PBKS vs RCB Playing XI: Rcb ತಂಡದಲ್ಲಿ ಮಹತ್ವದ ಬದಲಾವಣೆ: ಉಭಯ ತಂಡಗಳು ಹೀಗಿವೆ
PBKS vs RCB Playing XI: ಆರ್ಸಿಬಿ ತಂಡದಲ್ಲಿ ಅತ್ಯುತ್ತಮ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್ ಇದ್ದರೆ, ಪಂಜಾಬ್ ತಂಡದಲ್ಲಿ ಶಿಖರ್ ಧವನ್ ಇದ್ದಾರೆ. ಹಾಗೆಯೇ ದಿನೇಶ್ ಕಾರ್ತಿಕ್ಗೆ ಸರಿಸಾಟಿಯಾಗಿ ಮಯಾಂಕ್ ಅಗರ್ವಾಲ್ ಇದ್ದಾರೆ. ಇನ್ನು ಆರ್ಸಿಬಿಯಲ್ಲಿ ವಿರಾಟ್ ಕೊಹ್ಲಿ ಇದ್ದರೆ ಪಂಜಾಬ್ ತಂಡದಲ್ಲಿ ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್‌ಸ್ಟೋನ್ ಕಾಣಿಸಿಕೊಂಡಿದ್ದಾರೆ.

RCB Playing 11: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ನ (IPL 2022) 3ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಟಾಸ್ ಗೆದ್ದಿದೆ. ಅಲ್ಲದೆ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೊದಲು ಬ್ಯಾಟ್ ಮಾಡಲಿದ್ದು, ಈ ಮೂಲಕ ಬೃಹತ್ ಮೊತ್ತ ಪೇರಿಸುವ ಇರಾದೆಯಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ. ಉಭಯ ತಂಡಗಳೂ ಮೊದಲ ಪಂದ್ಯದಲ್ಲಿ ಗೆಲುವಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ. ಹೀಗಾಗಿ ಎರಡೂ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು. ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದೆ. ಆದರೆ ಈ ಹಿಂದಿನ ಅಂಕಿ ಅಂಶಗಳನ್ನು ನೋಡಿದ್ರೆ ಪಂಜಾಬ್ ಕಿಂಗ್ಸ್ ಮೇಲುಗೈ ಹೊಂದಿದೆ.
ಏಕೆಂದರೆ ಪಂಜಾಬ್ ಕಿಂಗ್ಸ್ ಹಾಗೂ RCB ಇದುವರೆಗೆ 28 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ 13 ಬಾರಿ ಮಾತ್ರ ಗೆದ್ದಿದೆ. ಅಂದರೆ 15 ಗೆಲುವು ದಾಖಲಿಸಿ ಪಂಜಾಬ್ ಕಿಂಗ್ಸ್ ಮೇಲುಗೈ ಹೊಂದಿದೆ. ಹಾಗೆಯೇ ಕೊನೆಯ 5 ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ 3 ಪಂದ್ಯ ಗೆದ್ದಿದೆ. ಇದಾಗ್ಯೂ ಕಳೆದ ಬಾರಿ ಎರಡೂ ತಂಡಗಳು ಒಂದೊಂದು ಪಂದ್ಯ ಗೆದ್ದುಕೊಂಡಿತ್ತು. ಆದರೆ ಈ ಹಿಂದಿನ ಆರ್ಸಿಬಿ ವಿರುದ್ದದ ಪಂದ್ಯದ ಗೆಲುವಿನಲ್ಲಿ ಕೆಎಲ್ ರಾಹುಲ್ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈ ಬಾರಿ ಕೆಎಲ್ ರಾಹುಲ್ ಪಂಜಾಬ್ ತಂಡದಲ್ಲಿಲ್ಲ. ಅದೇ ರೀತಿ ಇತ್ತ ಆರ್ಸಿಬಿ ತಂಡದಲ್ಲಿ ಎಬಿಡಿ ಕೂಡ ಇಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ. ಹೀಗಾಗಿ ಉಭಯ ತಂಡಗಳಿಂದ ಸಮಬಲದ ಹೋರಾಟ ನಿರೀಕ್ಷಿಸಬಹುದು.
ಇನ್ನು ಆರ್ಸಿಬಿ ತಂಡದಲ್ಲಿ ಅತ್ಯುತ್ತಮ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್ ಇದ್ದರೆ, ಪಂಜಾಬ್ ತಂಡದಲ್ಲಿ ಶಿಖರ್ ಧವನ್ ಇದ್ದಾರೆ. ಹಾಗೆಯೇ ದಿನೇಶ್ ಕಾರ್ತಿಕ್ಗೆ ಸರಿಸಾಟಿಯಾಗಿ ಮಯಾಂಕ್ ಅಗರ್ವಾಲ್ ಇದ್ದಾರೆ. ಇನ್ನು ಆರ್ಸಿಬಿಯಲ್ಲಿ ವಿರಾಟ್ ಕೊಹ್ಲಿ ಇದ್ದರೆ ಪಂಜಾಬ್ ತಂಡದಲ್ಲಿ ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್‌ಸ್ಟೋನ್ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಡೇಂಜರಸ್ ಶಾರೂಖ್ ಖಾನ್ ಕೂಡ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. ಹಾಗೆಯೇ ಬೌಲರ್ಗಳಾಗಿ ಇತ್ತ ಹರ್ಷಲ್ ಪಟೇಲ್ ಹಾಗೂ ಸಿರಾಜ್ ಇದ್ದರೆ, ಅತ್ತ ಅರ್ಷದೀಪ್ ಸಿಂಗ್ ಹಾಗೂ ಸಂದೀಪ್ ಶರ್ಮಾ ಕಾಣಿಸಿಕೊಂಡಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಆರ್ಸಿಬಿ ಪ್ಲೇಯಿಂಗ್ 11: ಫಾಫ್ ಡುಪ್ಲೆಸಿಸ್, ಅನೂಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫಾನ್ ರುದರ್ಫೋರ್ಡ್, ದಿನೇಶ್ ಕಾರ್ತಿಕ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಾರುಖ್ ಖಾನ್, ಒಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಸಂದೀಪ್ ಶರ್ಮಾ, ರಾಹುಲ್ ಚಾಹರ್
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು
Published On - 7:16 pm, Sun, 27 March 22
