Milkha Singh: ನಾವು ಒಬ್ಬ ಶ್ರೇಷ್ಠ ಆಟಗಾರನನ್ನು ಕಳೆದುಕೊಂಡಿದ್ದೇವೆ: ಮಿಲ್ಖಾ ಸಿಂಗ್ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

| Updated By: shruti hegde

Updated on: Jun 19, 2021 | 6:59 AM

Milkha Singh: ಕೆಲವೇ ದಿನಗಳ ಹಿಂದೆ ನಾನು ಮಿಲ್ಖಾ ಸಿಂಗ್ ಜಿ ಅವರೊಂದಿಗೆ ಮಾತನಾಡಿದ್ದೆ. ಆಗ, ಇದು ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ.

Milkha Singh: ನಾವು ಒಬ್ಬ ಶ್ರೇಷ್ಠ ಆಟಗಾರನನ್ನು ಕಳೆದುಕೊಂಡಿದ್ದೇವೆ: ಮಿಲ್ಖಾ ಸಿಂಗ್ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ
ಪ್ರಧಾನಿಯೊಂದಿಗೆ ಮಿಲ್ಖಾ ಸಿಂಗ್
Follow us on

ಫ್ಲೈಯಿಂಗ್ ಸಿಖ್ ಎಂದೇ ಖ್ಯಾತಿ ಪಡೆದಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಿಲ್ಖಾ ಸಿಂಗ್ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿರುವ ಪಿಎಂ ಮೋದಿ, ರಾಷ್ಟ್ರದ ಕಲ್ಪನೆಯನ್ನು ಸೆರೆಹಿಡಿದು ಅಸಂಖ್ಯಾತ ಭಾರತೀಯರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದ ಶ್ರೇಷ್ಠ ಕ್ರೀಡಾಪಟುವನ್ನು ನಾವು ಕಳೆದುಕೊಂಡಿದ್ದೇವೆ. ಅವರ ಸ್ಪೂರ್ತಿದಾಯಕ ವ್ಯಕ್ತಿತ್ವವು ಅವರನ್ನು ಲಕ್ಷಾಂತರ ಅಭಿಮಾನಿಗಳಿಗೆ ಪ್ರಿಯರನ್ನಾಗಿ ಮಾಡಿತ್ತು. ಅವರ ಸಾವಿನಿಂದ ನನಗೆ ತೀವ್ರ ನೋವಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದು ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ
ಮತ್ತೊಂದು ಟ್ವೀಟ್‌ ಮಾಡಿರುವ ಪಿಎಂ ಮೋದಿ, ಕೆಲವೇ ದಿನಗಳ ಹಿಂದೆ ನಾನು ಮಿಲ್ಖಾ ಸಿಂಗ್ ಜಿ ಅವರೊಂದಿಗೆ ಮಾತನಾಡಿದ್ದೆ. ಆಗ, ಇದು ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ. ಅನೇಕ ಕ್ರೀಡಾಪಟುಗಳು ಮಿಲ್ಖಾ ಅವರ ಜೀವನ ಪ್ರಯಾಣದಿಂದ ಸ್ಪೂರ್ತಿ ಪಡೆಯುತ್ತಾರೆ. ಅವರ ಕುಟುಂಬಕ್ಕೆ ಮತ್ತು ಪ್ರಪಂಚದಾದ್ಯಂತ ಇರುವ ಅವರ ಅನೇಕ ಅಭಿಮಾನಿಗಳಿಗೆ ನಾನು ಸಂತಾಪ ಸೂಚಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಪತ್ನಿ ಕೂಡ ಕೊರೊನಾ ಸೋಂಕಿಗೆ ಬಲಿ
ಕೆಲವು ದಿನಗಳ ಹಿಂದೆ, ಮಿಲ್ಖಾ ಸಿಂಗ್ ಅವರ ಪತ್ನಿ ಮತ್ತು ಭಾರತೀಯ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಸಹ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಪದ್ಮಶ್ರೀ ಮಿಲ್ಖಾ ಸಿಂಗ್ ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರಿಗೆ ಒಬ್ಬ ಮಗ ಮತ್ತು ಮೂವರು ಪುತ್ರಿಯರಿದ್ದಾರೆ. ಅವರ ಕುಟುಂಬದ ವಕ್ತಾರರೊಬ್ಬರು, ಮಿಲ್ಖಾ ಸಿಂಗ್ ರಾತ್ರಿ 11.00 ಕ್ಕೆ ನಿಧನರಾದರು ಎಂಬ ಮಾಹಿತಿ ನೀಡಿದ್ದಾರೆ.

ಸಂಜೆಯಿಂದ ಅವರ ಸ್ಥಿತಿ ಗಂಭೀರವಾಗಿತ್ತು ಮತ್ತು ಜ್ವರದ ಜೊತೆಗೆ ಆಮ್ಲಜನಕ ಮಟ್ಟವೂ ಕಡಿಮೆಯಾಗಿತ್ತು. ಅವರನ್ನು ಇಲ್ಲಿನ ಪಿಜಿಐಎಂಆರ್‌ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಯಿತು. ಕಳೆದ ತಿಂಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ಬುಧವಾರದಂದು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು. ಹೀಗಾಗಿ ಅವರನ್ನು ಜನರಲ್ ಐಸಿಯುಗೆ ವರ್ಗಾಯಿಸಲಾಯಿತು. ಆದರೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಅವರು ಕೊನೆಯುಸಿರೆಳಿದಿದ್ದಾರೆ.

ಇದನ್ನೂ ಓದಿ:

Milkha Singh: ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರು