Pro Kabaddi League: ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ; ಮಿಂಚಿದ ಪವನ್ ಶೆರಾವತ್

Pro Kabaddi League: ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ 11 ಅಂಕ ಗಳಿಸಿದರು. ಬೆಂಗಳೂರು ತಂಡ 23 ಅಂಕ ಗಳಿಸುವ ಮೂಲಕ ಪುಣೆಯನ್ನು ಹಿಂದಿಕ್ಕಿತು. ಪುಣೆಯ ಯಾವ ಆಟಗಾರನೂ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ.

Pro Kabaddi League: ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ; ಮಿಂಚಿದ ಪವನ್ ಶೆರಾವತ್
ಪುಣೆ ವಿರುದ್ಧ ಬೆಂಗಳೂರು ಬುಲ್ಸ್‌ಗೆ ಭರ್ಜರಿ ಜಯ
Follow us
TV9 Web
| Updated By: ಪೃಥ್ವಿಶಂಕರ

Updated on: Jan 02, 2022 | 10:29 PM

ಇಂದು ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಪುಣೇರಿ ಪಲ್ಟನ್ ತಂಡವನ್ನು 11 ಅಂಕಗಳ ಅಂತರದಿಂದ ಸೋಲಿಸಿತು. ಇಂದಿನ ಸೋಲಿನಿಂದಾಗಿ ಕೋಚ್ ಅನುಪ್ ಕುಮಾರ್ ಅವರ ಪುಣೆ ಪಲ್ಟನ್ ಸ್ಥಿತಿ ಹದಗೆಟ್ಟಿದೆ. ಪುಣೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅವರು ಐದು ಪಂದ್ಯಗಳಿಂದ ಕೇವಲ ನಾಲ್ಕು ಅಂಕಗಳನ್ನು ಹೊಂದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಬಲಿಷ್ಠ ಪ್ರದರ್ಶನ ಆರಂಭವಾಗಿದೆ. ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ 11 ಅಂಕ ಗಳಿಸಿದರು. ಬೆಂಗಳೂರು ತಂಡ 23 ಅಂಕ ಗಳಿಸುವ ಮೂಲಕ ಪುಣೆಯನ್ನು ಹಿಂದಿಕ್ಕಿತು. ಪುಣೆಯ ಯಾವ ಆಟಗಾರನೂ ದೊಡ್ಡ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಮೊದಲಾರ್ಧದಲ್ಲಿ ಹಿನ್ನಡೆ ಕಂಡರೂ ಬೆಂಗಳೂರು ಗೆದ್ದಿತು. ಈ ಋತುವಿನಲ್ಲಿ ದೆಹಲಿ ಮತ್ತು ಬೆಂಗಳೂರು ಎರಡೂ ಉತ್ತಮ ಫಾರ್ಮ್‌ನಲ್ಲಿವೆ. ದೆಹಲಿಯ ನವೀನ್ ಕುಮಾರ್ ಮತ್ತು ಬೆಂಗಳೂರಿನ ಪವನ್ ಶರಾವತ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ನಿನ್ನೆ ಕೊನೆ ಗಳಿಗೆಯಲ್ಲಿ ಪವನ್ ಬೆಂಗಳೂರು ತಂಡಕ್ಕೆ ಸೋಲು ತಪ್ಪಿಸಿದರು ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ನಡುವಿನ ರೋಚಕ ಕಾದಾಟದಲ್ಲಿ ಕಡೆಯ ನಿಮಿಷ ಬೆಂಗಳೂರಿನ ನಾಯಕ ಪವನ್ ಶೆರವತ್, ಟೈಟಾನ್ಸ್ ನಾಯಕ ರೋಹಿತ್ ಕುಮಾರ್ ಅವರನ್ನು ಹಿಡಿಯುವ ಮೂಲಕ ಪಂದ್ಯವನ್ನು 34-34 ಅಂಕಗಳಿಂದ ಟೈ ಗೊಳಿಸಲು ಯಶಸ್ವಿಯಾದರು. ಪಂದ್ಯದ ಮೊದಲ 10 ನಿಮಿಷಗಳ ಆಟದಲ್ಲಿ ಟೈಟಾನ್ಸ್ ತಂಡವೇ ಮೇಲುಗೈ ಸಾಧಿಸಿತ್ತು. ಆದರೆ ನಂತರ ತಿರುಗೇಟು ನೀಡುತ್ತ ಸಾಗಿದ ಬುಲ್ಸ್ ತಂಡ ಮೊದಲಾರ್ಧದ ಅಂತ್ಯದ ವೇಳೆಗೆ 14-12ರಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ನಾಯಕ ಪವನ್ ಶೆರಾವತ್ ಆರಂಭಿಕ ರೈಡ್‌ಗಳಲ್ಲಿ ವೈಫಲ್ಯ ಕಂಡಿದ್ದು ಬುಲ್ಸ್‌ಗೆ ಹಿನ್ನಡೆಯಾಗಿ ಪರಿಣಮಿಸಿತ್ತು. ಬೆಂಗಳೂರು ಪರ ಚಂದ್ರನ್ ರಂಜಿತ್ 3 ರೈಡ್, 6 ಬೋನಸ್ ಪಾಯಿಂಟ್ ಸೇರಿ ಒಟ್ಟು 9 ಅಂಕಗಳಿಸಿದರೆ, ಟೈಟಾನ್ಸ್ ಪರ ಅಂಕಿತ್ ಬೇನಿವಾಲ್ 10 ರೈಡ್ ಪಾಯಿಂಟ್ ಗಳಿಸಿ ಮಿಂಚಿದರು. ಆದರೆ ಜಿದ್ದಾಜಿದ್ದಿನ ಕಾದಾಟ ಕೊನೆಗೆ ಸಮಬಲ ಸಾಧಿಸಿ ಅಭಿಮಾನಿಗಳಿಗೆ ಕಬಡ್ಡಿ ರಸದೌತಣವನ್ನು ಉಣಬಡಿಸಿತು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ