AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಕುಸ್ತಿ ಸ್ಪರ್ಧೆಯಲ್ಲಿ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ ಯುಯಿ ಸುಸಾಕಿ

Vinesh Phogat: ಪ್ಯಾರಿಸ್ ಒಲಿಂಪಿಕ್ಸ್ 2024ರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ವಿನೇಶ್ ಫೋಗಟ್ ಅವರು ಜಪಾನ್‌ನ ಯುಯಿ ಸುಸಾಕಿ ಅವರನ್ನು 16 ರ ಸುತ್ತಿನಲ್ಲಿ ಸೋಲಿಸಿದ್ದಾರೆ. ವಿನೇಶ್ ಫೋಗಟ್ ಈಗ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಉಕ್ರೇನ್‌ನ ಒಕ್ಸಾನಾ ಲಿವಾಚ್ ಅವರ ಮುಂದೆ ಸ್ಪರ್ಧಿಸಲಿದ್ದಾರೆ. ಇಲ್ಲಿ ವಿನೇಶ್ ಫೋಗಟ್ ಅವರು ತಮ್ಮ ಇದೇ ರೀತಿಯ ತಂತ್ರವನ್ನು ಉಪಯೋಗಿಸಿ ಪೈನಲ್​​ ಹೋಗುತ್ತಾರ ಎಂಬುದನ್ನು ಕಾದು ನೋಡಬೇಕಿದೆ.

Paris Olympics 2024: ಕುಸ್ತಿ ಸ್ಪರ್ಧೆಯಲ್ಲಿ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ ಯುಯಿ ಸುಸಾಕಿ
ವಿನೇಶ್ ಫೋಗಟ್
ಅಕ್ಷಯ್​ ಪಲ್ಲಮಜಲು​​
|

Updated on:Aug 06, 2024 | 6:21 PM

Share

ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024ರ  ಕುಸ್ತಿ ಸ್ಪರ್ಧೆಯ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಜಪಾನ್‌ನ ಯುಯಿ ಸುಸಾಕಿ ಅವರನ್ನು 16ನೇ ಸುತ್ತಿನಲ್ಲಿ ಸೋಲಿಸಿದ್ದಾರೆ. ಸುಸಾಕಿ ವಿಶ್ವ ಚಾಂಪಿಯನ್ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದು, ಇದೀಗ ವಿನೇಶ್ ಫೋಗಟ್ ಮುಂದೆ ಮಂಡಿಯೂರಿದ್ದಾರೆ.

ಸುಸಾಕಿ ತನ್ನ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಜಪಾನೀಸ್ ಅಲ್ಲದ ಎದುರಾಳಿಯ ವಿರುದ್ಧ ಸೋತಿದ್ದಾರೆ. ಇದಲ್ಲದೆ, ಇದು 14 ವರ್ಷಗಳಲ್ಲಿ ಅವರ ವೃತ್ತಿಜೀವನದ ನಾಲ್ಕನೇ ಸೋಲು ಎಂದು ಹೇಳಲಾಗಿದೆ. ಇನ್ನು ವಿನೇಶ್ ಫೋಗಟ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಫೋಗಾಟ್ ಆರಂಭಿಕ ಸುತ್ತಿನ ನಂತರ 0-2 ರಿಂದ ಹಿಂದುಳಿದಿದ್ದು, ಕೊನೆಯ 12 ಸೆಕೆಂಡುಗಳ ವರೆಗೆ ಅದೇ ಸ್ಥಿತಿ ಇತ್ತು. ಕೊನೆಯಲ್ಲಿ ಮಾಡು ಇಲ್ಲವೆ ಮಡಿ ಎಂಬಂತೆ ತನ್ನ ಬಲ ಪ್ರದರ್ಶನ ಮಾಡಿ ಸುಸಾಕಿ ಅವರನ್ನು ಸೋಲಿಸಿದರು.

ವಿನೇಶ್ ಫೋಗಟ್ ಈಗ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಉಕ್ರೇನ್‌ನ ಒಕ್ಸಾನಾ ಲಿವಾಚ್ ಅವರ ಮುಂದೆ ಸ್ಪರ್ಧಿಸಲಿದ್ದಾರೆ. ಇಲ್ಲಿ ವಿನೇಶ್ ಫೋಗಟ್ ಅವರು ತಮ್ಮ ಇದೇ ರೀತಿಯ ತಂತ್ರವನ್ನು ಉಪಯೋಗಿಸಿ ಪೈನಲ್​​ ಹೋಗುತ್ತಾರ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ವಿನೇಶ್ ಅವರ ಈ ಸಾಧನೆಗೆ ಭಾರತೀಯ ಕ್ರಿಕೆಟಿಗ ಮನೋಜ್ ತಿವಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾವೆಲಿನ್​ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ

ಒಲಿಂಪಿಕ್ ಚಾಂಪಿಯನ್ ಮತ್ತು 4ನೇ ಬಾರಿ ವಿಶ್ವ ಚಾಂಪಿಯನ್, ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯಲು ಜಪಾನ್‌ನ ಕುಸ್ತಿ ದಂತಕಥೆ ಯುಯಿ ಸುಸಾಕಿ ಅವರನ್ನು 2-0 ಅಂತರದಿಂದ ಸೋಲಿಸಿದರು! ಚೆನ್ನಾಗಿದೆ ಹುಡುಗಿ! ಚೆನ್ನಾಗಿದೆ!!” ತಿವಾರಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Tue, 6 August 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!