PM Modi: ಪ್ರಧಾನಿ ಮೋದಿಗೆ ಲಿಯೋನೆಲ್ ಮೆಸ್ಸಿ ಜೆರ್ಸಿ ಗಿಫ್ಟ್ ನೀಡಿದ ವೈಪಿಎಫ್​

ಹಳ್ಳಿಗಳಲ್ಲಿ ಇಂಟರ್‌ನೆಟ್ ಸೌಲಭ್ಯ ಒದಗಿಸಲು ಆರು ಲಕ್ಷ ಕಿಲೋಮೀಟರ್‌ಗೂ ಹೆಚ್ಚು ಆಪ್ಟಿಕಲ್ ಫೈಬರ್ ನೆಟ್‌ವರ್ಕ್ ಹಾಕಲಾಗಿದೆ. ಭಾರತದಲ್ಲಿ ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆ 9 ವರ್ಷಗಳ ಹಿಂದೆ ಹೋಲಿಸಿದರೆ 13 ಪಟ್ಟು ಹೆಚ್ಚಾಗಿದೆ.

PM Modi: ಪ್ರಧಾನಿ ಮೋದಿಗೆ ಲಿಯೋನೆಲ್ ಮೆಸ್ಸಿ ಜೆರ್ಸಿ ಗಿಫ್ಟ್ ನೀಡಿದ ವೈಪಿಎಫ್​
PM Modi
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 06, 2023 | 7:41 PM

ಫೆಬ್ರವರಿ 6 ರಂದು ಬೆಂಗಳೂರಿನಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಉಡುಗೊರೆಯನ್ನು ಸ್ವೀಕರಿಸಿದರು. ಪ್ರಧಾನಿ ಮೋದಿಯವರ ಭಾಷಣ ಮುಗಿದ ನಂತರ, ಅರ್ಜೆಂಟೀನಾದ ಸರ್ಕಾರಿ ಸ್ವಾಮ್ಯದ ಕಂಪನಿ YPF ನ ಅಧ್ಯಕ್ಷ ಪಾಬ್ಲೋ ಗೊನ್ಜಾಲೆಜ್ ಅವರು ಖ್ಯಾತ ಫುಟ್​ಬಾಲ್ ತಾರೆ ಲಿಯೋನೆಲ್ ಮೆಸ್ಸಿ (lionel messi) ಅವರ ಜೆರ್ಸಿಯನ್ನು ಭಾರತೀಯ ಪ್ರಧಾನಿಗೆ ಉಡುಗೊರೆಯಾಗಿ ನೀಡಿದರು. ಕಳೆದ ವರ್ಷ ನಡೆದ ವಿಶ್ವಕಪ್​ ಫುಟ್​ಬಾಲ್​ ಟೂರ್ನಿಯಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ್ದ ಮೆಸ್ಸಿ ತಮ್ಮ ದೇಶಕ್ಕೆ ವಿಶ್ವಕಪ್ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮೆಸ್ಸಿಯ ವಿಶೇಷ ಜೆರ್ಸಿಯನ್ನು ಪ್ರಧಾನಿ ಮೋದಿ ಅವರಿಗೆ ವೈಪಿಎಫ್ ಕಂಪೆನಿಯ ಅಧ್ಯಕ್ಷರು ಉಡುಗೊರೆಯಾಗಿ ನೀಡಿರುವುದು ವಿಶೇಷ.

ಇನ್ನು ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಭಾರತವು ಪ್ರಸ್ತುತ ಅತ್ಯಂತ ಸೂಕ್ತವಾದ ಸ್ಥಳವಾಗಿದೆ. ಮುಂದಿನ ದಶಕದಲ್ಲಿ ದೇಶವು ಶಕ್ತಿಯ ಬೇಡಿಕೆಯಲ್ಲಿ ವಿಶ್ವದ ಅತ್ಯಂತ ವೇಗದ ಬೆಳವಣಿಗೆಯನ್ನು ವೀಕ್ಷಿಸುವ ನಿರೀಕ್ಷೆಯಿದೆ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಭಾರತದ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಅವಕಾಶಗಳನ್ನು ಅನ್ವೇಷಿಸಲು ನಾನು ನಿಮ್ಮನ್ನು ವಿನಂತಿಸುತ್ತೇನೆ. ಭಾರತವು ಇಂದು ಹೂಡಿಕೆಗೆ ಅತ್ಯಂತ ಸೂಕ್ತವಾದ ಸ್ಥಳವಾಗಿದೆ. ಜಾಗತಿಕ ಬಿಕ್ಕಟ್ಟಿನ ಹೊರತಾಗಿಯೂ, ಭಾರತವು ತನ್ನ ಆಂತರಿಕ ಸ್ಥಿತಿಸ್ಥಾಪಕತ್ವದಿಂದಾಗಿ 2022 ರಲ್ಲಿ ಜಗತ್ತಿಗೆ ಭರವಸೆಯ ತಾಣವಾಗಿ ಉಳಿದಿದೆ ಎಂದರು.

ಹಳ್ಳಿಗಳಲ್ಲಿ ಇಂಟರ್‌ನೆಟ್ ಸೌಲಭ್ಯ ಒದಗಿಸಲು ಆರು ಲಕ್ಷ ಕಿಲೋಮೀಟರ್‌ಗೂ ಹೆಚ್ಚು ಆಪ್ಟಿಕಲ್ ಫೈಬರ್ ನೆಟ್‌ವರ್ಕ್ ಹಾಕಲಾಗಿದೆ. ಭಾರತದಲ್ಲಿ ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆ 9 ವರ್ಷಗಳ ಹಿಂದೆ ಹೋಲಿಸಿದರೆ 13 ಪಟ್ಟು ಹೆಚ್ಚಾಗಿದೆ. ಅದೇ ಅವಧಿಯಲ್ಲಿ ಇಂಟರ್ನೆಟ್ ಸಂಪರ್ಕಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

ಏನಿದು YPF?

YPF ಎಂಬುದು ಅರ್ಜೆಂಟೀನಾದ ಸರ್ಕಾರಿ ಸ್ವಾಮ್ಯದ ಕಂಪೆನಿಯಾಗಿದೆ. ಇದು ಇಂಧನ ಕ್ಷೇತ್ರದಲ್ಲಿ, ಅಂದರೆ ತೈಲ ಮತ್ತು ಅನಿಲ ಪರಿಶೋಧನೆ ಮತ್ತು ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದೆ. ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆ, ಸಂಸ್ಕರಣೆ ಮುಂತಾದ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿದೆ. ಇದೀಗ ಭಾರತದ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿದ್ದು, ಮುಂದಿನ ದಿನಗಳಲ್ಲಿ ವೈಪಿಎಫ್ ಕಂಪೆನಿಯು ದೇಶದ ಇಂಧನ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡುವ ನಿರೀಕ್ಷಿಸಿದೆ.

Published On - 7:38 pm, Mon, 6 February 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ