Lakshya Sen: ಮೂರು ಬಾರಿ ಚಿನ್ನ ಗೆದ್ದಿರುವ ಲಕ್ಷ್ಯ ಸೇನ್​ಗೆ ಬಂಗಾರ ಪದಕದ ಲಕ್ಷ್ಯ

Paris Olympics 2024: ಭಾನುವಾರ ನಡೆಯಲಿರುವ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಸೆಮಿಫೈನಲ್​ನಲ್ಲಿ ಲಕ್ಷ್ಯ ಸೇನ್ ಡೆನ್ಮಾರ್ಕ್​ನ ವಿಕ್ಟರ್ ಆಕ್ಸೆಲ್ಸೆನ್ ಅವರನ್ನು ಎದುರಿಸಲಿದ್ದಾರೆ. ವಿಶೇಷ ಎಂದರೆ ವಿಕ್ಟರ್ ಆಕ್ಸೆಲ್ಸೆನ್ ವಿಶ್ವದ 2ನೇ ಶ್ರೇಯಾಂಕಿತ ಆಟಗಾರ. ಇದೀಗ ನಂಬರ್-2 ಷಟ್ಲರ್​ಗೆ 22ರ ಹರೆಯದ ಲಕ್ಷ್ಯ ಸೇನ್ ಸವಾಲೆಸೆಯಲು ಸಜ್ಜಾಗಿದ್ದಾರೆ.

Lakshya Sen: ಮೂರು ಬಾರಿ ಚಿನ್ನ ಗೆದ್ದಿರುವ ಲಕ್ಷ್ಯ ಸೇನ್​ಗೆ ಬಂಗಾರ ಪದಕದ ಲಕ್ಷ್ಯ
Lakshya Sen
Follow us
ಝಾಹಿರ್ ಯೂಸುಫ್
|

Updated on:Aug 03, 2024 | 3:16 PM

ಭಾರತದ ಯುವ ಷಟ್ಲರ್ ಲಕ್ಷ್ಯ ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಡ್ಮಿಂಟನ್​ನಲ್ಲಿ ಸೆಮಿಫೈನಲ್​ಗೆ ಪ್ರವೇಶಿಸುವ ಮೂಲಕ ಎಂಬುದು ವಿಶೇಷ. ಅಂದರೆ ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತದ ಯಾವುದೇ ಪುರುಷ ಷ್ಲಟರ್ ಸೆಮಿಫೈನಲ್​ಗೆ ಹಂತಕ್ಕೇರಿಲ್ಲ. ಆದರೆ ಈ ಬಾರಿ 22ರ ಹರೆಯ ಲಕ್ಷ್ಯ ಸೇನ್ ಈ ಸಾಧನೆ ಮಾಡಿದ್ದಾರೆ. ಕ್ವಾರ್ಟರ್-ಫೈನಲ್‌ನಲ್ಲಿ ಚೀನಾದ (ಚೈನೀಸ್ ತೈಪೆ) ಟಿಯೆನ್-ಚೆನ್ ವಿರುದ್ಧ 19-21, 21-15, 21-12 ಅಂತರದಿಂದ ಗೆಲ್ಲುವ ಮೂಲಕ ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್​ಗೇರಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

  • 2012ರ ಲಂಡನ್​ ಒಲಿಂಪಿಕ್ಸ್​ನಲ್ಲಿ ಪರುಪಳ್ಳಿ ಕಶ್ಯಪ್ ಕ್ವಾರ್ಟರ್ ಫೈನಲ್​ ಆಡಿದ್ದರು.
  • 2016 ರ ರಿಯೋ ಒಲಿಂಪಿಕ್ಸ್​ನಲ್ಲಿ ಕಿಡಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್​ಗೆ ತಲುಪಿದ್ದರು.
  • ಇದುವೇ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತೀಯ ಪುರುಷ ಷಟ್ಲರ್​ಗಳ ಶ್ರೇಷ್ಠ ಸಾಧನೆಯಾಗಿತ್ತು.

ಇದೀಗ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಲಕ್ಷ್ಯ ಸೇನ್ ಸೆಮಿಫೈನಲ್​ಗೇರಿದ್ದಾರೆ. ಈ ಮೂಲಕ ಪುರುಷರ ಬ್ಯಾಡ್ಮಿಂಟನ್​ನಿಂದ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಚೊಚ್ಚಲ ಪದಕ ಗೆದ್ದುಕೊಡುವ ಭರವಸೆ ಮೂಡಿಸಿದ್ದಾರೆ.

ಬಂಗಾರದ ಬೇಟೆ:

ಲಕ್ಷ್ಯ ಸೇನ್ ಈ ಹಿಂದೆ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದಾರೆ. ಏಷ್ಯನ್ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದ ಲಕ್ಷ್ಯ ಸೇನ್, ಆ ಬಳಿಕ ಯೂತ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಬಂಗಾರ ಪದಕ ಗೆದ್ದಿದ್ದರು.

ಇನ್ನು 2022 ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಲಕ್ಷ್ಯ ಸೇನ್ ಹಿಂತಿರುಗಿದ್ದರು. ಹೀಗಾಗಿಯೇ ಈ ಬಾರಿ ಕೂಡ ಯುವ ಷಟ್ಲರ್​ ಕಡೆಯಿಂದ ಬಂಗಾರದ ಪದಕವನ್ನು ನಿರೀಕ್ಷಿಸಲಾಗುತ್ತಿದೆ.

ಲಕ್ಷ್ಯ ಸೇನ್ ಅವರ ಸಾಧನೆಗಳು:

  •  ಬ್ಯಾಂಕಾಕ್‌ನಲ್ಲಿ ನಡೆದ 2016 ರ ಏಷ್ಯನ್ ಜೂನಿಯರ್ ಚಾಂಪಿಯನ್‌ಶಿಪ್‌- ಕಂಚಿನ ಪದಕ (ಬಾಲಕರ ಸಿಂಗಲ್ಸ್)
  • 2018 ರ ಜಕಾರ್ತದಲ್ಲಿ ನಡೆದ ಏಷ್ಯನ್ ಜೂನಿಯರ್ ಚಾಂಪಿಯನ್‌ಶಿಪ್‌- ಚಿನ್ನದ ಪದಕ (ಬಾಲಕರ ಸಿಂಗಲ್ಸ್)
  • ಬ್ಯೂನಸ್ ಐರಿಸ್‌ನಲ್ಲಿ ನಡೆದ 2018 ಯೂತ್ ಒಲಿಂಪಿಕ್ ಕ್ರೀಡಾಕೂಟ- ಚಿನ್ನದ ಪದಕ (ಮಿಶ್ರ ತಂಡ)
  • ಬ್ಯೂನಸ್ ಐರಿಸ್‌ನಲ್ಲಿ ನಡೆದ 2018 ಯೂತ್ ಒಲಿಂಪಿಕ್ ಕ್ರೀಡಾಕೂಟ- ಬೆಳ್ಳಿ ಪದಕ (ಬಾಲಕರ ಸಿಂಗಲ್ಸ್)
  • 2020 ರಲ್ಲಿ ಮನಿಲಾದಲ್ಲಿ ನಡೆದ ಏಷ್ಯಾ ಟೀಮ್ ಚಾಂಪಿಯನ್‌ಶಿಪ್‌- ಕಂಚಿನ ಪದಕ (ಪುರುಷರ ತಂಡ)
  • 2021 BWF ವಿಶ್ವ ಚಾಂಪಿಯನ್‌ಶಿಪ್‌- ಕಂಚಿನ ಪದಕ (ಪುರುಷರ ಸಿಂಗಲ್ಸ್)
  • 2022 ಬರ್ಮಿಂಗ್​ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟ- ಚಿನ್ನದ ಪದಕ (ಪುರುಷರ ಸಿಂಗಲ್ಸ್)

ಸೆಮಿಫೈನಲ್ ಎದುರಾಳಿ ಯಾರು?

ಭಾನುವಾರ ನಡೆಯಲಿರುವ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಸೆಮಿಫೈನಲ್​ನಲ್ಲಿ ಲಕ್ಷ್ಯ ಸೇನ್ ಡೆನ್ಮಾರ್ಕ್​ನ ವಿಕ್ಟರ್ ಆಕ್ಸೆಲ್ಸೆನ್ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಲಕ್ಷ್ಯ ಸೇನ್ ಗೆದ್ದರೆ ಭಾರತಕ್ಕೆ ಬೆಳ್ಳಿ ಪದಕ ಖಚಿತವಾಗಲಿದೆ. ಹೀಗಾಗಿ ನಿರ್ಣಾಯಕ ಪಂದ್ಯದ ಮೂಲಕ ಭಾರತೀಯ ತಾರೆ ಫೈನಲ್​ಗೆ ಪ್ರವೇಶಿಸಲಿ ಎಂದು ಆಶಿಸೋಣ.

Published On - 3:15 pm, Sat, 3 August 24

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ