AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಆ ಒಂದು ಪದ ಹೇಳೋಕೆ ನಾಚಿಕೊಂಡ ರಾಹುಲ್ ದ್ರಾವಿಡ್

Rahul Dravid: ಇದೀಗ ದ್ರಾವಿಡ್ ಅವರ ಸುದ್ದಿಗೋಷ್ಠಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಂದಹಾಗೆ ರಾಹುಲ್ ದ್ರಾವಿಡ್ ಬಳಸಲು ಹಿಂಜರಿದ ಪದ ಯಾವುದೆಂಬ ಕುತೂಹಲ ನಿಮ್ಮಲ್ಲಿದ್ದರೆ ಉತ್ತರ ಇಲ್ಲಿದೆ.

IND vs PAK: ಆ ಒಂದು ಪದ ಹೇಳೋಕೆ ನಾಚಿಕೊಂಡ ರಾಹುಲ್ ದ್ರಾವಿಡ್
Rahul Dravid
TV9 Web
| Edited By: |

Updated on:Sep 04, 2022 | 5:03 PM

Share

Asia Cup 2022: ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕಾಣಿಸಿಕೊಂಡಿದ್ದರು. ಇದೇ ವೇಳೆ ದ್ರಾವಿಡ್ ಉಭಯ ತಂಡಗಳ ಸಾಮರ್ಥ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಂದಿಟ್ಟರು. ಈ ವೇಳೆ ಪಾಕ್ ಪತ್ರಕರ್ತರು ಕೇಳಿದ, ಬೌಲಿಂಗ್ ಲೈನ್ ಅಪ್ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್, ಪಾಕಿಸ್ತಾನ್ ತಂಡವು ಉತ್ತಮ ಬೌಲರ್​ಗಳನ್ನು ಹೊಂದಿದ್ದಾರೆ ಎಂಬುದನ್ನು ನಾನು ಗೌರವಿಸುತ್ತೇನೆ. ಹಾಗೆಯೇ ನಮ್ಮಲ್ಲೂ ಅತ್ಯುತ್ತಮ ಬೌಲರ್​ಗಳಿದ್ದಾರೆ. ಏಕೆಂದರೆ ನಮ್ಮ ಬೌಲರ್​ಗಳೂ ಕೂಡ ಫಲಿತಾಂಶವನ್ನು ನಿರ್ಧರಿಸುವಂತಹ ಪ್ರದರ್ಶನ ನೀಡಿದ್ದಾರೆ ಎಂದರು.

ಅಷ್ಟೇ ಅಲ್ಲದೆ ಮಾತು ಮುಂದುವರೆಸಲು ಮುಂದಾದ ದ್ರಾವಿಡ್ ಆ ಒಂದು ಪದವನ್ನು ಬಳಸಲು ಹಿಂಜರಿದರು. ನಾನು ಆ ಒಂದು ಪದವನ್ನು ಬಳಸಲು ಬಯಸಿದ್ದೆ. ಆದರೆ ಅದನ್ನು ಹೇಳಲು ಸಾಧ್ಯವಿಲ್ಲ ಎಂದೇಳಿ ದ್ರಾವಿಡ್ ನಗಲಾರಂಭಿಸಿದರು. ಇದೇ ವೇಳೆ ಪತ್ರಕರ್ತರು ಕೂಡ ಅದು ಅತಿರಂಜಿತ ಪದವೇ ಎಂದು ಪ್ರಶ್ನಿಸಿದರು. ಇದಕ್ಕೆ ನಗುತ್ತಾ ಉತ್ತರಿಸಿದ ದ್ರಾವಿಡ್, ಹೌದು, S​ ನಿಂದ ಪ್ರಾರಂಭವಾಗುತ್ತದೆ ಎಂದರು. ಅಲ್ಲದೆ ಅದು ನಾಲ್ಕು ಅಕ್ಷರಗಳ ಪದ ಎಂಬ ಕ್ಲೂ ಕೂಡ ನೀಡಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆ ಬಳಿಕ ಟೀಮ್ ಇಂಡಿಯಾ ಬೌಲಿಂಗ್ ಅಟ್ಯಾಕ್ ಗ್ಲಾಮರಸ್ ಆಗಿ ಕಾಣದೇ ಇರಬಹುದು. ಇದಾಗ್ಯೂ ಫಲಿತಾಂಶ ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ದ್ರಾವಿಡ್ ವಿಶ್ಲೇಷಣೆ ನೀಡಿದರು. ಇದರ ಬೆನ್ನಲ್ಲೇ ರಾಹುಲ್ ದ್ರಾವಿಡ್ ತಮ್ಮ ಮಾತಿನ ನಡುವೆ ಬಳಸಲು ಮುಂದಾಗಿದ್ದ ಪದ ಯಾವುದೆಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಹೀಗಾಗಿಯೇ ಇದೀಗ ದ್ರಾವಿಡ್ ಅವರ ಸುದ್ದಿಗೋಷ್ಠಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಂದಹಾಗೆ ರಾಹುಲ್ ದ್ರಾವಿಡ್ ಬಳಸಲು ಹಿಂಜರಿದ ಪದ ಯಾವುದೆಂಬ ಕುತೂಹಲ ನಿಮ್ಮಲ್ಲಿದ್ದರೆ ಉತ್ತರ-  SE_Y (ದ್ರಾವಿಡ್ ಆ ಪದವನ್ನು ಬಳಸದಿರುವ ಕಾರಣ ಒಂದು ಅಕ್ಷರವನ್ನು ಹೊರತುಪಡಿಸಿ ಇಲ್ಲಿ ನೀಡಲಾಗಿದೆ).

Published On - 5:00 pm, Sun, 4 September 22

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​