Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್‌ನ ಎರಡನೇ ದಿನದ ಆಟದಲ್ಲಿ ಈಗಾಗಲೇ ಟೀಮ್ ಇಂಡಿಯಾ ಅಬ್ಬರಿಸಿದೆ. ಇನ್ನು ಭಾರತದ ಆಲ್‌ರೌಂಡರ್ ಆರ್ ಅಶ್ವಿನ್ ಅವರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ತಮ್ಮ ತಂಡದ ಜರ್ಸಿಯನ್ನು ಒಣಗಿಸುವುದರಲ್ಲಿ ಬ್ಯೂಸಿಯಾಗಿದ್ದರು. ಈ ಬಗ್ಗೆ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ.

Video: ಮೈದಾನದಲ್ಲಿ ತಂಡದ ಜರ್ಸಿ ಒಣಗಿಸುತ್ತಿರುವ ಆರ್ ಅಶ್ವಿನ್
ಆರ್ ಅಶ್ವಿನ್

Updated on: Sep 21, 2024 | 12:40 PM

ಕ್ರಿಕೆಟ್ ಎಂದರೆ ಯಾರಿಗೆ ತಾನೇ ಇಷ್ಟ ಹೇಳಿ, ಪಂದ್ಯ ಆರಂಭವಾಗುತ್ತಿದೆ ಎಂದರೆ ಸಾಕು, ಕ್ರಿಕೆಟ್ ಅಭಿಮಾನಿಗಳು ಪಂದ್ಯ ನೋಡಲು ಕಾತುರತೆಯಿಂದ ಕಾಯುತ್ತಿರುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಮೈದಾನದಲ್ಲಿ ಆಟಗಾರರು ಕಿತ್ತಾಡಿಕೊಳ್ಳುವ ಹಾಗೂ ತಮಾಷೆಯೆನಿಸುವ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಇದೀಗ ಭಾರತದ ಆಲ್‌ರೌಂಡರ್ ಆರ್ ಅಶ್ವಿನ್ ಅವರು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಜರ್ಸಿಯನ್ನು ಒಣಗಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಬ್ಬರಿಸಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಆರ್ ಅಶ್ವಿನ್ ಅವರು ಸಂಕಷ್ಟದಿಂದ ಪಾರು ಮಾಡಿದ್ದಾರೆ. ಈಗಾಗಲೇ ಆರ್​ ಅಶ್ವಿನ್102 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ನಡುವೆ ಆರ್ ಅಶ್ವಿನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಮೈದಾನದಲ್ಲಿ ಸಮವಸ್ತ್ರ ಒಣಗಿಸುವ ವಿಡಿಯೋ ಇದಾಗಿದೆ.

Russhi ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಅಶ್ವಿನ್ ಅಣ್ಣ ಏನು ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅನುಭವಿ ಆಲ್‌ರೌಂಡರ್ ಒದ್ದೆ ಬಟ್ಟೆಯನ್ನು ಮೈದಾನದಲ್ಲಿ ಬಿಡಿಸುತ್ತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಅಭಿಮಾನಿಯೊಬ್ಬರು ಆರ್ ಅಶ್ವಿನ್ ಅವರನ್ನು ಹುರಿದುಂಬಿಸುತ್ತಿದ್ದಾರೆ.

ಇದನ್ನೂ ಓದಿ: ಬಡವರ ಅಕ್ಕಿ ಬಡವರಿಗೆ ಹೋಗ್ಬೇಕು ಅಷ್ಟೆ, ಅನ್ನ ಭಾಗ್ಯ ಅಕ್ಕಿ ಕಳ್ಳ ಮಾರಾಟ ಮಾಡುವಂತಿಲ್ಲ ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್​

ಈ ವಿಡಿಯೋವೊಂದು ಏಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ. ನೆಟ್ಟಿಗರೊಬ್ಬರು ‘ಇದರಲ್ಲಿ ಏನೂ ತಪ್ಪಿಲ್ಲ, ಬಟ್ಟೆಗಳನ್ನು ನೆಲದ ಮೇಲೆ ಒಣಗಿಸುತ್ತಿರುವುದು ಎಂದು ಹೇಳಿದ್ದಾರೆ. ಇನ್ನೊಬ್ಬರು ‘ಆರ್ ಅಶ್ವಿನ್ ಅಣ್ಣ ಏನು ಮಾಡುತ್ತಿದ್ದಾರೆ ಎಂದು ತಮಾಷೆಯಾಗಿಯೇ ಕಾಮೆಂಟ್ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ