AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sania Mirza: ‘ಚಾಂಪಿಯನ್ ಸಾನಿಯಾ’; ಭಾರತದ ಟೆನಿಸ್ ಲೆಜೆಂಡ್​ಗೆ ಪ್ರಧಾನಿ ಮೋದಿಯಿಂದ ಪ್ರಶಂಸನಾ ಪತ್ರ

ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನನ್ನ ಕೃತಜ್ಞತೆಗಳು. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಮ್ಮ ದೇಶವನ್ನು ಪ್ರತಿನಿಧಿಸುವಲ್ಲಿ ನಾನು ಯಾವಾಗಲೂ ಹೆಮ್ಮೆಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

Sania Mirza: ‘ಚಾಂಪಿಯನ್ ಸಾನಿಯಾ'; ಭಾರತದ ಟೆನಿಸ್ ಲೆಜೆಂಡ್​ಗೆ ಪ್ರಧಾನಿ ಮೋದಿಯಿಂದ ಪ್ರಶಂಸನಾ ಪತ್ರ
PM Narendra Modi sends heartwarming letter to Sania Mirza after her retirement Image Credit source: sports tiger
ಪೃಥ್ವಿಶಂಕರ
|

Updated on:Mar 11, 2023 | 6:01 PM

Share

ಕಳೆದ 6 ದಿನಗಳ ಹಿಂದೆ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ವಿದಾಯದ ಪಂದ್ಯ ಆಡುವುದರೊಂದಿಗೆ ಎರಡು ದಶಕಗಳ ಟೆನಿಸ್ ವೃತ್ತಿ ಬದುಕಿಗೆ ವಿದಾಯ ಹೇಳಿದ ಸಾನಿಯಾ ಮಿರ್ಜಾ (Sania Mirza) ಸದ್ಯ ಆರ್​ಸಿಬಿ (RCB) ಮಹಿಳಾ ತಂಡದ ಮೆಂಟರ್ ಆಗಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಳೆದ ಭಾನುವಾರ ನಡೆದ ಸಾನಿಯಾ ಅವರ ಕೊನೆಯ ಪಂದ್ಯ ವೀಕ್ಷಿಸಲು ಹಲವು ಗಣ್ಯರು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದರಲ್ಲಿ ಹಲವು ಸೆಲಬ್ರೆಟಿಗಳು ಕೂಡ ಉಪಸ್ಥಿತರಿದ್ದು, ಸಾನಿಯಾ ಅವರ ವೃತ್ತಿ ಬದುಕಿಗೆ ಅದ್ಧೂರಿ ತೆರೆ ಎಳೆದಿದ್ದರು. ಇವರಲ್ಲದೆ ದೇಶದ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi) ಕೂಡ ಮಾರ್ಚ್ 9 ರಂದು ಸಾನಿಯಾ ಮಿರ್ಜಾ ಅವರ ಸಾಧನೆಗೆ ದೇಶದ ಪರವಾಗಿ ಅಭಿನಂದನಾ ಪತ್ರವನ್ನು ಬರೆದಿದ್ದರು. ಇದೀಗ ಪ್ರಧಾನಿ ಅವರ ಅಭಿನಂದನಾ ಪತ್ರವನ್ನು ತಮ್ಮ ಟ್ವಿಟರ್ (Twitter) ಖಾತೆಯಲ್ಲಿ ಹಂಚಿಕೊಂಡಿರುವ ಸಾನಿಯಾ ಮಿರ್ಜಾ, ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಿಮ್ಮ ಬೆಂಬಲಕ್ಕೆ ಧನ್ಯವಾದಗಳು

ಪ್ರಧಾನಿ ಅವರ ಅಭಿನಂದನಾ ಪತ್ರವನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸಾನಿಯಾ, ‘ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನನ್ನ ಕೃತಜ್ಞತೆಗಳು. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ನಮ್ಮ ದೇಶವನ್ನು ಪ್ರತಿನಿಧಿಸುವಲ್ಲಿ ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಮತ್ತು ನಮ್ಮ ದೇಶವನ್ನು ಹೆಮ್ಮೆ ಪಡಿಸಲು ನಾನು ನನ್ನ ಕೈಲಾದಷ್ಟು ಮಾಡುವುದನ್ನು ಮುಂದುವರಿಸುತ್ತೇನೆ. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ಚಾಂಪಿಯನ್ ಸಾನಿಯಾ

ಚಾಂಪಿಯನ್ ಸಾನಿಯಾ ಎಂಬ ಹೊಗಳಿಕೆಯ ಮಾತಿನೊಂದಿಗೆ ಅಭಿನಂದನಾ ಪತ್ರವನ್ನು ಆರಂಭಿಸಿರುವ ಮೋದಿ, ಇಡೀ ಪತ್ರದಲ್ಲಿ ಸಾನಿಯಾ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಹಾಗೆಯೇ ಭಾರತದ ಟೆನಿಸ್​ಗೆ ಸಾನಿಯಾ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಸಾನಿಯಾ ಅವರ ತಂದೆ ತಾಯಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಸಾನಿಯಾ ಅವರ ಭವಿಷ್ಯದ ಯೋಜನೆಗಳಿಗು ಶುಭ ಹಾರೈಸಿದ್ದಾರೆ.

ದುಬೈನಲ್ಲಿ ವೃತ್ತಿಜೀವನದ ಕೊನೆಯ ಪಂದ್ಯ

ಈ ವರ್ಷದ ಫೆಬ್ರವರಿಯಲ್ಲಿ ದುಬೈನಲ್ಲಿ ತಮ್ಮ ವೃತ್ತಿಜೀವನದ ಕೊನೆಯ ವೃತ್ತಿಪರ ಪಂದ್ಯವನ್ನು ಆಡಿದ್ದ ಸಾನಿಯಾ, ಆ ಪಂದ್ಯದ ಮೊದಲ ಸುತ್ತಿನಲ್ಲೇ ಸೋತು ಟೂರ್ನಿಯಿಂದ ಹೊರಬಿದ್ದಿದ್ದರು. ಇದಾದ ಬಳಿಕ ಇದೇ ಮಾರ್ಚ್‌ನಲ್ಲಿ ಹೈದರಾಬಾದ್‌ನಲ್ಲಿ ನಡೆದ ವಿದಾಯ ಪಂದ್ಯದಲ್ಲಿ ಸಾನಿಯಾ ಕೊನೆಯ ಬಾರಿಗೆ ಆಡಿದ್ದರು. ಎಲ್​ಬಿ ಸ್ಟೇಡಿಯಂನಲ್ಲಿ ನಡೆದಿದ್ದ ಪಂದ್ಯದ ಮುಖಾಂತರ ಟೆನಿಸ್​ಗೆ ವಿದಾಯ ಹೇಳಿದ ಸಾನಿಯಾ ಅಂದು ಭಾವುಕರಾಗಿ ಕಣ್ಣೀರು ಹಾಕಿದ್ದರು.

ಪಂದ್ಯದ ನಂತರ, ನಗರದ ಟ್ರೈಡೆಂಟ್ ಹೋಟೆಲ್‌ನಲ್ಲಿ ಸಾನಿಯಾ ಅವರ ಬೀಳ್ಕೊಡುಗೆ ಕಾರ್ಯಕ್ರಮ ಕೂಡ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಫರ್ಹಾ ಖಾನ್, ಕೇಂದ್ರ ಸಚಿವ ಕಿರಣ್ ರಿಜಿಜು, ತೆಲಂಗಾಣ ಸಚಿವ ಕೆ.ಟಿ.ರಾಮರಾವ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜರುದ್ದೀನ್, ಇರ್ಫಾನ್ ಪಠಾಣ್, ಹುಮಾ ಖುರೇಷಿ, ಟಾಲಿವುಡ್ ನಟರಾದ ಮಹೇಶ್ ಬಾಬು-ನಮ್ರತಾ ಶಿರೋಡ್ಕರ್ ದಂಪತಿ, ಶಟ್ಲರ್ ಸೈನಾ ನೆಹ್ವಾಲ್, ಮ್ಯೂಸಿಕ್ ಮಾಂತ್ರಿಕ ಎಆರ್ ರೆಹಮಾನ್, ಕ್ರಿಕೆಟಿಗ ಯುವರಾಜ್ ಸಿಂಗ್ ಅತಿಥಿಗಳಾಗಿ ಭಾಗವಹಿಸಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sat, 11 March 23

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ