ಫಿಲ್ ಸಾಲ್ಟ್ ರಾಕೆಟ್ ಸಿಕ್ಸ್ಗೆ ದಂಗಾದ ಪ್ರೇಕ್ಷಕರು
Phil Salt: ಫಿಲ್ ಸಾಲ್ಟ್ ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಕಳೆದ ಸೀಸನ್ನಲ್ಲಿ ಕೆಕೆಆರ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಾಲ್ಟ್ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದಿದ್ದರು. ಇದೀಗ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನಲ್ಲಿ ಫಿಲ್ ಸಾಲ್ಟ್ ಅಬ್ಬರ ಮುಂದುವರೆದಿದೆ. ಅದರಲ್ಲೂ ಲಂಡನ್ ಸ್ಪಿರಿಟ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಡನ್ ಸ್ಪಿರಿಟ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಫಿಲ್ ಸಾಲ್ಟ್ ಹಾಗೂ ಮ್ಯಾಥ್ಯೂ ಹರ್ಟ್ಸ್ ಇನಿಂಗ್ಸ್ ಆರಂಭಿಸಿದ್ದರು. ಆದರೆ ಕೇವಲ 2 ರನ್ಗಳಿಸಿ ಮ್ಯಾಥ್ಯೂ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಿಲ್ ಸಾಲ್ಟ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್ ಆ ಬಳಿಕ ಬಿರುಸಿನ ಹೊಡೆತಕ್ಕೆ ಕೈ ಹಾಕಿದರು. ಪರಿಣಾಮ 41 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳು ಒಳಗೊಂಡಂತೆ ಸಾಲ್ಟ್ ಬ್ಯಾಟ್ನಿಂದ 58 ರನ್ಗಳು ಮೂಡಿಬಂದಿದ್ದವು.
ಅದರಲ್ಲೂ ಒಲಿ ಸ್ಟೋನ್ ಎಸೆದ ಈ ಪಂದ್ಯದ 67ನೇ ಎಸೆತದಲ್ಲಿ ಫಿಲ್ ಸಾಲ್ಟ್ ಭರ್ಜರಿ ಸಿಕ್ಸ್ ಸಿಡಿಸಿದ್ದರು. ರಾಕೆಟ್ ವೇಗದಲ್ಲಿ ಆಕಾಶದತ್ತ ಚಿಮ್ಮಿದ ಸಿಕ್ಸ್ ನೋಡಿ ಅತ್ತ ಪ್ರೇಕ್ಷಕರು ಉದ್ಘರಿಸಿದರು. ಇದೀಗ ಈ ಭರ್ಜರಿ ಹೊಡೆತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇನ್ನು ಈ ಪಂದ್ಯದಲ್ಲಿ ಫಿಲ್ ಸಾಲ್ಟ್ ಬಾರಿಸಿದ ಅರ್ಧಶತಕದ ನೆರವಿನಿಂದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 135 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಂಡನ್ ಸ್ಪಿರಿಟ್ ತಂಡವು 123 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮ್ಯಾಂಚೆಸ್ಟರ್ ಒರಿಜಿನಲ್ಸ್ 12 ರನ್ಗಳ ಜಯ ಸಾಧಿಸಿದೆ.