ಈ ವ್ಯವಸ್ಥೆಯನ್ನು ಬದಲಾಯಿಸಬೇಕು.. 2 ಹೆಣ್ಣು ಮಕ್ಕಳ ತಂದೆಯಾಗಿ ನನಗೆ ಆತಂಕ ಶುರುವಾಗಿದೆ; ಕ್ರಿಕೆಟಿಗ ಆರ್. ಅಶ್ವಿನ್

R Ashwin: ಶಾಲಾ ಶಿಕ್ಷಕರ ಬಂಧನದ ಪ್ರಕರಣವನ್ನು ನೋಡಿದರೆ, ಭವಿಷ್ಯದಲ್ಲಿ ನಮ್ಮ ಸುತ್ತ ಇಂತಹ ಘಟನೆಗಳನ್ನು ತಡೆಗಟ್ಟಲು, ನಾವು ಕ್ರಮ ಕೈಗೊಳ್ಳಬೇಕು.

ಈ ವ್ಯವಸ್ಥೆಯನ್ನು ಬದಲಾಯಿಸಬೇಕು.. 2 ಹೆಣ್ಣು ಮಕ್ಕಳ ತಂದೆಯಾಗಿ ನನಗೆ ಆತಂಕ ಶುರುವಾಗಿದೆ; ಕ್ರಿಕೆಟಿಗ ಆರ್. ಅಶ್ವಿನ್
ಆರ್. ಅಶ್ವಿನ್
Follow us
|

Updated on: May 26, 2021 | 3:35 PM

ಟೀಂ ಇಂಡಿಯಾ ಸ್ಪಿನ್ ಬೌಲರ್ ಆರ್ ಅಶ್ವಿನ್ ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯಾರಾಗಿರುತ್ತಾರೆ. ಅಲ್ಲದೆ ತಪ್ಪುಗಳ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದಾರೆ. ಈ ಬಾರಿ ಅವರು ತಮ್ಮ ಬಾಲ್ಯವನ್ನು ಕಳೆದ ಅದೇ ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇಬ್ಬರು ಬಾಲಕಿಯರ ಲೈಂಗಿಕ ಶೋಷಣೆ ಆರೋಪದ ಮೇಲೆ ಚೆನ್ನೈನ ಪಿಎಸ್‌ಬಿಬಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ. ಇದರಿಂದ ಅಶ್ವಿನ್ ತುಂಬಾ ಅಸಮಾಧಾನಗೊಂಡಿದ್ದು, ವ್ಯವಸ್ಥೆಯನ್ನು ಬದಲಾಯಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ತಾವು ಪ್ರಾಥಮಿಕ ವಿಧ್ಯಾಭ್ಯಾಸ ಮಾಡಿದ ಶಾಲೆ ಅಶ್ವಿನ್‌ಗೆ ಬಹಳ ವಿಶೇಷವಾಗಿದೆ. ಅಶ್ವಿನ್ ಕ್ರಿಕೆಟ್ ಪ್ರಯಾಣ ಪ್ರಾರಂಭವಾಗಿದ್ದು ಇದೇ ಶಾಲೆಯಿಂದ. ಇದರೊಂದಿಗೆ ಅವರು ಅದೇ ಶಾಲೆಯಲ್ಲಿ ಓದುತ್ತಿದ್ದ ಪತ್ನಿ ಪ್ರೀತಿಯನ್ನು ಭೇಟಿಯಾಗಿದ್ದು ಇಲ್ಲೆ. ಇಂತಹ ಪರಿಸ್ಥಿತಿಯಲ್ಲಿ, ಈ ಘಟನೆ ಬಗ್ಗೆ ತಿಳಿದ ಅಶ್ವಿನ್, ಟ್ವಿಟ್ಟರ್ನಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ವರದಿಗಳ ಪ್ರಕಾರ, ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಶಿಕ್ಷಕನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ವ್ಯವಸ್ಥೆಯನ್ನು ಬದಲಾಯಿಸುವ ಅವಶ್ಯಕತೆಯಿದೆ ದಿ ಸ್ಟಾರ್ ಆಫ್ ಸ್ಪಿನ್ನರ್, ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಶಾಲೆಗಳು, ಅದರಲ್ಲೂ ವಿಶೇಷವಾಗಿ ಪಿಎಸ್‌ಬಿಬಿಯಿಂದ ಬರುವ ಕಥೆಗಳನ್ನು ಕೇಳಿ ನಾನು ಹೃದಯ ವಿದ್ರಾವಕನಾಗಿದ್ದೆ, ಅಲ್ಲಿ ಅಧ್ಯಯನ ಮಾಡುವಾಗ, ಇಷ್ಟು ವರ್ಷಗಳಲ್ಲಿ ನಾನು ಇಂತಹ ಸುದ್ದಿಗಳನ್ನು ಕೇಳಿಲ್ಲ, ಆದರೆ ಈ ಸುದ್ದಿಯಿಂದ ನಾನು ತುಂಬಾ ಅಸಮಾಧಾನಗೊಂಡಿದ್ದೇನೆ. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ ಎಂದು ನನಗೆ ತಿಳಿದಿದೆ, ಆದರೆ ಈ ಸಮಯದಲ್ಲಿ ಜನರು ಮುಂದೆ ಬಂದು ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ.

ಪಿಎಸ್‌ಬಿಬಿಯ ಹಳೆಯ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಇಬ್ಬರು ಹೆಣ್ಣುಮಕ್ಕಳ ತಂದೆಯಾಗಿಯೂ ಕಳೆದ ಕೆಲವು ರಾತ್ರಿಗಳಿಂದ ನಾನು ತೊಂದರೆಗೀಡಾಗಿದ್ದೇನೆ ಎಂದು ಅಶ್ವಿನ್ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಶಾಲಾ ಶಿಕ್ಷಕರ ಬಂಧನದ ಪ್ರಕರಣವನ್ನು ನೋಡಿದರೆ, ಭವಿಷ್ಯದಲ್ಲಿ ನಮ್ಮ ಸುತ್ತ ಇಂತಹ ಘಟನೆಗಳನ್ನು ತಡೆಗಟ್ಟಲು, ನಾವು ಕ್ರಮ ಕೈಗೊಳ್ಳಬೇಕು ಮತ್ತು ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕಾಗಿದೆ ಎಂದು ಅಶ್ವಿನ್ ತಮ್ಮ ಆತಂಕವನ್ನು ಹೊರಹಾಕಿದ್ದಾರೆ.

ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು