Paris Olympics 2024: ‘ಬೇಗ ಗುಣಮುಖರಾಗಿ’; ನೀರಜ್ ಚೋಪ್ರಾ ಜೊತೆ ಮೋದಿ ಮಾತು

|

Updated on: Aug 09, 2024 | 3:30 PM

Paris Olympics 2024: ಸಾಕಷ್ಟು ಪೈಪೋಟಿಯಿಂದ ಕೂಡಿದ್ದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 89.45 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆಲ್ಲುವಲ್ಲಿ ನೀರಜ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್​ಗಳಲ್ಲಿ ಪದಕ ಭೇಟೆಯಾಡಿದ ಭಾರತದ ನಾಲ್ಕನೇ ಅಥ್ಲೀಟ್ ಎನಿಸಿಕೊಂಡರು. ಹೀಗಾಗಿ ನೀರಜ್ ಅವರ ಸಾಧನೆಗೆ ಭಾರತದಾದ್ಯಂತೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಕೂಡ ನೀರಜ್ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.

Paris Olympics 2024: ‘ಬೇಗ ಗುಣಮುಖರಾಗಿ’; ನೀರಜ್ ಚೋಪ್ರಾ ಜೊತೆ ಮೋದಿ ಮಾತು
ಪ್ರಧಾನಿ ಮೋದಿ, ನೀರಜ್ ಚೋಪ್ರಾ
Follow us on

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಕೊನೆಯ ಚಿನ್ನದ ಪದಕದ ಭರವಸೆಯಾಗಿದ್ದ ನೀರಜ್ ಚೋಪ್ರಾ ಕೂಡ ಚಿನ್ನದ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದರು. ಇದರೊಂದಿಗೆ ಈ ಒಲಿಂಪಿಕ್ಸ್​ನಲ್ಲಿ ಭಾರತದ ಚಿನ್ನದ ಕನಸು ಭಾಗಶಃ ಕಮರಿ ಹೋಗಿದೆ. ಆದಾಗ್ಯೂ ಸಾಕಷ್ಟು ಪೈಪೋಟಿಯಿಂದ ಕೂಡಿದ್ದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 89.45 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆಲ್ಲುವಲ್ಲಿ ನೀರಜ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್​ಗಳಲ್ಲಿ ಪದಕ ಭೇಟೆಯಾಡಿದ ಭಾರತದ ನಾಲ್ಕನೇ ಅಥ್ಲೀಟ್ ಎನಿಸಿಕೊಂಡರು. ಹೀಗಾಗಿ ನೀರಜ್ ಅವರ ಸಾಧನೆಗೆ ಭಾರತದಾದ್ಯಂತೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಪ್ರಧಾನಿ ಮೋದಿ ಕೂಡ ನೀರಜ್ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.

ಬೆಳ್ಳಿ ಪದಕ ಗೆದ್ದ ಭಾರತದ ನೀರಜ್ ಚೋಪ್ರಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ, ನೀರಜ್ ಅವರ ಅದ್ಭುತ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ, ಅವರ ಗಾಯದ ಬಗ್ಗೆಯೂ ವಿಚಾರಿಸಿದರು. ಇದಲ್ಲದೆ ನೀರಜ್ ತಾಯಿಯ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ನೀರಜ್ ಚೋಪ್ರಾ ಅವರ ಈ ಸಾಧನೆಗಾಗಿ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಲಾಗುತ್ತಿದೆ.

ತಮ್ಮದೇ ದಾಖಲೆ ಮುರಿದ ನೀರಜ್

ಸತತ ಎರಡನೇ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ನೀರಜ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ ಕಳೆದ ಒಲಿಂಪಿಕ್ಸ್‌ನಲ್ಲಿ ಅವರು 87.58 ಮೀಟರ್ ದೂರ ಎಸೆದು ಚಿನ್ನದ ಪದಕ ಗೆದ್ದಿದ್ದರು. ಆದರೆ ಈ ಬಾರಿ ಅವರು 89.45 ಮೀಟರ್ ದೂರ ಎಸೆದರಾದರೂ ಚಿನ್ನದ ಪದಕವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಆದಾಗ್ಯೂ ನೀರಜ್ ಚೋಪ್ರಾ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಎರಡನೇ ಅಥ್ಲೀಟ್ ಮತ್ತು ಅಥ್ಲೆಟಿಕ್ಸ್‌ನಲ್ಲಿ ಯಾವುದೇ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆ ಫೈನಲ್‌ನಲ್ಲಿ, ನೀರಜ್ ಜೂಲಿಯನ್ ವೆಬರ್, ಜಾಕೋಬ್ ವಾಡ್ಲೆಚ್ ಮತ್ತು ಜೊಹಾನ್ಸ್ ವೆಟರ್ ಅವರನ್ನು ಹಿಂದಿಕ್ಕಿ ಈ ಐತಿಹಾಸಿಕ ಸಾಧನೆ ಮಾಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Fri, 9 August 24