ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್

|

Updated on: Dec 18, 2024 | 12:14 PM

R Ashwin Retirement: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರವಿಚಂದ್ರನ್ ಅಶ್ವಿನ್ 55 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 293 ವಿಕೆಟ್​ಗಳನ್ನು ಕಬಳಿಸಿದ್ದರು. ಅಂದರೆ ಕಿಂಗ್ ಕೊಹ್ಲಿ ನಾಯಕತ್ವದಲ್ಲಿ ಅಶ್ವಿನ್ ಅತ್ಯಂತ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಇದೀಗ 38ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಅಶ್ವಿನ್ ಟೀಮ್ ಇಂಡಿಯಾಗೆ ಗುಡ್ ಬೈ ಹೇಳಿದ್ದಾರೆ.

ಭಾರತ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಬಳಿಕ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ನಿವೃತ್ತಿ ಘೋಷಣೆಗೂ ಮುನ್ನ ರವಿಚಂದ್ರನ್ ಅಶ್ವಿನ್ ವಿರಾಟ್ ಕೊಹ್ಲಿಯೊಂದಿಗೆ ಚರ್ಚಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ 5ನೇ ದಿನದಾಟದ ವೇಳೆ ಅಶ್ವಿನ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಗಿ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅಶ್ವಿನ್ ತಮ್ಮ ನಿವೃತ್ತಿ ನಿರ್ಧಾರವನ್ನು ಕೊಹ್ಲಿ ಜೊತೆ ಹಂಚಿಕೊಂಡಿದ್ದಾರೆ.

ಆ ಬಳಿಕ ಒಂದಷ್ಟು ಹೊತ್ತು ಇಬ್ಬರೂ ಗಂಭೀರವಾಗಿ ಚರ್ಚಿಸುತ್ತಿರುವುದು ಕಂಡು ಬಂದಿದೆ. ಅಂತಿಮವಾಗಿ ವಿರಾಟ್ ಕೊಹ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ತಬ್ಬಿಕೊಳ್ಳುವ ಮೂಲಕ ಅಭಿನಂದಿಸಿದರು. ಇದೇ ವೇಳೆ ಭಾವುಕರಾದ ಅಶ್ವಿನ್ ತಮ್ಮ ಕಣ್ಣೀರು ಒರೆಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಇದೀಗ ಅಶ್ವಿನ್ ಅವರ ಈ ಭಾವನಾತ್ಮಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಂದಹಾಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ರವಿಚಂದ್ರನ್ ಅಶ್ವಿನ್ 55 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 293 ವಿಕೆಟ್​ಗಳನ್ನು ಕಬಳಿಸಿದ್ದರು. ಅಂದರೆ ಕಿಂಗ್ ಕೊಹ್ಲಿ ನಾಯಕತ್ವದಲ್ಲಿ ಅಶ್ವಿನ್ ಅತ್ಯಂತ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಇದೀಗ 38ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಅಶ್ವಿನ್ ಟೀಮ್ ಇಂಡಿಯಾಗೆ ಗುಡ್ ಬೈ ಹೇಳಿದ್ದಾರೆ.

 

Published on: Dec 18, 2024 12:14 PM