AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ

Paris Olympics 2024: Paris Olympics 2024: ಭಾನುವಾರ ನಡೆದ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದ ಮನು ಭಾಕರ್, ಇದೀಗ ಸರಬ್ಜೋತ್ ಸಿಂಗ್ ಜೊತೆಗೂಡಿ ಮತ್ತೊಂದು ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಮೂಲಕ ದಿನಗಳ ಅಂತರದಲ್ಲಿ ಭಾರತದ ಪದಕಗಳ ಸಂಖ್ಯೆಯನ್ನು ಎರಡಕ್ಕೇರಿಸಿದ್ದಾರೆ.

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ
Manu Bhaker-Sarabjot Singh
Follow us
ಝಾಹಿರ್ ಯೂಸುಫ್
|

Updated on:Jul 30, 2024 | 2:29 PM

ಪ್ಯಾರಿಸ್ ಒಲಿಂಪಿಕ್ಸ್​ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ ಅವರನ್ನು 16-10 ಅಂತರದಿಂದ ಸೋಲಿಸಿ ಮನುಭಾಕರ್ – ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.

ಸೋಮವಾರ ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಮೂರನೇ ಸ್ಥಾನಗಳಿಸಿ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆಗಿಟ್ಟಿಸಿಕೊಂಡಿದ್ದರು. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ಒಟ್ಟು 580 ಅಂಕಗಳನ್ನು ಕಲೆಹಾಕಿದ್ದರು.

ಮತ್ತೊಂದೆಡೆ ರಿಪಬ್ಲಿಕ್ ಆಫ್ ಕೊರಿಯಾದ ಓಹ್ ಯೆ ಜಿನ್ ಮತ್ತು ಲೀ ವೊನ್ಹೋ 579 ಅಂಕಗಳಿಸಿ ನಾಲ್ಕನೇ ಸ್ಥಾನ ಪಡೆದಿದ್ದರು. ಇಲ್ಲಿ 3ನೇ ಮತ್ತು 4ನೇ ಸ್ಥಾನಗಳನ್ನು ಪಡೆದ ಸ್ಪರ್ಧಿಗಳ ನಡುವೆ ಕೇವಲ 1 ಅಂಕಗಳ ವ್ಯತ್ಯಾಸವಿದ್ದಿದ್ದರಿಂದ ಕಂಚಿನ ಪದಕದ ಸ್ಪರ್ಧೆಯಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಲಾಗಿತ್ತು.

ಅದರಂತೆ ಇದೀಗ ಕೊರಿಯನ್ ಜೋಡಿಯನ್ನು ಸೋಲಿಸಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿದ್ದಾರೆ.

ಮಿಶ್ರ 10 ಮೀಟರ್ ಏರ್ ಪಿಸ್ತೂಲ್ ಪದಕಗಳು:

  1. ಸರ್ಬಿಯಾ- ಚಿನ್ನ
  2. ಟರ್ಕಿ- ಬೆಳ್ಳಿ
  3. ಭಾರತ- ಕಂಚು

ಮನು ಭಾಕರ್ 2ನೇ ಪದಕ:

ವಿಶೇಷ ಎಂದರೆ ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮನು ಭಾಕರ್​ಗೆ ಇದು ಎರಡನೇ ಪದಕ. ಇದಕ್ಕೂ ಮುನ್ನ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಭಾರತದ ಪದಕದ ಖಾತೆ ತೆರೆದಿದ್ದರು.

ಇದೀಗ ಸರಬ್ಜೋತ್ ಸಿಂಗ್ ಜೊತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಮನು ಭಾಕರ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತಕ್ಕೆ 2ನೇ ಪದಕ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: Paris Olympics 2024: ಅರ್ಜೆಂಟೀನಾದ ಗೆಲುವು ಕಸಿದ ಭಾರತ

ಇನ್ನು ಮನು ಭಾಕರ್ 25 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಫರ್ಧೆಯಲ್ಲೂ ಭಾಗವಹಿಸುತ್ತಿದ್ದು, ಹೀಗಾಗಿ ಭಾರತೀಯ ನಾರಿಯಿಂದ ಮೂರನೇ ಪದಕವನ್ನು ನಿರೀಕ್ಷಿಸಬಹುದು.

Published On - 1:20 pm, Tue, 30 July 24

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್