ಭಾನುವಾರ ಬ್ಯಾಂಕಾಕ್‌ನಲ್ಲಿ ನಡೆದ ಥಾಮಸ್ ಮತ್ತು ಉಬರ್ ಕಪ್‌ನ ಫೈನಲ್‌ನಲ್ಲಿ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಇತಿಹಾಸ ಬರೆದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡದ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತೆ ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್ ಮತ್ತು ವಿಶ್ವದ 8ನೇ ಶ್ರೇಯಾಂಕದ ಡಬಲ್ಸ್ ಜೋಡಿಯ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಸ್ಪೂರ್ತಿದಾಯಕ ಪ್ರಯತ್ನದೊಂದಿಗೆ ಎದುರಾಳಿಯ ವಿರುದ್ಧ ಪ್ರಬಲ ಪ್ರದರ್ಶನ ನೀಡಿದರು. ಈ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದ ಭಾರತ ತಂಡದ ಪ್ರದರ್ಶನಕ್ಕೆ ಪಿಎಂ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು.
“ಭಾರತೀಯ ಬ್ಯಾಡ್ಮಿಂಟನ್ ತಂಡವು ಇತಿಹಾಸವನ್ನು ಬರೆದಿದೆ! ಥಾಮಸ್ ಕಪ್ ಗೆದ್ದ ಭಾರತ ತಂಡದಿಂದಾಗಿ ಇಡೀ ದೇಶವೇ ಸಂಭ್ರಮಿಸಿದೆ! ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗಾಗಿ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
The Indian badminton team has scripted history! The entire nation is elated by India winning the Thomas Cup! Congratulations to our accomplished team and best wishes to them for their future endeavours. This win will motivate so many upcoming sportspersons.
— Narendra Modi (@narendramodi) May 15, 2022
ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಥಾಮಸ್ ಮತ್ತು ಉಬರ್ ಕಪ್‌ನ ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಭಾರತೀಯ ಪುರುಷರ ತಂಡ ಐತಿಹಾಸಿಕ ಗೆಲುವು ದಾಖಲಿಸಿ ಬ್ಯಾಡ್ಮಿಂಟನ್ನಲ್ಲಿ ಹೊಸ ಚರಿತ್ರೆ ಬರೆದಿದೆ. ಈ ಮೂಲಕ ಚೀನಾ, ಇಂಡೋನೇಷ್ಯಾ, ಜಪಾನ್, ಡೆನ್ಮಾರ್ಕ್ ನಂತರ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎನಿಸಿಕೊಂಡಿದೆ.
ಲಕ್ಷ್ಯ ಸೇನ್, ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತು ಕಿಡಂಬಿ ಶ್ರೀಕಾಂತ್ ಅವರು ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ಇತಿಹಾಸ ಬರೆದಿದ್ದು, ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವು ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಕಿರೀಟವನ್ನು ತನ್ನದಾಗಿಸಿಕೊಂಡಿದೆ.
ಕಿಡಂಬಿ ಶ್ರೀಕಾಂತ್ ಎರಡನೇ ಸಿಂಗಲ್ಸ್‌ನಲ್ಲಿ 21-15, 23-21 ಜೊನಾಟನ್ ಕ್ರಿಸ್ಟಿ ಅವರನ್ನು ಸೋಲಿಸಿ ಸ್ಪರ್ಧೆಯ ಇತಿಹಾಸದಲ್ಲಿ ಭಾರತದ ಚೊಚ್ಚಲ ಕಿರೀಟಕ್ಕೆ ಮುದ್ರೆಯೊತ್ತಿದರು. ಇದಕ್ಕೂ ಮೊದಲು, ಯುವ ಆಟಗಾರ ವಿಶ್ವದ ಐದನೇ ಶ್ರೇಯಾಂಕಿತ ಆಂಥೋನಿ ಸಿನಿಸುಕಾ ಗಿಂಟಿಂಗ್ ವಿರುದ್ಧ ಗೆಲುವು ದಾಖಲಿಸಿದ ಲಕ್ಷ್ಯ ಸೇನ್ ಭಾರತಕ್ಕೆ ಅದ್ಭುತ ಆರಂಭ ಒದಗಿಸಿದ್ದರು.
ಆ ಬಳಿಕ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ತಮ್ಮ ಕೌಶಲ್ಯ ಮತ್ತು ಅನುಭವದೊಂದಿಗೆ ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸಂಜಯ ಸುಕಮುಲ್ಜೊ ಅವರನ್ನು ಸೋಲಿಸಿದರು. ಕಿಡಂಬಿ ಶ್ರೀಕಾಂತ್ ಅವರು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಜೊನಾಟನ್ ಕ್ರಿಸ್ಟಿ ಅವರನ್ನು 21-15 23-21 ರಿಂದ ಸೋಲಿಸುವ ಮೂಲಕ ಭಾರತಕ್ಕೆ ಮೊದಲ ಬಾರಿಗೆ ಥಾಮಸ್ ಕಪ್ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮೂಲಕ ಭಾರತ ತಂಡವು ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿ ಕಿರೀಟವನ್ನು ತನ್ನದಾಗಿಸಿಕೊಂಡಿದೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:09 pm, Sun, 15 May 22