ಸರ್ಕಾರದ ಹುಸಿ ಭರವಸೆ, ಬಡತನ; ಜೀವನಕ್ಕಾಗಿ ಕೂಲಿ ಕಾರ್ಮಿಕಳಾದ ಅಂತರರಾಷ್ಟ್ರೀಯ ಕರಾಟೆ ಪಟು

Hardeep Kaur: ನಾನು ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುವ ಮೂಲಕ 300 ರಿಂದ 350 ರೂ. ಸಂಪಾಧಿಸಿ ನನ್ನ ಕುಟುಂಬವನ್ನು ಪೋಷಿಸುತ್ತಿದ್ದೇನೆ ಎಂದಿದ್ದಾರೆ.

ಸರ್ಕಾರದ ಹುಸಿ ಭರವಸೆ, ಬಡತನ; ಜೀವನಕ್ಕಾಗಿ ಕೂಲಿ ಕಾರ್ಮಿಕಳಾದ ಅಂತರರಾಷ್ಟ್ರೀಯ ಕರಾಟೆ ಪಟು
ಹರ್ದೀಪ್ ಕೌರ್
Follow us
ಪೃಥ್ವಿಶಂಕರ
|

Updated on: Jun 11, 2021 | 5:53 PM

ಒಂದು ಶತಕೋಟಿಗೂ ಹೆಚ್ಚು ಜನಸಂಖ್ಯೆಯೊಂದಿಗೆ ಭಾರತ ವಿಶ್ವದ ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಈಗಿಗ ಕ್ರೀಡಾ ಕ್ಷೇತ್ರದಲ್ಲಿ ಭರವಸೆಯ ಕ್ರೀಡಾಪಟುಗಳು ಹುಟ್ಟಿಕೊಳ್ಳುತ್ತಿದ್ದಾರೆ. ಅಂತಹವರಿಗೆ ಕ್ರೀಡಾ ಇಲಾಖೆ ಅವಶ್ಯಕವಾಗಿರುವ ಸವಲತ್ತುಗಳನ್ನು ಸಹ ನೀಡುತ್ತಿದೆ. ಆದರೆ ಇಲ್ಲೊಬ್ಬರು ಕರಾಟೆ ಪಟು ಸರ್ಕಾರದಿಂದ ಸರಿಯಾದ ಬೆಂಬಲ ಸಿಗದೆ ಜೀವನೋಪಾಯಕ್ಕಾಗಿ ಕೂಲಿ ಕಾರ್ಮಿಕರಾಗಿದ್ದಾರೆ. ಭಾರತದಲ್ಲಿ ಕ್ರಿಕೆಟ್​ಗೆ ಸಿಗುವಷ್ಟು ಬೆಂಬಲ ಇತರೆ ಕ್ರೀಡೆಗಳಿಗೆ ಸಿಗುತ್ತಿಲ್ಲ. ಇದರಿಂದಲೇ ಇತರ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿದ ಬಳಿಕವೂ ಆಟಗಾರರು ಬಡತನದ ಬೇಗೆಯ ಜೊತೆಗೆ ಅವಕಾಶಗಳು ಸಿಗದೇ ಸಂಕಷ್ಟಕ್ಕೆ ಸಿಲುಕುತ್ತಾರೆ. ಇತ್ತೀಚೆಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಗಳಲ್ಲಿ ಅದ್ಭುತ ಪ್ರದರ್ಶನದಿಂದ ಪದಕಗಳನ್ನು ಗೆದ್ದ ಹರ್ದೀಪ್ ಕೌರ್ ಅವರ ಪರಿಸ್ಥಿತಿ ಇದಕ್ಕೆ ಹೊರತಾಗಿಲ್ಲ. ಜೀವನ ನಿರ್ವಹಣೆಗಾಗಿ ಈ ಆಟಗಾರ್ತಿ ಈಗ ತಮ್ಮ ಹೆತ್ತವರೊಂದಿಗೆ ಕೂಲಿ ಕೆಲಸ ಮಾಡುತ್ತಿದ್ದಾರೆ.

ಸುಮಾರು 20 ಪದಕಗಳನ್ನು ಗೆದ್ದಿದ್ದಾರೆ ಪಂಜಾಬ್‌ನ ಮಾನ್ಸಾ ಜಿಲ್ಲೆಯ ಗುರ್ನೆಕಾಲನ್‌ನ 23 ವರ್ಷದ ಹರ್ದೀಪ್ ತನ್ನ ಕುಟುಂಬವನ್ನು ಪೋಷಿಸಲು ದಿನಗೂಲಿ ಕಾರ್ಮಿಕರಾಗಿದ್ದಾರೆ ದಿನಕ್ಕೆ ರೂ .300 ಗಳಿಸುವ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಸುಮಾರು 20 ಪದಕಗಳನ್ನು ಗೆದ್ದಿದ್ದಾರೆ. ಪ್ರಸ್ತುತ ದೈಹಿಕ ಶಿಕ್ಷಣದಲ್ಲಿ ಪಿಜಿ ಮಾಡುತ್ತಿರುವ ಹರ್ದೀಪ್ ಜೊತೆಗೆ, ಆಕೆಯ ಪೋಷಕರು ಸಹ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. 2018 ರಲ್ಲಿ ಮಲೇಷ್ಯಾದಲ್ಲಿ ನಡೆದ ಸ್ಪರ್ಧೆಗಳಲ್ಲಿ ಚಿನ್ನ ಗೆದ್ದ ಹರ್ದೀಪ್‌ಗೆ ಅಂದಿನ ಪಂಜಾಬ್ ಕ್ರೀಡಾ ಸಚಿವ ರಾಣಾ ಗುರ್ಮೀತ್ ಅವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದಾಗ್ಯೂ, ಆ ಭರವಸೆ ಇನ್ನೂ ಜಾರಿಗೆ ಬಂದಿಲ್ಲ. ಹರ್ದೀಪ್ ಎಷ್ಟು ಬಾರಿ ಕೆಲಸಕ್ಕಾಗಿ ಸರ್ಕಾರದ ಬಳಿ ಸಹಾಯ ಕೋರಿದ್ದರು ಅದು ಕಾರ್ಯರೂಪಕ್ಕೆ ಬರಲಿಲ್ಲ. ಹೀಗಾಗಿ ಈ ವೃತ್ತಿ ಆಯ್ದುಕೊಂಡಿದ್ದಾರೆ.

ಭತ್ತದ ಗದ್ದೆಗಳಲ್ಲಿ ಕಾರ್ಮಿಕ ಕೆಲಸ ಈ ಬಗ್ಗೆ ಮಾತನಾಡಿರುವ ಹರ್ದೀಪ್ ನಾವು ಬಡ ದಲಿತ ಕುಟುಂಬಕ್ಕೆ ಸೇರಿದವರು. ನಮಗೆ ಭೂಮಿ ಇಲ್ಲ. ಹೀಗಾಗಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡಬೇಕು. ನಾನು ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುವ ಮೂಲಕ 300 ರಿಂದ 350 ರೂ. ಸಂಪಾಧಿಸಿ ನನ್ನ ಕುಟುಂಬವನ್ನು ಪೋಷಿಸುತ್ತಿದ್ದೇನೆ ಎಂದಿದ್ದಾರೆ. ನಾನು ಪಟಿಯಾಲದಲ್ಲಿ ಡಿಪಿಇಡಿ ಓದುತ್ತಿದ್ದೇನೆ, ಮತ್ತು ನನ್ನ ಅಧ್ಯಯನ ಮತ್ತು ಪೋಷಕರನ್ನು ಬೆಂಬಲಿಸಲು, ನಾನು ಮನೆಕೆಲಸ ಮಾಡುತ್ತೇನೆ ಮತ್ತು ಈಗ ಭತ್ತದ ಗದ್ದೆಗಳಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು.

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ