Paralympics 2024: ಭಾರತಕ್ಕೆ ಮೊದಲ ಚಿನ್ನದ ಪದಕ; 10 ಮೀ. ಏರ್ ರೈಫಲ್ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ
Paralympics 2024: ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಅವನಿ ಮುರಿದಿದ್ದಾರೆ. ವಾಸ್ತವವಾಗಿ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅವನಿ ಒಟ್ಟಾರೆಯಾಗಿ 249.6 ಅಂಕ ಕಲೆಹಾಕಿ ಚಿನ್ನದ ಪದಕ ಗೆದ್ದಿದ್ದರು. ಇದೀಗ ಪ್ಯಾರಿಸ್ನಲ್ಲಿ 249.7 ಅಂಕ ಗಳಿಸುವ ಮೂಲಕ ಚಿನ್ನ ಗೆದ್ದಿರುವ ಅವನಿ ತಮ್ಮದೇ ಹಳೆಯ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಇದಲ್ಲದೆ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದ ಸಾಧನೆಯನ್ನು ಅವನಿ ಮಾಡಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಪ್ಯಾರಾ ಶೂಟರ್ ಮೋನಾ ಅಗರ್ವಾಲ್ 228.7 ಅಂಕ ಗಳಿಸಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
625.8 ಅಂಕ ಗಳಿಸಿ ಫೈನಲ್‌ಗೆ ಲಗ್ಗೆ
ಫೈನಲ್ ಸುತ್ತಿಗೂ ಮುನ್ನ ನಡೆದಿದ್ದ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ಅರ್ಹತಾ ಸುತ್ತಿನಲ್ಲಿ 625.8 ಅಂಕ ಕಲೆಹಾಕಿ ಎರಡನೇ ಸ್ಥಾನ ಗಳಿಸುವ ಮೂಲಕ ಅವನಿ ಫೈನಲ್‌ಗೆ ಪ್ರವೇಶಿಸಿದ್ದರು. ಹಾಗೆಯೇ ಭಾರತದ ಮತ್ತೋರ್ವ ಪ್ಯಾರಾ ಶೂಟರ್ ಮೋನಾ ಅಗರ್ವಾಲ್ ಕೂಡ ಫೈನಲ್ ಅರ್ಹತಾ ಸುತ್ತಿನಲ್ಲಿ ಐದನೇ ಸ್ಥಾನ ಪಡೆದು ಫೈನಲ್‌ಗೆ ಲಗ್ಗೆ ಇಟ್ಟಿದ್ದರು. ಇದೀಗ ಈ ಇಬ್ಬರು ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ ದಕ್ಷಿಣ ಕೊರಿಯಾದ ಲೀ ಯುನ್ರಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.
🇮🇳🥇 𝗙𝗶𝗿𝘀𝘁 𝘁𝗶𝗺𝗲 𝘀𝗼 𝗻𝗶𝗰𝗲, 𝘀𝗵𝗲 𝗵𝗮𝗱 𝘁𝗼 𝗱𝗼 𝗶𝘁 𝘁𝘄𝗶𝗰𝗲! Avani Lekhara wins back-to-back Paralympic Golds, setting a new Paralympic record with a score of 249.6. She becomes the second Indian para-athlete to win multiple Gold medals at the Paralympics.
— Sportwalk Media (@sportwalkmedia) August 30, 2024
𝐁𝐑𝐄𝐀𝐊𝐈𝐍𝐆: 𝐆𝐎𝐋𝐃 & 𝐁𝐫𝐨𝐧𝐳𝐞 𝐦𝐞𝐝𝐚𝐥 𝐟𝐨𝐫 𝐈𝐧𝐝𝐢𝐚 𝐢𝐧 𝐒𝐡𝐨𝐨𝐭𝐢𝐧𝐠 𝐚𝐭 𝐏𝐚𝐫𝐢𝐬 𝐏𝐚𝐫𝐚𝐥𝐲𝐦𝐩𝐢𝐜𝐬 🔥🔥🔥
ಇದುವರೆಗೆ ಮೂರು ಪ್ಯಾರಾಲಿಂಪಿಕ್ಸ್ ಪದಕ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಲೆಖರಾ ಅವರ ಇದುವರೆಗಿನ ಪ್ರದರ್ಶನ ಅದ್ಭುತವಾಗಿದೆ. ಕಳೆದ ಬಾರಿ 10 ಮೀಟರ್ ಏರ್ ಈವೆಂಟ್ ಎಸ್ಎಚ್-1ರಲ್ಲಿ ಚಿನ್ನದ ಪದಕ ಜಯಿಸುವುದರೊಂದಿಗೆ 50 ಮೀಟರ್ ರೈಫಲ್ ತ್ರೀ ಪೊಸಿಷನ್ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಅಂದರೆ ಕಳೆದ ಬಾರಿ ಒಟ್ಟು ಎರಡು ಪದಕ ಗೆದ್ದಿದ್ದರು. ಈ ಬಾರಿಯೂ ಇದೇ ಪ್ರದರ್ಶನ ಮುಂದುವರಿಸಿದ ಅವರು 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು.
Avani Lekhara wins GOLD & Mona Agarwal wins Bronze medal in 10m Air Rifle Standing SH1 (Shooting). #Paris2024 #Paralympics2024 pic.twitter.com/C897FJPuQS
— India_AllSports (@India_AllSports) August 30, 2024
12 ನೇ ವಯಸ್ಸಿನಲ್ಲಿ ಕಾರು ಅಪಘಾತ
ಅವನಿ ಲೇಖರಾ ರಾಜಸ್ಥಾನದ ಜೈಪುರ ನಿವಾಸಿ. 2012 ರಲ್ಲಿ ಕಾರು ಅಪಘಾತದಲ್ಲಿ ಅವನಿ ವಅರ ಬೆನ್ನುಹುರಿಗೆ ಗಂಭೀರವಾಗಿ ಗಾಯವಾಗಿತ್ತು. ಇದರಿಂದಾಗಿ ಅವರು ಪಾರ್ಶ್ವವಾಯುವಿಗೆ ಒಳಗಾದರು. ಆ ಸಮಯದಲ್ಲಿ ಅವನಿ ಅವರಿಗೆ ಕೇವಲ 12 ವರ್ಷ. ಆದರೆ ಇದಾದ ನಂತರವೂ ಛಲ ಬಿಡದ ಅವನಿ ಶೂಟಿಂಗ್ ಅನ್ನೇ ವೃತ್ತಿಯನ್ನಾಗಿಸಿಕೊಂಡರು. ಇದಾದ ಬಳಿಕ 2015ರಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ ಅವನಿ ಆ ಬಳಿಕ ಹಿಂತಿರುಗಿ ನೋಡಲಿಲ್ಲ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:15 pm, Fri, 30 August 24