ನಿನ್ನ ಹಾಗೆ ಮೊನಚಾದ ಗಡ್ಡ ಬೆಳೆಸಲು ನನಗೆ ಸಲಹೆಕೊಡು; ಜಡೇಜಾ ಬಳಿ ವಿಶೇಷ ಬೇಡಿಕೆ ಇಟ್ಟ ಉತ್ತಪ್ಪ

ರಾಬಿನ್ ಉತ್ತಪ್ಪ ಅವರು ರವೀಂದ್ರ ಜಡೇಜಾಗೆ ಇನ್‌ಸ್ಟಾಗ್ರಾಮ್‌ಗೆ ಸಂಬಂಧಿಸಿದ ಸಲಹೆಗಳನ್ನು ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ. ಅದೇ ಸಮಯದಲ್ಲಿ, ಮೊನಚಾದ ಗಡ್ಡವನ್ನು ಬೆಳೆಸಲು ಜಡ್ಡು ಬಳಿ ಸಲಹೆಗಳನ್ನು ನೀಡುವಂತೆ ಕೇಳಿಕೊಂಡಿದ್ದಾರೆ.

ನಿನ್ನ ಹಾಗೆ ಮೊನಚಾದ ಗಡ್ಡ ಬೆಳೆಸಲು ನನಗೆ ಸಲಹೆಕೊಡು; ಜಡೇಜಾ ಬಳಿ ವಿಶೇಷ ಬೇಡಿಕೆ ಇಟ್ಟ ಉತ್ತಪ್ಪ
ರವೀಂದ್ರ ಜಡೇಜಾ ಮತ್ತು ರಾಬಿನ್ ಉತ್ತಪ್ಪ
Follow us
ಪೃಥ್ವಿಶಂಕರ
|

Updated on: May 15, 2021 | 6:36 PM

ಐಪಿಎಲ್ 2021 ರ ಸಮಯದಲ್ಲಿ ರವೀಂದ್ರ ಜಡೇಜಾ ಮತ್ತು ರಾಬಿನ್ ಉತ್ತಪ್ಪ ಇಬ್ಬರೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಈ ಸಮಯದಲ್ಲಿ ಇಬ್ಬರೂ ಒಟ್ಟಿಗೆ ಸಾಕಷ್ಟು ಸಮಯ ಕಳೆದಿದ್ದಾರೆ. ಈಗ ಈ ಇಬ್ಬರ ಸೋಷಿಯಲ್ ಮೀಡಿಯಾದಲ್ಲಿನ ಸಂಭಾಷಣೆ ಸಾಕಷ್ಟು ವೈರಲ್ ಆಗುತ್ತಿದೆ. ಇದರಲ್ಲಿ ರಾಬಿನ್ ಉತ್ತಪ್ಪ ಅವರು ರವೀಂದ್ರ ಜಡೇಜಾಗೆ ಇನ್‌ಸ್ಟಾಗ್ರಾಮ್‌ಗೆ ಸಂಬಂಧಿಸಿದ ಸಲಹೆಗಳನ್ನು ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ. ಅದೇ ಸಮಯದಲ್ಲಿ, ಮೊನಚಾದ ಗಡ್ಡವನ್ನು ಬೆಳೆಸಲು ಜಡ್ಡು ಬಳಿ ಸಲಹೆಗಳನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಈ ಕುರಿತು ಜಡೇಜಾ ಕೂಡ ತಮಾಷೆಯ ಹೇಳಿಕೆ ನೀಡಿ ಉತ್ತಪ್ಪ ಅವರ ಹ್ಯಾಶ್‌ಟ್ಯಾಗ್ ಅನ್ನು ಶ್ಲಾಘಿಸಿದ್ದಾರೆ.

ಜಡ್ಡುನನ್ನು ನೋಡಲು ಸಂತೋಷವಾಗುತ್ತದೆ ರವೀಂದ್ರ ಜಡೇಜಾ ಅವರನ್ನು ಹೊಗಳಿ ಮೇ 12 ರಂದು ರಾಬಿನ್ ಉತ್ತಪ್ಪ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಬರೆದಿದ್ದಾರೆ. ಇದರಲ್ಲಿ, ಅವರು ಅಭ್ಯಾಸದ ಸಮಯದಲ್ಲಿ ಜಡೇಜಾ ಅವರೊಂದಿಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಮೈದಾನದಲ್ಲಿ ಜಡ್ಡುನನ್ನು ನೋಡಲು ಯಾವಾಗಲೂ ಸಂತೋಷವಾಗುತ್ತದೆ. ಅವರು ಅದ್ಭುತ ಕ್ರೀಡಾಪಟು ಮತ್ತು ಕಳೆದ ಎರಡು ವರ್ಷಗಳಲ್ಲಿ ತಮ್ಮ ಆಟದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ. ಮೈದಾನದ ಒಳಗೆ ಮತ್ತು ಹೊರಗೆ ಜಡ್ಡು ಒಬ್ಬ ಅದ್ಭುತ ವ್ಯಕ್ತಿ ಎಂದು ಉತ್ತಪ್ಪ ಬರೆದುಕೊಂಡಿದ್ದಾರೆ. ಉತ್ತಪ್ಪ ಅವರ ಈ ಪೋಸ್ಟ್​ಗೆ ಜಡೇಜಾ ಕೂಡ ತಮಾಷೆಯಾಗಿ ಉತ್ತರಿಸಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೆ ಜಡೇಜಾ ಐಪಿಎಲ್ 2021 ರ ಅಮಾನತು ಕಾರಣ, ಎಲ್ಲಾ ಆಟಗಾರರು ಮನೆಗೆ ಮರಳಿದ್ದಾರೆ. ಆದರೆ ಜಡೇಜಾ ಈಗ ಇಂಗ್ಲೆಂಡ್ ಪ್ರವಾಸದ ಸಿದ್ಧತೆಯಲ್ಲಿ ನಿರತರಾಗಿದ್ದಾರೆ. ಇಲ್ಲಿ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಸೇರಿದಂತೆ ಆರು ಟೆಸ್ಟ್ ಪಂದ್ಯಗಳನ್ನು ಆಡಬೇಕಾಗಿದೆ. ಇದರಲ್ಲಿ ಜಡೇಜಾ ಪಾತ್ರ ಮುಖ್ಯವಾಗಲಿದೆ. ಅವರು ಪ್ರಸ್ತುತ ಬಾಲ್ ಮತ್ತು ಬ್ಯಾಟ್ ಎರಡರಲ್ಲೂ ಫಾರ್ಮ್‌ನಲ್ಲಿದ್ದಾರೆ ಮತ್ತು ಟೀಮ್ ಇಂಡಿಯಾದ ಹನ್ನೊಂದರ ಬಳಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಡೇಜಾ ಕೊನೆಯ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಟೆಸ್ಟ್‌ನಲ್ಲಿ ಭಾರತ ಪರ ಆಡಿದ್ದರು. ಇದರ ನಂತರ, ಹೆಬ್ಬೆರಳಿನ ಮುರಿತದಿಂದಾಗಿ ಅವರು ಕ್ರಿಕೆಟ್‌ನಿಂದ ದೂರವಾಗಿದ್ದರು. ಈ ಕಾರಣಕ್ಕಾಗಿ, ಅವರು ಇಂಗ್ಲೆಂಡ್ ವಿರುದ್ಧದ ತವರು ಸರಣಿಯಲ್ಲಿ ಆಡಲಿಲ್ಲ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ