AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಿ ಟೂರ್ನಿಯಲ್ಲಿ ರಜತ್ ಪಾಟಿದಾರ್ ಸಿಡಿಲಬ್ಬರ; 48 ಎಸೆತಗಳಲ್ಲಿ 135 ರನ್ ಚಚ್ಚಿದ ಆರ್​ಸಿಬಿ ನಾಯಕ

2026ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ ರಜತ್ ಪಾಟಿದಾರ್ ಕೇವಲ 48 ಎಸೆತಗಳಲ್ಲಿ ಅಜೇಯ 135 ರನ್ ಬಾರಿಸಿ ಮಿಂಚಿದರು. ಅವರ ಈ ಸ್ಫೋಟಕ ಟಿ20 ಶತಕದ ನೆರವಿನಿಂದ ಮಧ್ಯಪ್ರದೇಶ ತಂಡ ಅಸ್ಸಾಂ ವಿರುದ್ಧ 131 ರನ್‌ಗಳಿಂದ ಭರ್ಜರಿ ಜಯ ಸಾಧಿಸಿತು. ಗಾಯದಿಂದ ಚೇತರಿಸಿಕೊಂಡು ಬಂದ ಪಾಟಿದಾರ್ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಇನ್ನಿಂಗ್ಸ್ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.

ದೇಶಿ ಟೂರ್ನಿಯಲ್ಲಿ ರಜತ್ ಪಾಟಿದಾರ್ ಸಿಡಿಲಬ್ಬರ; 48 ಎಸೆತಗಳಲ್ಲಿ 135 ರನ್ ಚಚ್ಚಿದ ಆರ್​ಸಿಬಿ ನಾಯಕ
Rajat Patidar
ಪೃಥ್ವಿಶಂಕರ
|

Updated on: Nov 16, 2026 | 3:23 PM

Share

2026ರ ದೇಶೀಯ ಟಿ20 ಟೂರ್ನಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಮಧ್ಯಪ್ರದೇಶ ತಂಡದ ನಾಯಕ ರಜತ್ ಪಾಟಿದಾರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್‌ಗಳ ಬೆವರಿಳಿಸಿದ್ದಾರೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಕೇವಲ 48 ಎಸೆತಗಳನ್ನು ಎದುರಿಸಿದ ಪಾಟಿದಾರ್ ಅಜೇಯ 135 ರನ್ ಬಾರಿಸಿದರು. ಪಾಟಿದರ್ ಅವರ ಈ ಶತಕದ ನೆರವಿನಿಂದ ಮಧ್ಯಪ್ರದೇಶ ತಂಡ, ಅಸ್ಸಾಂ ತಂಡವನ್ನು 131 ರನ್​ಗಳಿಂದ ಮಣಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಧ್ಯಪ್ರದೇಶ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 250 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ತಂಡದ ಪರ ನಾಯಕ ಪಾಟಿದಾರ್ ಶತಕದ ಇನ್ನಿಂಗ್ಸ್ ಆಡಿದರು. ಇದು ಪಾಟಿದರ್ ಅವರ ಟಿ20 ವೃತ್ತಿಜೀವನದ ಎರಡನೇ ಶತಕವಾಗಿದೆ. ಟೂರ್ನಿಯ ಮೊದಲ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಿದ್ದ ಅವರು, 29 ಎಸೆತಗಳಲ್ಲಿ ಅಜೇಯ 36 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

48 ಎಸೆತಗಳಲ್ಲಿ 135 ರನ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಮಧ್ಯಪ್ರದೇಶ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಕೇವಲ 7.4 ಓವರ್‌ಗಳಲ್ಲಿ 57 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರೀಸ್‌ಗೆ ಬಂದ ನಾಯಕ ರಜತ್ ಪಾಟಿದಾರ್ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಅಸ್ಸಾಂ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಅವರು ಸಿಕ್ಸರ್ ಹಾಗೂ ಬೌಂಡರಿಗಳ ಸುರಿಮಳೆಗೈದರು. ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದ ಪಾಟಿದಾರ್, ಕೊನೆಯವರೆಗೂ ಅಜೇಯರಾಗಿ ಉಳಿದು 48 ಎಸೆತಗಳಲ್ಲಿ 135 ರನ್ ಚಚ್ಚಿದರು.

ತಮ್ಮ ಸ್ಫೋಟಕ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಹಾಗೂ 13 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದರು. ಕೇವಲ ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕವೇ 110 ರನ್ ಗಳಿಸಿ ಅಬ್ಬರಿಸಿದರು. ಮತ್ತೊಂದೆಡೆ ಶಿವಾಂಗ್ ಕುಮಾರ್ ಕೂಡ 61 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಇವರಿಬ್ಬರ ಆಟದ ನೆರವಿನಿಂದ ಮಧ್ಯಪ್ರದೇಶ ತಂಡ 250 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಒಂದೇ ವರ್ಷದಲ್ಲಿ 400 ಸಿಕ್ಸರ್; ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ವಿಶ್ವದಾಖಲೆ

ಭಾರತ ಎ ತಂಡದಿಂದ ಹಿಂದೆ ಸರಿದಿದ್ದ ಪಾಟಿದಾರ್

ಈ ಪಂದ್ಯಕ್ಕೂ ಮುನ್ನ ರಜತ್ ಪಾಟಿದಾರ್ ಎಸಿಸಿ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಟೂರ್ನಿಗಾಗಿ ಪ್ರಕಟಿಸಿದ್ದ ಭಾರತ ಎ ತಂಡದಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ನವೆಂಬರ್ 19ರಿಂದ ದೋಹಾದಲ್ಲಿ ಆರಂಭವಾಗಲಿರುವ ಈ ಟೂರ್ನಿಗೆ ಆಯ್ಕೆಯಾಗಿದ್ದರೂ, ಗಾಯದ ನಿರ್ವಹಣೆಯ ಕಾರಣದಿಂದ 50 ಓವರ್‌ಗಳ ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐಗೆ ಮಾಹಿತಿ ನೀಡಿದ್ದರು. ಆದರೆ ಟಿ20 ಕ್ರಿಕೆಟ್‌ಗೆ ಮರಳಿರುವ ಪಾಟಿದಾರ್ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಸ್ಸಾಂ ವಿರುದ್ಧದ ಈ ಅಮೋಘ ಇನ್ನಿಂಗ್ಸ್ ಮೂಲಕ ತಮ್ಮ ಸ್ಫೋಟಕ ಆಟದ ಮೂಲಕ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
'ಸಿಎಂ ಸೇರಿ ತನ್ನ ಫೋನ್​​ ಕೂಡ ಕದ್ದಾಲಿಕೆ ಆಗುತ್ತವೆ': ಪ್ರಿಯಾಂಕ್​​ ಖರ್ಗೆ
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟ