ಪ್ರೊ ಕಬಡ್ಡಿ ಲೀಗ್ 2023 (Pro Kabaddi League 2023) ಇಂದು ಅಂದರೆ ಡಿಸೆಂಬರ್ 2 ರಿಂದ ಪ್ರಾರಂಭವಾಗಲಿದೆ. 10ನೇ ಆವೃತ್ತಿಯ ಮೊದಲ ದಿನ ಎರಡು ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಇಂದಿನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ತೆಲುಗು ಟೈಟಾನ್ಸ್ (Gujarat Giants vs Telugu Titans) ಮುಖಾಮುಖಿಯಾಗುತ್ತಿವೆ. ಹಾಗೆಯೇ ಎರಡನೇ ಪಂದ್ಯ ಯು ಮುಂಬಾ ಮತ್ತು ಯುಪಿ ಯೋಧಾ (U-Mumba vs UP Yoddhas) ನಡುವೆ ನಡೆಯಲಿದೆ. ಪ್ರೊ ಕಬಡ್ಡಿ ಲೀಗ್ 2023ರಲ್ಲಿ ಒಟ್ಟು 132 ಪಂದ್ಯಗಳು ನಡೆಯಲಿದ್ದು, ಲೀಗ್‌ನ 10 ನೇ ಸೀಸನ್ ಇಂದಿನಿಂದ ಅಂದರೆ ಡಿಸೆಂಬರ್ 2 ರಿಂದ ಆರಂಭವಾಗಿ 21 ಫೆಬ್ರವರಿ 2024 ರವರೆಗೆ ನಡೆಯಲಿದೆ. ಈ ಲೀಗ್ ತನ್ನ ಹಳೆಯ ಸ್ವರೂಪಕ್ಕೆ ಮರಳಿದ್ದು, ಅಂದರೆ ಈಗ 12 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್‌ನ ಲೈವ್ ಸ್ಟ್ರೀಮಿಂಗ್ ಅನ್ನು ಉಚಿತವಾಗಿ ಯಾವಾಗ, ಎಲ್ಲಿ ಮತ್ತು ಹೇಗೆ ವೀಕ್ಷಿಸಬಹುದು ಎಂಬುದನ್ನು ನೋಡುವುದಾದರೆ..
ಪ್ರೊ ಕಬಡ್ಡಿ ಲೀಗ್ 2023 ರ ಮೊದಲ ದಿನ ಅಂದರೆ ಡಿಸೆಂಬರ್ 2 ರಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ತೆಲುಗು ಟೈಟಾನ್ಸ್ ನಡುವೆ ಮತ್ತು ಎರಡನೇ ಪಂದ್ಯ ಯು ಮುಂಬಾ ಮತ್ತು ಯುಪಿ ಯೋಧಾ ನಡುವೆ ನಡೆಯಲಿದೆ.
ಪ್ರೊ ಕಬಡ್ಡಿ ಲೀಗ್‌ನ ಮೊದಲ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾದರೆ, ಎರಡನೇ ಪಂದ್ಯ ರಾತ್ರಿ 9 ಗಂಟೆಗೆ ನಡೆಯಲಿದೆ.
ಪ್ರೊ ಕಬಡ್ಡಿ ಲೀಗ್ ಮೊದಲ ದಿನದ ಎರಡೂ ಪಂದ್ಯಗಳನ್ನು ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾದಿಂದ ದಿ ಅರೆನಾದಲ್ಲಿ ಆಡಲಾಗುತ್ತದೆ.
ಪ್ರೊ ಕಬಡ್ಡಿ ಲೀಗ್ 2023 ಪಂದ್ಯಗಳ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ಎಲ್ಲಾ ಚಾನಲ್‌ಗಳಲ್ಲಿ ಅಂದರೆ, ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ 1 ತಮಿಳು, ಸ್ಟಾರ್ ಸ್ಪೋರ್ಟ್ಸ್ 1 ತೆಲುಗು, ಸ್ಟಾರ್ ಸ್ಪೋರ್ಟ್ಸ್ 1 ಕನ್ನಡ, ಸ್ಟಾರ್ ಸ್ಪೋರ್ಟ್ಸ್ 2 ನಲ್ಲಿ ಲಭ್ಯವಿರುತ್ತದೆ.
ಪ್ರೊ ಕಬಡ್ಡಿ ಲೀಗ್ 2023 ಪಂದ್ಯಗಳ ಉಚಿತ ಲೈವ್ ಸ್ಟ್ರೀಮಿಂಗ್ ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:01 am, Sat, 2 December 23