AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ. ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ […]

ದುಬೈ IPL ಪ್ರಾಯೋಜಕತ್ವ ಬಾಬಾ ರಾಮ್​ದೇವ್​ ಪತಂಜಲಿ ಕಂಪನಿ ತೆಕ್ಕೆಗೆ?
ಐಪಿಎಲ್​ ಟ್ರೋಪಿ
KUSHAL V
|

Updated on:Aug 10, 2020 | 9:09 PM

Share

ದೆಹಲಿ: ಯೋಗ ಗುರು ಬಾಬಾ ರಾಮ್​ದೇವ್​ರ ಪ್ರತಿಷ್ಠಿತ ಪತಂಜಲಿ ಆಯುರ್ವೇದ ಕಂಪನಿಯು ಪ್ರಧಾನಿ ಮೋದಿಯ ಆತ್ಮನಿರ್ಭರ​ ಭಾರತದ ಕರೆಗೆ ಓಗೊಟ್ಟಿದೆ.

ಹೌದು, ಪತಂಜಲಿ ಸಂಸ್ಥೆಯು ಇದೀಗ ಕ್ರಿಕೆಟ್​ ಲೋಕದ ಬಹುನಿರೀಕ್ಷಿತ IPL ಪಂದ್ಯಾವಳಿಯ ಮುಖ್ಯ ಪ್ರಾಯೋಜಕತ್ವದ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುವ ಯೋಚನೆಯಲ್ಲಿದೆ. ಪಂದ್ಯಾವಳಿಯ ಮುಖ್ಯ ಪ್ರಾಯೋಜಕನಾಗಿದ್ದ ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯು ಪ್ರಾಯೋಜಕತ್ವದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಈ ನಿರ್ಧಾರದಿಂದ ಸಂಸ್ಥೆಗೆ ಉತ್ತಮ ವೇದಿಕೆ ದೊರಕಲಿದ್ದು ತನ್ನ ಆಯುರ್ವೇದ ಉತ್ಪನ್ನಗಳು ಹಾಗೂ ಔಷಧಿಗಳನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ನೆರವಾಗಬಹುದು ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಖುದ್ದು ಸಂಸ್ಥೆಯ ವಕ್ತಾರ SK ತಿಜಾರವಾಲಾ ಹೇಳಿದ್ದಾರೆ.

ಪ್ರಧಾನಿ ಮೋದಿಯ Vocal for local ನಿಲುವಿಗೆ ಬೆಂಬಲ ಸೂಚಿಸುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಪರಿಚಯವೂ ಆಗಲಿದೆ ಎಂದು ತಿಜಾರವಾಲಾ ಹೇಳಿದ್ದಾರೆ. ಆದರೆ, ಈ ಕುರಿತು ಸದ್ಯ ಪತಂಜಲಿ ಸಂಸ್ಥೆಯು ಅಂತಿಮ ನಿರ್ಧಾರವನ್ನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Published On - 9:01 pm, Mon, 10 August 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ