸೋಲಿಸಿ ಪಂದ್ಯವನ್ನು ಗೆದ್ದರು. ಈ ಪಂದ್ಯದ ಸೋಲಿನೊಂದಿಗೆ ಪ್ರಣಯ್ ಅವರ ಪ್ಯಾರಿಸ್ ಒಲಿಂಪಿಕ್ಸ್‌ ಪಯಣವೂ ಅಂತ್ಯಗೊಂಡಿತ್ತು. ಇದೀಗ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಪದಕದ ಭರವಸೆಯಾಗಿ ಲಕ್ಷ್ಯ ಸೇನ್ ಮಾತ್ರ ಉಳಿದಿದ್ದಾರೆ.

ಭಾರತಕ್ಕೆ ಕೊನೆಯ ಭರವಸೆ

ಏಕೆಂದರೆ ನಿನ್ನೆ ಅಂದರೆ ಆಗಸ್ಟ್ 1 ರಂದು ನಡೆದ ಬ್ಯಾಡ್ಮಿಂಟನ್ ಈವೆಂಟ್​ನಲ್ಲಿ ದೇಶಕ್ಕೆ ಪದಕದ ಭರವಸೆ ಮೂಡಿಸಿದ್ದ ಸ್ಟಾರ್ ಷಟ್ಲರ್ ಪಿವಿ ಸಿಂಧು ಸತತ ಮೂರನೇ ಒಲಿಂಪಿಕ್ಸ್ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದರು. ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿಯೇ ಸಿಂಧು ಸೋಲನ್ನು ಎದುರಿಸಬೇಕಾಯಿತು. ಇತ್ತ ಪುರುಷರ ಡಬಲ್ಸ್‌ನಲ್ಲಿ ಸೂಪರ್‌ಸ್ಟಾರ್ ಜೋಡಿ ಸಾತ್ವಿಕ್-ಚಿರಾಗ್ ಕೂಡ ಸೋಲನ್ನು ಎದುರಿಸಬೇಕಾಯಿತು. ಇಂತಹ ಪರಿಸ್ಥಿತಿಯಲ್ಲಿ ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಹಿರಿಯ ಆಟಗಾರ ಎಚ್‌ಎಸ್ ಪ್ರಣಯ್ ಅವರನ್ನು ಸೋಲಿಸಿದ ಲಕ್ಷ್ಯ ಅವರು ಬ್ಯಾಡ್ಮಿಂಟನ್‌ನಲ್ಲಿ ಭಾರತದ ಕೊನೆಯ ಭರವಸೆಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Fri, 2 August 24

ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ