Pro Kabaddi 2023: ಬೆಂಗಳೂರಿನಲ್ಲಿ ಇಂದು ಮೊದಲ ಕಬಡ್ಡಿ ಪಂದ್ಯ; ಬುಲ್ಸ್ ಎದುರಾಳಿ ಯಾರು ಗೊತ್ತಾ?

|

Updated on: Dec 08, 2023 | 12:00 PM

Pro Kabaddi 2023: ತವರಿನಲ್ಲಿ ಮೊದಲ ಪಂದ್ಯವನ್ನಾಡುತ್ತಿರುವ ಬೆಂಗಳೂರು ತಂಡ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿದೆ. ತಮ್ಮ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 31- 34 ಪಾಯಿಂಟ್​ಗಳ ಅಂತರದಿಂದ ಮಣಿದಿದ್ದ ಬುಲ್ಸ್ ಪಡೆ, ತಮ್ಮ ಹಿಂದಿನ ಪಂದ್ಯದಲ್ಲಿಯೂ ಬೆಂಗಾಲ್ ವಾರಿಯರ್ಸ್ ವಿರುದ್ಧ 32-30 ರಿಂದ ಸೋಲೊಪ್ಪಿಕೊಂಡಿತು.

Pro Kabaddi 2023: ಬೆಂಗಳೂರಿನಲ್ಲಿ ಇಂದು ಮೊದಲ ಕಬಡ್ಡಿ ಪಂದ್ಯ; ಬುಲ್ಸ್ ಎದುರಾಳಿ ಯಾರು ಗೊತ್ತಾ?
ಬೆಂಗಳೂರು ಬುಲ್ಸ್ ತಂಡ
Follow us on

ಪ್ರೊ ಕಬಡ್ಡಿ ಲೀಗ್‌ನಲ್ಲಿ (Pro Kabaddi 2023) ಶುಕ್ರವಾರ ಡಬಲ್ ಹೆಡರ್ ಪಂದ್ಯವಿದೆ. ದಿನದ ಮೊದಲ ಪಂದ್ಯ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ (Bengaluru Bulls vs Dabang Delhi KC) ನಡುವೆ ನಡೆಯಲಿದೆ. ಇದರ ಬೆನ್ನಲ್ಲೇ ಎರಡನೇ ಪಂದ್ಯ ಪುಣೇರಿ ಪಲ್ಟನ್ ಮತ್ತು ಯು ಮುಂಬಾ ನಡುವೆ ನಡೆಯಲಿದೆ. ಉಭಯ ತಂಡಗಳ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಬೆಂಗಳೂರು ಬುಲ್ಸ್ ಪಾಯಿಂಟ್ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ. ಈ ತಂಡ ಇದುವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ದಬಾಂಗ್ ಡೆಲ್ಲಿ ಅಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದು, ಆಡಿದ ಮೊದಲ ಪಂದ್ಯದಲ್ಲಿ ಸೋತಿರುವ ಡೆಲ್ಲಿ ತನ್ನ ಮೊದಲ ಗೆಲುವಿಗಾಗಿ ಕಾಯುತ್ತಿದೆ.

ಇನ್ನು ಎರಡನೇ ಪಂದ್ಯದ ಕುರಿತು ಮಾತನಾಡುವುದಾದರೆ, ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿರುವ ಪುಣೇರಿ ಪಲ್ಟಾನ್ ತಂಡವು 5 ನೇ ಸ್ಥಾನದಲ್ಲಿದಲ್ಲಿರುವ ಯು ಮುಂಬಾ ತಂಡವನ್ನು ಎದುರಿಸಲಿದೆ.

PKL 2023: ಇಂದು ಬೆಂಗಳೂರು ಬುಲ್ಸ್​ಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಾ?

ತವರಿನಲ್ಲಿ ಮೊದಲ ಗೆಲುವಿನ ಹುಡುಕಾಟ

ತವರಿನಲ್ಲಿ ಮೊದಲ ಪಂದ್ಯವನ್ನಾಡುತ್ತಿರುವ ಬೆಂಗಳೂರು ತಂಡ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿದೆ. ತಮ್ಮ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 31- 34 ಪಾಯಿಂಟ್​ಗಳ ಅಂತರದಿಂದ ಮಣಿದಿದ್ದ ಬುಲ್ಸ್ ಪಡೆ, ತಮ್ಮ ಹಿಂದಿನ ಪಂದ್ಯದಲ್ಲಿಯೂ ಬೆಂಗಾಲ್ ವಾರಿಯರ್ಸ್ ವಿರುದ್ಧ 32-30 ರಿಂದ ಸೋಲೊಪ್ಪಿಕೊಂಡಿತು. ಇದರೊಂದಿಗೆ ಇಲ್ಲಿಯವರೆಗೆ ಆಡಿರುವ ಎರಡೂ ಪಂದ್ಯಗಳನ್ನು ಬುಲ್ಸ್ ಸೋತಿದೆ. ಹೀಗಾಗಿ ತವರಿನಲ್ಲಿ ಈ ಆವೃತ್ತಿಯ ಮೊದಲ ಪಂದ್ಯವನ್ನಾಡುತ್ತಿರುವ ಬುಲ್ಸ್ ಪಡೆ, ಡೆಲ್ಲಿ ತಂಡವನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ.

ಪಂದ್ಯದ ಬಗ್ಗೆ ಪೂರ್ಣ ವಿವರ

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?

ಡಿಸೆಂಬರ್ 8 ರ ಶುಕ್ರವಾರದಂದು ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವೆ ಈ ಪಂದ್ಯ ನಡೆಯಲಿದೆ.

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಪಂದ್ಯ ಎಲ್ಲಿ ನಡೆಯಲ್ಲಿದೆ?

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಪಂದ್ಯ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲ್ಲಿದೆ.

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಈ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಬೆಂಗಳೂರು ಬುಲ್ಸ್ ವಿರುದ್ಧ ದಬಾಂಗ್ ಡೆಲ್ಲಿ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.

ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ನಡುವಿನ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

ಯಾವುದೇ ಶುಲ್ಕವಿಲ್ಲದೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ದೆಹಲಿ ನಡುವಿನ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:59 am, Fri, 8 December 23