AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Safety World Series 2021: ಇಂಡಿಯಾ ಲೆಜೆಂಡ್ಸ್ ತಂಡ ಸೇರಿದ ದಾವಣಗೆರೆ ಎಕ್ಸ್​ಪ್ರೆಸ್​ ಆರ್​. ವಿನಯ್​ ಕುಮಾರ್​

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ಟೀಂ ಇಂಡಿಯಾದ ಮಾಜಿ ವೇಗದ ಬೌಲರ್​ ವಿನಯ್ ಕುಮಾರ್ ಅವರು ರಸ್ತೆ ಸುರಕ್ಷತೆ ವಿಶ್ವ ಸರಣಿ 2021ಕ್ಕಾಗಿ ಇಂಡಿಯಾ ಲೆಜೆಂಡ್ಸ್ ತಂಡಕ್ಕೆ ಸೇರಿದ್ದಾರೆ. ಆರಂಭದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡದಲ್ಲಿ ಆಡುತ್ತಿದ್ದ ಜಹೀರ್ ಖಾನ್ ಈ ವರ್ಷ ತಂಡದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ವಿನಯ್​ ಅವರ ಸ್ಥಾನ ತುಂಬಲ್ಲಿದ್ದಾರೆ. ವಿನಯ್ ಕುಮಾರ್ ಫೆಬ್ರವರಿ 26 ರಂದು ಆಟದ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದರು. ನಿವೃತ್ತಿಯಾದ ಒಂದು ವಾರದ […]

Road Safety World Series 2021: ಇಂಡಿಯಾ ಲೆಜೆಂಡ್ಸ್ ತಂಡ ಸೇರಿದ ದಾವಣಗೆರೆ ಎಕ್ಸ್​ಪ್ರೆಸ್​ ಆರ್​. ವಿನಯ್​ ಕುಮಾರ್​
ವಿನಯ್​ ಕುಮಾರ್​
ಪೃಥ್ವಿಶಂಕರ
|

Updated on:Mar 04, 2021 | 12:46 PM

Share

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ಟೀಂ ಇಂಡಿಯಾದ ಮಾಜಿ ವೇಗದ ಬೌಲರ್​ ವಿನಯ್ ಕುಮಾರ್ ಅವರು ರಸ್ತೆ ಸುರಕ್ಷತೆ ವಿಶ್ವ ಸರಣಿ 2021ಕ್ಕಾಗಿ ಇಂಡಿಯಾ ಲೆಜೆಂಡ್ಸ್ ತಂಡಕ್ಕೆ ಸೇರಿದ್ದಾರೆ. ಆರಂಭದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡದಲ್ಲಿ ಆಡುತ್ತಿದ್ದ ಜಹೀರ್ ಖಾನ್ ಈ ವರ್ಷ ತಂಡದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ವಿನಯ್​ ಅವರ ಸ್ಥಾನ ತುಂಬಲ್ಲಿದ್ದಾರೆ. ವಿನಯ್ ಕುಮಾರ್ ಫೆಬ್ರವರಿ 26 ರಂದು ಆಟದ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದರು. ನಿವೃತ್ತಿಯಾದ ಒಂದು ವಾರದ ನಂತರ, ಕುಮಾರ್ ಅವರು ಮೈದಾನಕ್ಕೆ ಮತ್ತೆ ಮರಳಲಿದ್ದಾರೆ. ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2021 ರಲ್ಲಿ ಇಂಡಿಯಾ ಲೆಜೆಂಡ್ಸ್ ಪರ ಆಡುತ್ತಿದ್ದಾರೆ.

ದಾವಣಗೆರೆಯ ಬಲಗೈ ವೇಗಿ ಒಂದು ಟೆಸ್ಟ್, 31 ಏಕದಿನ ಮತ್ತು ಒಂಬತ್ತು ಟಿ 20ಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ವಿನಯ್ ಕುಮಾರ್ ತಮ್ಮ ವೃತ್ತಿಜೀವನದಲ್ಲಿ 181 ಟಿ20 ಪಂದ್ಯಗಳನ್ನು ಆಡಿದ್ದಾರೆ ಮತ್ತು 7.85 ರ ಸರಾಸರಿಯಲ್ಲಿ 194 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್‌ನಲ್ಲಿ ವಿನಯ್ ಕುಮಾರ್, ಕೋಲ್ಕತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಕೊಚ್ಚಿ ಟಸ್ಕರ್ಸ್ ಕೇರಳ ಪರ ಆಡಿದ್ದರು.

ಇಂಡಿಯಾ ಲೆಜೆಂಡ್ಸ್ ತಂಡವು ಪ್ರಥಮ ಸ್ಥಾನದಲ್ಲಿದೆ.. ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಮುನಾಫ್ ಪಟೇಲ್, ಮೊಹಮ್ಮದ್ ಕೈಫ್, ಮತ್ತು ಪ್ರಜ್ಞಾನ್ ಓಝಾ ಅವರಂತಹ ದೊಡ್ಡ ಆಟಗಾರರು ಸಹ ತಂಡದಲ್ಲಿದ್ದಾರೆ. ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2021 ಕ್ಕೆ ಹೋಗುವ ಪಾಯಿಂಟ್ಸ್ ಟೇಬಲ್‌ನಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವು ಪ್ರಥಮ ಸ್ಥಾನದಲ್ಲಿದೆ.

ಸಚಿನ್ ತೆಂಡೂಲ್ಕರ್ ನೇತೃತ್ವದ ಈ ತಂಡವು, ಕಳೆದ ವರ್ಷ ಶ್ರೀಲಂಕಾ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡವನ್ನು ಸೋಲಿಸಿತು. ಇಂಡಿಯಾ ಲೆಜೆಂಡ್ಸ್ ಮಾರ್ಚ್ 5 ರಂದು ರಾಯ್ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ಲೆಜೆಂಡ್ಸ್ ವಿರುದ್ಧ 2021 ರ ಆವೃತ್ತಿಯಲ್ಲಿ ಮೊದಲ ಪಂದ್ಯ ಆಡಲಿದೆ.

ಇದನ್ನೂ ಓದಿ: India vs England, 4th Test, Day 1, LIVE Score: ಇಂಗ್ಲೆಂಡ್​ಗೆ ಆರಂಭಿಕ ಆಘಾತ, ಪ್ರಮುಖ 3 ವಿಕೆಟ್​ ಪತನ

Published On - 12:45 pm, Thu, 4 March 21

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ