ICC Test Rankings: ಆಲ್‌ರೌಂಡರ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ ಜಡೇಜಾ; ಬ್ಯಾಟಿಂಗ್ ಕೋಟಾದಲ್ಲಿ ಭಾರತೀಯರದ್ದೆ ಹವಾ

|

Updated on: Jun 09, 2021 | 9:14 PM

ICC Test Rankings: ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಮಣಿಸಿ ಜಡ್ಡು ಎರಡನೇ ಸ್ಥಾನಕ್ಕೆ ಏರಿದ್ದಾರೆ. 386 ರೇಟಿಂಗ್ ಪಾಯಿಂಟ್‌ಗಳೊಂದಿಗೆ ರವೀಂದ್ರ ಜಡೇಜಾ ಶ್ರೇಯಾಂಕದಲ್ಲಿ ಸೂಪರ್ ವೇಗದಲ್ಲಿ ಏರುತ್ತಿದ್ದಾರೆ.

ICC Test Rankings: ಆಲ್‌ರೌಂಡರ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ ಜಡೇಜಾ; ಬ್ಯಾಟಿಂಗ್ ಕೋಟಾದಲ್ಲಿ ಭಾರತೀಯರದ್ದೆ ಹವಾ
ರವೀಂದ್ರ ಜಡೇಜಾ
Follow us on

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ಬಿಡುಗಡೆ ಮಾಡಿದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಮಣಿಸಿ ಜಡ್ಡು ಎರಡನೇ ಸ್ಥಾನಕ್ಕೆ ಏರಿದ್ದಾರೆ. 386 ರೇಟಿಂಗ್ ಪಾಯಿಂಟ್‌ಗಳೊಂದಿಗೆ ರವೀಂದ್ರ ಜಡೇಜಾ ಶ್ರೇಯಾಂಕದಲ್ಲಿ ಸೂಪರ್ ವೇಗದಲ್ಲಿ ಏರುತ್ತಿದ್ದಾರೆ. ಜಡ್ಡು 386 ಅಂಕಗಳೊಂದಿಗೆ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್‌ಗಿಂತ ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟಿಗ ಜೇಸನ್ ಹೋಲ್ಡರ್ 423 ಅಂಕಗಳೊಂದಿಗೆ ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಭಾರತದ ಮೂವರು ಆಟಗಾರರು
ಈ ವರ್ಷದ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ 3 ನೇ ಟೆಸ್ಟ್ ಪಂದ್ಯದಲ್ಲಿ ಕೈ ಗಾಯದಿಂದಾಗಿ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ ಆಡಲಿಲ್ಲ. ಕಳೆದ 3 ಟೆಸ್ಟ್ ಪಂದ್ಯಗಳಲ್ಲಿ ಅಕ್ಷರ್ ಪಟೇಲ್ ಅದ್ಭುತ ಪ್ರದರ್ಶನದಿಂದಾಗಿ ಜಡೇಜಾ ಇಂಗ್ಲೆಂಡ್ ವಿರುದ್ಧದ 4 ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡರು.

ಏತನ್ಮಧ್ಯೆ, ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (814 ಪಾಯಿಂಟ್), ರಿಷಭ್ ಪಂತ್ (747) ಮತ್ತು ರೋಹಿತ್ ಶರ್ಮಾ (747) ಕ್ರಮವಾಗಿ 5, 6 ಮತ್ತು 7 ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ.