French Open: ಫ್ರೆಂಚ್ ಓಪನ್ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ಪಿವಿ ಸಿಂಧು!
French Open: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್‌ನ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಸಿಂಧು ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಡೆನ್ಮಾರ್ಕ್‌ನ ಲೈನ್ ಕ್ರಿಸ್ಟೋಫರ್ಸನ್ ಅವರನ್ನು ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.
ಭಾರತದ ಸ್ಟಾರ್ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು, ಟೋಕಿಯೊ ಒಲಿಂಪಿಕ್ಸ್-2020 ನಲ್ಲಿ ಪದಕ ಗೆದ್ದ ನಂತರ ಮೊದಲ ಪ್ರಶಸ್ತಿಗಾಗಿ ಎದುರು ನೋಡುತ್ತಿದ್ದಾರೆ. ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್‌ನ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಸಿಂಧು ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಡೆನ್ಮಾರ್ಕ್‌ನ ಲೈನ್ ಕ್ರಿಸ್ಟೋಫರ್ಸನ್ ಅವರನ್ನು ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ. ಗುರುವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಸಿಂಧು 21-19, 21-9ರಲ್ಲಿ ವಿಶ್ವ ಶ್ರೇಯಾಂಕದ 24ನೇ ಶ್ರೇಯಾಂಕದ ಕ್ರಿಸ್ಟೋಫರ್ಸನ್ ಅವರನ್ನು ಸೋಲಿಸಿದರು. ಈ ಪಂದ್ಯ 37 ನಿಮಿಷಗಳ ಕಾಲ ನಡೆಯಿತು.
ಹಾಲಿ ವಿಶ್ವ ಚಾಂಪಿಯನ್ ಸಿಂಧು ಕ್ವಾರ್ಟರ್ ಫೈನಲ್‌ನಲ್ಲಿ ಎಂಟನೇ ಶ್ರೇಯಾಂಕದ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಎದುರಿಸಲಿದ್ದಾರೆ. ಅವರು ಕಳೆದ ವಾರ ಡೆನ್ಮಾರ್ಕ್ ಓಪನ್‌ನಲ್ಲಿ ಬುಸಾನನ್ ಅವರನ್ನು ಸೋಲಿಸಿದರು. ಪುರುಷರ ಡಬಲ್ಸ್‌ನಲ್ಲಿ ಐದನೇ ಶ್ರೇಯಾಂಕದ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ 15-21, 21-10, 21-19ರಲ್ಲಿ ಎಂಆರ್ ಅರ್ಜುನ್ ಮತ್ತು ಧ್ರುವ್ ಕಪಿಲ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟರು. ಭಾರತದ ಜೋಡಿ ಇದೀಗ ನಾಲ್ಕನೇ ಶ್ರೇಯಾಂಕದ ಮಲೇಷ್ಯಾದ ಜೋಡಿ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ಅವರನ್ನು ಎದುರಿಸಲಿದೆ.
ಇದು ಪುರುಷರ ಸಿಂಗಲ್ಸ್ ವಿಭಾಗದ ಸ್ಥಿತಿ ಆದರೆ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತ ನಿರಾಸೆ ಅನುಭವಿಸಿದೆ. ಈ ವಿಭಾಗದಲ್ಲಿ ಸೌರಭ್ ವರ್ಮಾ ಎರಡನೇ ಸುತ್ತಿನಲ್ಲಿ ಜಪಾನ್‌ನ ಕೆಂಟಾ ನಿಶಿಮೊಟೊ ವಿರುದ್ಧ 12-21, 9-21 ಸೆಟ್‌ಗಳಿಂದ ಸೋತ ನಂತರ ಸ್ಪರ್ಧೆಯಿಂದ ಹೊರಬಿದ್ದರು. ಯುವ ಆಟಗಾರ ಲಕ್ಷ್ಯ ಸೇನ್ ಗುರುವಾರ ಸಿಂಗಾಪುರದ ಲೋಹ್ ಕೀನ್ ಯೂ ವಿರುದ್ಧ ಸುಲಭ ಜಯ ಸಾಧಿಸಿ ಮೂರನೇ ಸುತ್ತಿಗೆ ಪ್ರವೇಶಿಸಿದರು.
ಡೆನ್ಮಾರ್ಕ್ ಓಪನ್‌ನಲ್ಲಿ ಸೋಲು ಸಿಂಧು ಅವರು ಭಾರತಕ್ಕೆ ಎರಡು ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಮಹಿಳಾ ಆಟಗಾರ್ತಿಯಾಗಿದ್ದಾರೆ. ಅವರು ಟೋಕಿಯೊ ಒಲಿಂಪಿಕ್ಸ್-2021 ರಲ್ಲಿ ಕಂಚಿನ ಪದಕವನ್ನು ಗೆದ್ದರು. ಈ ಹಿಂದೆ ರಿಯೋ ಒಲಿಂಪಿಕ್ಸ್-2016ರಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಟೋಕಿಯೊ ಒಲಿಂಪಿಕ್ಸ್ ನಂತರ, ಸಿಂಧು ಡೆನ್ಮಾರ್ಕ್ ಓಪನ್‌ನಿಂದ ಪುನರಾಗಮನ ಮಾಡಿದರು. ಆದರೆ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಡೆನ್ಮಾರ್ಕ್ ಓಪನ್‌ನಲ್ಲಿ ಅವರು ಕ್ವಾರ್ಟರ್ ಫೈನಲ್‌ನ ಆಚೆಗೆ ಹೋಗಲು ಸಾಧ್ಯವಾಗಲಿಲ್ಲ. ಅವರನ್ನು ಕೊರಿಯಾದ ಆನ್ ಸೆಯುಂಗ್ ಸೋಲಿಸಿದರು. ಈ ಪಂದ್ಯದಲ್ಲಿ ಕೊರಿಯಾ ಆಟಗಾರ 11-21, 12-21 ಅಂತರದಲ್ಲಿ ಗೆದ್ದರು. ಒಲಿಂಪಿಕ್ಸ್ ನಂತರ, ಸಿಂಧು ತನ್ನನ್ನು ರಿಫ್ರೆಶ್ ಮಾಡಿಕೊಳ್ಳಲು ಮೂರು ತಿಂಗಳು ವಿಶ್ರಾಂತಿಯಲ್ಲಿದ್ದರು.