R Praggnanandhaa: ವಿಶ್ವದ ನಂ.1 ಚೆಸ್​ ಚುತುರನಿಗೆ ಸೋಲುಣಿಸಿದ ಆರ್​. ಪ್ರಜ್ಞಾನಂದ

R Praggnanandhaa: ಭಾರತದ ಚೆಸ್ ಚತುರ ಆರ್​. ಪ್ರಜ್ಞಾನಂದ ಅವರು 2024 ರ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್‌ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರಿಗೆ ಸೋಲುಣಿಸಿದ್ದರು. ಈ ಗೆಲುವಿನ ಮೂಲಕ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರನ್ನು ಹಿಂದಿಕ್ಕಿ ಆರ್​. ಪ್ರಜ್ಞಾನಂದ ಭಾರತದ ಅಗ್ರ ಶ್ರೇಯಾಂಕಿತ ಚೆಸ್ ಪಟುವಾಗಿ ಹೊರಹೊಮ್ಮಿದ್ದರು. ಇದೀಗ ವಿಶ್ವದ ನಂಬರ್ 1 ಸ್ಪರ್ಧಿಗೆ ಸೋಲುಣಿಸಿ ಮಿಂಚಿದ್ದಾರೆ.

R Praggnanandhaa: ವಿಶ್ವದ ನಂ.1 ಚೆಸ್​ ಚುತುರನಿಗೆ ಸೋಲುಣಿಸಿದ ಆರ್​. ಪ್ರಜ್ಞಾನಂದ
R Praggnanandhaa
Follow us
|

Updated on: May 30, 2024 | 7:45 AM

ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ (R Praggnanandhaa) ವಿಶ್ವದ ನಂಬರ್ 1 ಚದುರಂಗ ಚತುರ ಮ್ಯಾಗ್ನಸ್ ಕಾರ್ಲ್‌ಸೆನ್ ಅವರಿಗೆ ಸೋಲುಣಿಸಿದ್ದಾರೆ. ನಾರ್ವೆ ಚೆಸ್ ಟೂರ್ನಿಯ ಕ್ಲಾಸಿಕಲ್ ಗೇಮ್​ನ ಮೂರನೇ ಸುತ್ತಿನಲ್ಲಿ ಕಾರ್ಲ್​ಸೆನ್ ವಿರುದ್ಧ ಗೆಲ್ಲುವ ಮೂಲಕ ಪ್ರಜ್ಞಾನಂದ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ 2023 ರಲ್ಲಿ ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಆರ್​. ಪ್ರಜ್ಞಾನಂದ ವಿರುದ್ಧ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದರು. ಅಲ್ಲದೆ ಚೊಚ್ಚಲ ಬಾರಿಗೆ ವಿಶ್ವ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿದ್ದ ಪ್ರಜ್ಞಾನಂದ ಅವರ ಕನಸಿಗೆ ಅಡ್ಡಿಯಾಗಿದ್ದರು.

ಇದೀಗ ಕ್ಲಾಸಿಕಲ್ ಗೇಮ್​ನಲ್ಲಿ ಮೊದಲ ಬಾರಿಗೆ ಮ್ಯಾಗ್ನಸ್ ಕಾರ್ಲ್‌ಸೆನ್​ಗೆ ಸೋಲುಣಿಸುವಲ್ಲಿ ಆರ್​. ಪ್ರಜ್ಞಾನಂದ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಳೆಯ ಸೋಲಿನ ಲೆಕ್ಕ ಚುಕ್ತಾ ಮಾಡಿದ್ದಾರೆ. ಹಾಗೆಯೇ ಈ ಗೆಲುವಿನೊಂದಿಗೆ ಪ್ರಜ್ಞಾನಂದ ಮುನ್ನಡೆ ಸಾಧಿಸಿದರೆ, ಕಾರ್ಲ್​ಸೆನ್ ಹಿನ್ನಡೆ ಅನುಭವಿಸಿದ್ದಾರೆ.

ಅದರಂತೆ ಪ್ರಜ್ಞಾನಂದ 9 ಅಂಕಗಳಲ್ಲಿ 5.5 ಪಾಯಿಂಟ್ಸ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದು, ಅಮೆರಿಕದ ಗ್ರ್ಯಾಂಡ್‌ಮಾಸ್ಟರ್ ಫ್ಯಾಬಿಯೊ ಕರುವಾನಾ ಅವರು ಬುಧವಾರ ಜಿಎಂ ಡಿಂಗ್ ಲಿರೆನ್ ವಿರುದ್ಧ ಗೆದ್ದ ನಂತರ ಮೂರು ಪೂರ್ಣ ಅಂಕಗಳನ್ನು ಪಡೆದು ಎರಡನೇ ಸ್ಥಾನಕ್ಕೇರಿದ್ದಾರೆ. ಇದೇ ವೇಳೆ ಮ್ಯಾಗ್ನಸ್ ಕಾರ್ಲ್‌ಸೆನ್ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.

ವೈಶಾಲಿ ಉತ್ತಮ ಪ್ರದರ್ಶನ:

ನಾರ್ವೆ ಚೆಸ್ ಓಪನ್ ಮಹಿಳಾ ವಿಭಾಗದಲ್ಲಿ ಪ್ರಜ್ಞಾನಂದ ಅವರ ಸಹೋದರಿ ಆರ್ ವೈಶಾಲಿ ಕೂಡ ಉತ್ತಮ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಗಳವಾರ ನಡೆದ ಪಂದ್ಯದಲ್ಲಿ ಕೋನೇರು ಹಂಪಿ ಅವರನ್ನು ಸೋಲಿಸಿ ಮುನ್ನಡೆ ಸಾಧಿಸಿದರೆ, ಆ ಬಳಿಕ ಜಿಎಂ ಅನ್ನಾ ಮುಜಿಚುಕ್ ಅವರೊಂದಿಗೆ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಮಹಿಳಾ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಾರ್ವೆ ಚೆಸ್ ಟೂರ್ನಿ – 3 ಸುತ್ತುಗಳ ಬಳಿಕ ಪಾಯಿಂಟ್ಸ್​:

ಪುರುಷರ ವಿಭಾಗ:

  • 1. ಆರ್ ಪ್ರಜ್ಞಾನಂದ – 5.5
  • 2. ಫ್ಯಾಬಿಯೊ ಕರುವಾನಾ – 5
  • 3. ಹಿಕಾರು ನಕಮುರಾ – 4
  • 4. ಅಲಿರೆಜಾ ಫಿರೋಜ್ಜಾ – 3.5
  • 5. ಮ್ಯಾಗ್ನಸ್ ಕಾರ್ಲ್​ಸೆನ್ – 3
  • 6. ಡಿಂಗ್ ಲಿರೆನ್ – 2.5

ಇದನ್ನೂ ಓದಿ:  Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಮಹಿಳಾ ವಿಭಾಗ:

  • 1. ಆರ್ ವೈಶಾಲಿ – 5.5
  • 2. ಜು ವೆಂಜುನ್- 4.5
  • 3. ಲೀ ಟಿಂಗ್ಜಿ- 4
  • 4. ಪಿಯಾ ಕ್ರಾಮ್ಲಿಂಗ್ – 3
  • 4. ಕೊನೇರು ಹಂಪಿ – 3
  • 4. ಅನ್ನಾ ಮುಜಿಚುಕ್ – 3
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್