Paris Olympics 2024: ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ
Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಏರ್ ಪಿಸ್ತೂಲ್ ಶೂಟಿಂಗ್ನಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ಮಿಶ್ರ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಮನು ಭಾಕರ್ 2ನೇ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ಇದೀಗ ಸ್ವಪ್ನಿಲ್ ಕುಸಾಲೆ ಭಾರತಕ್ಕೆ ಮೂರನೇ ಪದಕ ಗೆದ್ದುಕೊಟ್ಟಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಚೀನಾದ ಲಿಯು ಯುಕುನ್ 463.6 ಅಂಕಗಳೊಂದಿಗೆ ಚಿನ್ನದ ಪದಕ ಗೆದ್ದುಕೊಂಡರೆ, ಉಕ್ರೇನ್ ಸೆರ್ಹಿ ಕುಲಿಶ್ 461.3 ಪಾಯಿಂಟ್ಸ್ನೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇನ್ನು 7ನೇ ಸ್ಥಾನದೊಂದಿಗೆ ಫೈನಲ್ಗೆ ಪ್ರವೇಶಿಸಿದ್ದ ಸ್ವಪ್ನಿಲ್ ಕುಸಾಲೆ ಅಂತಿಮ ಸುತ್ತಿನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದರು.
ಅಲ್ಲದೆ ಜೆಕ್ ರಿಪಬ್ಲಿಕ್ನ ಶೂಟರ್ ಜಿರಿ ಪ್ರೀವ್ರಾಟ್ಸ್ಕಿ (440.7 ಅಂಕಗಳು) ಅವರನ್ನು ಹಿಂದಿಕ್ಕಿ ಸ್ವಪ್ನಿಲ್ ಕುಸಾಲೆ ಮೂರನೇ ಸ್ಥಾನಕ್ಕೇರಿರು. ಈ ಮೂಲಕ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಚೊಚ್ಚಲ ಒಲಿಂಪಿಕ್ಸ್ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ: Manu Bhaker: ಒಲಿಂಪಿಕ್ಸ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಮನು ಭಾಕರ್
ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಇದಕ್ಕೂ ಮುನ್ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮಹಿಳಾ ಶೂಟರ್ ಮನು ಭಾಕರ್ ಭಾರತಕ್ಕೆ ಮೊದಲ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆ ಬಳಿಕ ಸರಬ್ಜೋತ್ ಸಿಂಗ್ ಜೊತೆಗೂಡಿ ಮಿಶ್ರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದರು. ಇದೀಗ ಶೂಟರ್ ಸ್ವಪ್ನಿಲ್ ಕುಸಾಲೆ 50 ಮೀ ರೈಫಲ್ 3 ಪೊಸಿಷನ್ ಸುತ್ತಿನ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಸಫಲರಾಗಿದ್ದಾರೆ.

ಪದಕ ವಿಜೇತ ಸ್ವಪ್ನಿಲ್ ಕುಸಾಲೆ
ಸ್ವಪ್ನಿಲ್ ಕುಸಾಲೆ ಅವರ ಈ ಹಿಂದಿನ ಸಾಧನೆಗಳು:
- ವಿಶ್ವ ಚಾಂಪಿಯನ್‌ಶಿಪ್, ಕೈರೋ (2022) – 4ನೇ ಸ್ಥಾನ.
- ಏಷ್ಯನ್ ಗೇಮ್ಸ್ (2022) – ಚಿನ್ನ ಪದಕ
- ವಿಶ್ವಕಪ್, ಬಾಕು (2023) – ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕ
- ವಿಶ್ವಕಪ್, ಬಾಕು (2023) ವೈಯಕ್ತಿಕ ಮತ್ತು ತಂಡದ ಸ್ಪರ್ಧೆಗಳಲ್ಲಿ ಎರಡು ಬೆಳ್ಳಿ ಪದಕಗಳು.
- ವಿಶ್ವ ಚಾಂಪಿಯನ್‌ಶಿಪ್, ಕೈರೋ (2022) – ತಂಡದ ಸ್ಪರ್ಧೆಯಲ್ಲಿ ಕಂಚಿನ ಪದಕ.
- ವಿಶ್ವಕಪ್, ನವದೆಹಲಿ (2021) – ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ.
Published On - 1:49 pm, Thu, 1 August 24