ಟೆನಿಸ್ | ಆಸ್ಟ್ರೇಲಿಯನ್ ಓಪನ್‌ನಿಂದ ದೂರ ಉಳಿಯುವ ನಿರ್ಧಾರ ಪ್ರಕಟಿಸಿದ ರೋಜರ್ ಫೆಡರರ್
ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ.
ಮೆಲ್ಬೋರ್ನ್: ವಿಶ್ವದ ಮಾಜಿ ನಂಬರ್ 1 ಟೆನಿಸ್ ತಾರೆ ರೋಜರ್ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ. ಇದುವರೆಗೆ 6 ಬಾರಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಸ್ವಿಸ್ ಟೆನಿಸ್ ತಾರೆ, ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
39 ವರ್ಷದ ಫೆಡರರ್ ಈ ವರ್ಷದ ಫೆಬ್ರವರಿಯಿಂದಲೇ ಟೆನಿಸ್ ಕೋರ್ಟ್‌ನಿಂದ ದೂರ ಉಳಿದಿದ್ದರು. ಆದಾಗ್ಯೂ, ಇತ್ತೀಚೆಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಿದ ಫೆಡರರ್, ಆಸ್ಟ್ರೇಲಿಯನ್ ಓಪನ್ಗಾಗಿ ದುಬೈನಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಿದ್ದರು. ಫೆ.8ರಂದು ಮೆಲ್ಬೋರ್ನ್‌ನಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯನ್ ಓಪನ್ ಎಂಟ್ರಿ ಪಟ್ಟಿಯಲ್ಲೂ ಸಹ ಅವರ ಹೆಸರನ್ನು ಪಟ್ಟಿ ಮಾಡಲಾಗಿತ್ತು. ಆದರೆ ಈಗ ಫೆಡರರ್ ಆಸ್ಟ್ರೇಲಿಯನ್ ಓಪನ್‌ನಿಂದ ಹಿಂದೆ ಸರಿದಿದ್ದಾರೆ.
ಫೆಡರರ್ ನೀಡಿದ ಕಾರಣ ಮೊಳಕಾಲು ಸರ್ಜರಿಗೆ ಒಳಪಟ್ಟಿರುವ ರೋಜರ್ ಫೆಡರರ್, ವಿಶ್ರಾಂತಿ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
‘ರೋಜರ್ ಫೆಡರರ್ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಟೆನಿಸ್ ಟೂರ್ನಿಯಿಂದ ದೂರ ಉಳಿದಿರುವುದು ಬೇಸರ ತಂದಿದೆ ಎಂದಿದ್ದಾರೆ. ಫೆಡರರ್ ಹೊರತುಪಡಿಸಿ ಉಳಿದ ಅಗ್ರ ಟೆನಿಸ್ ಆಟಗಾರರು ಆಸ್ಟ್ರೇಲಿಯನ್ ಓಪನ್‌ನಲ್ಲಿ ಭಾಗವಹಿಸಲಿದ್ದಾರೆ’ ಎಂದು ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಆಯೋಜನಾ ಸಮಿತಿಯ ಮುಖ್ಯಸ್ಥರು ಪ್ರತಿಕ್ರಿಯಿಸಿದ್ದಾರೆ.
Published On - 4:58 pm, Mon, 28 December 20