AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2021: ಬೆಂಗಳೂರು ಬುಲ್ಸ್​ಗೆ ಯುಪಿ ಯೋಧಾರ ಸವಾಲು: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

Bengaluru Bulls: ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬುಲ್ಸ್ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ.

Pro Kabaddi 2021: ಬೆಂಗಳೂರು ಬುಲ್ಸ್​ಗೆ ಯುಪಿ ಯೋಧಾರ ಸವಾಲು: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?
Bengaluru Bulls vs UP Yoddha
TV9 Web
| Edited By: |

Updated on:Jan 08, 2022 | 10:24 PM

Share

ಪ್ರೋ ಕಬಡ್ಡಿ ಲೀಗ್​ನ 44ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಯುಪಿ ಯೋಧಾ ತಂಡದ ವಿರುದ್ಧ ಸೆಣಸಲಿದೆ. ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಯುಪಿ ವಿರುದ್ದ ಗೆದ್ದರೆ ಮತ್ತೆ ಅಗ್ರಸ್ಥಾನಕ್ಕೇರಲಿದೆ. ಸದ್ಯ ದಂಬಾಗ್ ಡೆಲ್ಲಿ ತಂಡವು 31 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, 28 ಅಂಕ ಪಡೆದಿರುವ ಬೆಂಗಳೂರು ಬುಲ್ಸ್ 2ನೇ ಸ್ಥಾನದಲ್ಲಿದೆ. ಅತ್ತ ಆಡಿರುವ 7 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿರುವ ಯುಪಿ ಯೋಧಾ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇದಾಗ್ಯೂ ತಂಡದಲ್ಲಿ ಪರ್ದೀಪ್ ನರ್ವಾಲ್​ನಂತಹ ಸ್ಟಾರ್ ಆಟಗಾರರಿದ್ದು, ಹೀಗಾಗಿ ಬೆಂಗಳೂರು ವಿರುದ್ದದ ಜಯದೊಂದಿಗೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.

ಉಭಯ ತಂಡಗಳು ಪ್ರೋ ಕಬಡ್ಡಿ ಲೀಗ್​ನಲ್ಲಿ ಇದುವರೆಗೆ 9 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಬೆಂಗಳೂರು ಬುಲ್ಸ್ ತಂಡವು 6 ಬಾರಿ ಭರ್ಜರಿ ಜಯ ಸಾಧಿಸಿದರೆ, ಯುಪಿ ಯೋಧಾ 3 ಬಾರಿ ಗೆಲುವು ದಾಖಲಿಸಿದೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಎರಡೂ ಪಂದ್ಯಗಳಲ್ಲಿ ಯುಪಿ ಯೋಧಾ ಬೆಂಗಳೂರು ಬುಲ್ಸ್​ಗೆ ಸೋಲುಣಿಸಿತ್ತು ಎಂಬುದು ವಿಶೇಷ. ಹೀಗಾಗಿ ಈ ಬಾರಿ ಕೂಡ ಕಠಿಣ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಆದರೆ ಈ ಬಾರಿ ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬುಲ್ಸ್ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಹಾಗೆಯೇ ಒಂದು ಪಂದ್ಯವನ್ನು ಟೈ ಮಾಡಿಕೊಂಡಿದೆ. ಮತ್ತೊಂದೆಡೆ ಪರ್ದೀಪ್ ನವಾರ್ಲ್​ರಂತಹ ಸ್ಟಾರ್ ಆಟಗಾರರಿದ್ದರೂ ಯುಪಿ ಯೋಧಾ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಅಷ್ಟೇ ಅಲ್ಲದೆ ನಾಲ್ಕು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು 2 ಪಂದ್ಯಗಳನ್ನು ಟೈ ಮಾಡಿಕೊಂಡಿದೆ. ಅಷ್ಟೇ ಅಲ್ಲದೆ ಕೊನೆಯ ಎರಡು ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಯುಪಿ ಯೋಧಾ ಒತ್ತಡದಲ್ಲಿದೆ. ಹೀಗಾಗಿ ಪ್ರಸ್ತುತ ಫಾರ್ಮ್​ ಗಮನಿಸಿದರೆ ಬೆಂಗಳೂರು ಬುಲ್ಸ್ ಬಲಿಷ್ಠವಾಗಿದೆ ಎಂದೇ ಹೇಳಬಹುದು.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Pro Kabaddi 2021: Bengaluru Bulls vs UP Yoddha Head to Head)

Published On - 9:36 pm, Sat, 8 January 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?