ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತದಿಂದ ಬಿಡ್: ಪ್ರಧಾನಿ ನರೇಂದ್ರ ಮೋದಿ
PM Narendra Modi: ಒಲಿಂಪಿಕ್ಸ್ ಆಯೋಜಿಸುವುದು ದೇಶದಲ್ಲಿರುವ 140 ಕೋಟಿ ಭಾರತೀಯರ ಬಹುಕಾಲದ ಕನಸಾಗಿದೆ. 2029ರಲ್ಲಿ ಯೂತ್ ಒಲಿಂಪಿಕ್ಸ್ ಆಯೋಜಿಸಲು ಭಾರತವೂ ಹೆಚ್ಚಿನ ಆಸಕ್ತಿ ಹೊಂದಿದೆ. ಹೀಗಾಗಿ ಮುಂಬರುವ ಯೂತ್ ಒಲಿಂಪಿಕ್ಸ್ ಹಾಗೂ ಒಲಿಂಪಿಕ್ಸ್ ಅನ್ನು ಆಯೋಜಿಸಲು ಭಾರತ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ತಿಳಿಸಿದರು.
2036 ರಲ್ಲಿ ಒಲಿಂಪಿಕ್ಸ್ ಆಯೋಜಿಸಲು ಭಾರತ ಸಿದ್ಧವಾಗಿದ್ದು, ಅಂತಹ ಯಾವುದೇ ಅವಕಾಶವನ್ನು ಕೈ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ ಸಂಜೆ ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, 2036 ರ ಒಲಿಂಪಿಕ್ಸ್ ಆತಿಥ್ಯವಹಿಸಲು ಭಾರತ ಉತ್ಸುಕವಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಮುಂಬರುವ ಒಲಿಂಪಿಕ್ಸ್ ಆತಿಥ್ಯಕ್ಕಾಗಿ ಭಾರತ ಬಿಡ್ಡಿಂಗ್ ನಡೆಸುವುದನ್ನು ಪ್ರಧಾನಿ ಮೋದಿ ಖಚಿತ ಪಡಿಸಿದ್ದಾರೆ.
ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯುತ್ತಿರುವ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದಲ್ಲಿ ಮಾತನಾಡಿದ ಮಾನ್ಯ ಪ್ರಧಾನಿ, 40 ವರ್ಷಗಳ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಅಧಿವೇಶನ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. 2036 ರಲ್ಲಿ ಒಲಿಂಪಿಕ್ಸ್ ತಯಾರಿ ಮತ್ತು ಯಶಸ್ವಿಯಾಗಿ ಆಯೋಜಿಸುವಂತಹ ಯಾವುದೇ ಅವಕಾಶವನ್ನು ಭಾರತ ಕಳೆದುಕೊಳ್ಳಲು ಬಯಸುವುದಿಲ್ಲ ಎಂದರು.
ಒಲಿಂಪಿಕ್ಸ್ ಆಯೋಜಿಸುವುದು ದೇಶದಲ್ಲಿರುವ 140 ಕೋಟಿ ಭಾರತೀಯರ ಬಹುಕಾಲದ ಕನಸಾಗಿದೆ. 2029ರಲ್ಲಿ ಯೂತ್ ಒಲಿಂಪಿಕ್ಸ್ ಆಯೋಜಿಸಲು ಭಾರತವೂ ಹೆಚ್ಚಿನ ಆಸಕ್ತಿ ಹೊಂದಿದೆ. ಹೀಗಾಗಿ ಮುಂಬರುವ ಯೂತ್ ಒಲಿಂಪಿಕ್ಸ್ ಹಾಗೂ ಒಲಿಂಪಿಕ್ಸ್ ಅನ್ನು ಆಯೋಜಿಸಲು ಭಾರತ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯು ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳಿಸಿರುವುದನ್ನು ಪ್ರಸ್ತಾಪಿಸಿದ ಪ್ರಧಾನಿ, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕಾರ್ಯಕಾರಿ ಮಂಡಳಿಯು ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರಿಸಲು ಶಿಫಾರಸು ಮಾಡಿರುವುದು ಎಲ್ಲರಿಗೂ ಸಂತಸ ತಂದಿದೆ. ಅಲ್ಲದೆ ಶೀಘ್ರದಲ್ಲೇ ಸಕಾರಾತ್ಮಕ ಸುದ್ದಿ ಬರಲಿ ಎಂದು ಹಾರೈಸುತ್ತೇನೆ ಎಂದು ಎಂದರು.
#WATCH | Mumbai | At the 141st IOC Session, Prime Minister Narendra Modi says, “India is eager to organise Olympics in the country. India will leave no stone unturned in the preparation for the successful organisation of the Olympics in 2036, this is the dream of the 140 cr… pic.twitter.com/qLPc9CrNuF
— ANI (@ANI) October 14, 2023
ಇದೇ ವೇಳೆ, ಅಹಮದಾಬಾದ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಟೀಮ್ ಇಂಡಿಯಾವನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಅದ್ಭುತ ಗೆಲುವು ಸಾಧಿಸಿದೆ. ಕ್ರೀಡೆ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿದ್ದು, ಭಾರತದ ಹಳ್ಳಿಗಳಿಗೆ ಹೋದರೆ ಕ್ರೀಡೆಯಿಲ್ಲದೆ ಪ್ರತಿಯೊಂದು ಹಬ್ಬವೂ ಅಪೂರ್ಣ ಎಂದರು.
ಈ ಎಲ್ಲಾ ಕಾರಣಗಳಿಂದಾಗಿ ಭಾರತಕ್ಕೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಬೆಂಬಲ ಮತ್ತು ಪ್ರೋತ್ಸಾಹವಿದೆ. ಹೀಗಾಗಿ 2036 ರ ಒಲಿಂಪಿಕ್ಸ್ ಅನ್ನು ಭಾರತವೇ ಆಯೋಜಿಸುವ ವಿಶ್ವಾಸವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.
Published On - 2:00 pm, Sun, 15 October 23